6ರಿಂದ 9ನೇ ತರಗತಿ ಬಂದ್ ಮಾಡಿದ್ದು ಸರಿಯಲ್ಲ: ಕಾಮ್ಸ್ ಕಾರ್ಯದರ್ಶಿ ಶಶಿಕುಮಾರ್
ಬೆಂಗಳೂರು, ಎ.2: ಬಹುತೇಕ ಶಾಲೆಗಳಲ್ಲಿ ಕೋವಿಡ್ ಪ್ರಕರಣಗಳು ಕಂಡು ಬರದಿದ್ದರೂ ರಾಜ್ಯ ಸರಕಾರ ಏಕಾಏಕಿ 6ರಿಂದ 9ನೇ ತರಗತಿಗಳನ್ನು ಬಂದ್ ಮಾಡಿದ್ದು ಸರಿಯಾದ ಕ್ರಮವಲ್ಲವೆಂದು ಕಾಮ್ಸ್ ಖಾಸಗಿ ಶಾಲೆ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಾಲೆಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಹಾಗೂ ಕೆಲವು ಶಾಲೆಗಳಲ್ಲಿ ಪರೀಕ್ಷೆಗಳು ಮುಗಿದಿವೆ. ಕೆಲವು ಶಾಲೆಗಳಲ್ಲಿ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಲಾಗುತ್ತಿತ್ತು. ಆದರೆ, ರಾಜ್ಯ ಸರಕಾರ ಪರೀಕ್ಷೆಗೂ ಅವಕಾಶ ಮಾಡಿಕೊಡದೆ ತರಗತಿಗಳನ್ನು ಬಂದ್ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಸಚಿವ ಸುರೇಶ್‍ಕುಮಾರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮನವರಿಕೆ ಮಾಡಿಕೊಟ್ಟು, ಪರೀಕ್ಷೆ ನಡೆಸುವುದಕ್ಕೆ ಅವಕಾಶ ಮಾಡಿಕೊಡಬೇಕು. ಆ ನಂತರ ಬೇಕಾದರೆ ರಜೆ ಘೋಷಿಸಲಿ ಎಂದು ಅವರು ಮನವಿ ಮಾಡಿದ್ದಾರೆ.
Next Story





