ಬಜ್ಜಿ, ಬೋಂಡ ಮಾರಾಟ ಮಾಡಿ ರಾಜ್ಯಾದ್ಯಂತ ಸಾರಿಗೆ ನೌಕರರ ಪ್ರತಿಭಟನೆ
ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಬೆಂಗಳೂರು, ಎ.2: ವೇತನ ಪರಿಷ್ಕರಣೆ, ಸರಕಾರಿ ನೌಕರರೆಂದು ಪರಿಗಣಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಸಾರಿಗೆ ನೌಕರರು ನಿನ್ನೆ(ಗುರುವಾರ)ಯಿಂದ ವಿನೂತನ ಪ್ರತಿಭಟನೆ ಆರಂಭಿಸಿದ್ದು, ಇಂದು(ಶುಕ್ರವಾರ) ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಜ್ಜಿ, ಬೋಂಡ ಮಾರುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರಿನ ಪ್ರತಿಭಟನೆ ವೇಳೆ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ಸಾರಿಗೆ ನೌಕರರು ತಮ್ಮ ಸಮಸ್ಯೆಗಳನ್ನು ತಾಳಿಕೊಳ್ಳಲಾಗದೆ ಕಳೆದ ಡಿಸೆಂಬರ್ ನಲ್ಲಿ ನಾಲ್ಕು ದಿನ ಬಸ್ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದೆವು. ಈ ವೇಳೆ ಸರಕಾರ ನಮ್ಮ ಸಮಸ್ಯೆಯನ್ನು ಪರಿಹರಿಸುವುದಾಗಿ ಭರವಸೆ ನೀಡಿತ್ತು. ಆದರೆ, ಈ ಸಂಬಂಧ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ಸಮಸ್ಯೆ ಪರಿಹಾರಕ್ಕೆ ಸರಕಾರದ ಬಳಿ ಹಲವು ಸಲ ಮನವಿ ಮಾಡಿದ್ದೇವೆ. ಆದರೂ ಸರಕಾರ ಸಾರಿಗೆ ನೌಕರರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಿದೆ. ಹೀಗಾಗಿ ನಿನ್ನೆಯಿಂದ ಹಂತ, ಹಂತವಾಗಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುತ್ತಿದೆ. ಎ.7ರಂದು ಸಂಚಾರ ವ್ಯವಸ್ಥೆಯನ್ನು ಸಂಪೂರ್ಣ ಬಂದ್ ಮಾಡಲಾಗುವುದು. ನಮಗೆ ಸಾರ್ವಜನಿಕರ ಬೆಂಬಲ ಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.






.jpg)
.jpg)

