Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 8 ತಿಂಗಳಿಂದ ಸಂಬಳ ನೀಡಿಲ್ಲ, ಪಡೆದ...

8 ತಿಂಗಳಿಂದ ಸಂಬಳ ನೀಡಿಲ್ಲ, ಪಡೆದ ಸಾಲವನ್ನೂ ಪಿಡಿಒ ಮರಳಿಸಿಲ್ಲ: ಪೌರ ಕಾರ್ಮಿಕ ಆರೋಪ

ವಾರ್ತಾಭಾರತಿವಾರ್ತಾಭಾರತಿ2 April 2021 11:50 PM IST
share
8 ತಿಂಗಳಿಂದ ಸಂಬಳ ನೀಡಿಲ್ಲ, ಪಡೆದ ಸಾಲವನ್ನೂ ಪಿಡಿಒ ಮರಳಿಸಿಲ್ಲ: ಪೌರ ಕಾರ್ಮಿಕ ಆರೋಪ

ಚಾಮರಾಜನಗರ, ಎ.2: ಜಿಲ್ಲೆಯ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತ್ ಏಕೈಕ ಪೌರಕಾರ್ಮಿಕನ ಬಳಿ ಸಾಲ ಪಡೆದು ಮರಳಿಸಿಲ್ಲ. ಅಷ್ಟು ಮಾತ್ರವಲ್ಲದೆ, ಆತನಿಗೆ ಎಂಟು ತಿಂಗಳಿಂದ ಸಂಬಳವನ್ನೂ ನೀಡದೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರು ಸತಾಯಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಗ್ರಾಪಂ ಅಭಿವೃದ್ಧಿ ಅಧಿಕಾರಿ ರಾಜಕುಮಾರ್ ಪಂಚಾಯತ್ ಅನುಮೋದಿತ ಪೌರಕಾರ್ಮಿಕ ಪಿ.ಮಹೇಶ್ ಬಳಿ 20 ಸಾವಿರ ರೂ. ಸಾಲ ಪಡೆದು ಮರಳಿಸದೇ ಸತಾಯಿಸುತ್ತಿದ್ದಾರೆ ಎನ್ನಲಾಗಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರು ತಿಂಗಳ ಹಿಂದೆ ಸ್ವಚ್ಛತಾ ಕೆಲಸಕ್ಕಾಗಿ ಹೆಚ್ಚುವರಿಯಾಗಿ ನಿಯೋಜಿಸಿದ್ದ ಕೊಂಡಿದ್ದ ನಾಲ್ಕು ಪೌರಕಾರ್ಮಿಕರಿಗೆ ದಿನಗೂಲಿ ಪಾವತಿಸಲು 20 ಸಾವಿರ ರೂ. ಪೌರಕಾರ್ಮಿಕನಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜ್‌ಕುಮಾರ್ ಸಾಲ ಪಡೆದುಕೊಂಡಿದ್ದಾರೆ. ಆದರೆ, ಈವರೆಗೂ ಮರಳಿಸಿಲ್ಲ. ಇದೀಗ ಸಾಲಕೊಟ್ಟ ಪೌರಕಾರ್ಮಿಕನ ಆರೋಗ್ಯ ಹದಗೆಟ್ಟು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

‘ಕೊಟ್ಟ ಹಣವನ್ನಾದರೂ ಕೊಡಿ ಅಥವಾ ಸಂಬಳವನ್ನಾದರೂ ನೀಡಿ’ ಎಂದು ಗೋಗರಿದರೂ ಪ್ರಯೋಜನವಾಗಿಲ್ಲ ಎನ್ನಲಾಗಿದೆ. 13 ದಿನದ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ಪೌರಕಾರ್ಮಿಕ ಮಹೇಶ್ ಅವರಿಗೆ ಪರಿಚಯಸ್ಥ ಪೌರಕಾರ್ಮಿಕರು ಉಚಿತವಾಗಿ ಈ ಹಿಂದೆ ಹರಿಣಿ ಶಸ್ತ್ರಚಿಕಿತ್ಸೆ ಮಾಡಿಸುವಲ್ಲಿ ನೆರವಾಗಿದ್ದಾರೆ. ಆದರೆ ಈಗ ಇತರ ಖರ್ಚುಗಳಿಗೆ ಹಣವಿಲ್ಲದೇ ಪರಿತಪಿಸುತ್ತಿದ್ದಾರೆ.

ಏಕೈಕ ಪೌರಕಾರ್ಮಿಕ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತ್‌ಗೆ ತಮ್ಮಡಗೇರಿ, ಪುದೂರು, ಆನೆಹೊಲ, ಸಾಲೂರು ಮಠದ ರಸ್ತೆ, ಜನತಾ ಕಾಲನಿ ಸೇರಿದಂತೆ 18 ಹಾಡಿಗಳು ಈ ಪಂಚಾಯತ್ ವ್ಯಾಪ್ತಿಗೆ ಒಳಪಡುತ್ತವೆ. ಈ ಎಲ್ಲ ಗ್ರಾಮಗಳ ಸ್ವಚ್ಛತೆ ಕೆಲಸ ಕಾರ್ಯಗಳಿಗೆ ಒಬ್ಬರೇ ಒಬ್ಬ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಏಳು ನೂರು ಜನರು ಇರುವ ಪ್ರದೇಶಕ್ಕೆ ಒಬ್ಬರು ಪೌರಕಾರ್ಮಿಕರು ನೇಮಕ ಮಾಡಿಕೊಳ್ಳಬೇಕು ಎಂಬ ನಿಯಮ ಇದೆ. ಆದರೆ, ಈ ನಿಯಮ ಕೇವಲ ದಾಖಲೆ ಪುಸ್ತಕದಲ್ಲಿ ಇದೆ ವಿನಃ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಪಿಡಿಒ ಮತ್ತು ಸಂಬಂಧಪಟ್ಟ ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂಟು ತಿಂಗಳಿಂದ ಸಂಬಳ ನೀಡಿಲ್ಲ. ಪಡೆದ ಸಾಲವನ್ನೂ ಈವರೆಗೂ ಮರಳಿಸಿಲ್ಲ. ಆರು ತಿಂಗಳಲ್ಲಿ ಒಮ್ಮೆಯೂ ಆರೋಗ್ಯ ತಪಾಸಣೆ ನಡೆಸಿಲ್ಲ. ಈಗ ಶಸ್ತ್ರಚಿಕಿತ್ಸೆ ಆಗಿ ಎಂಟು ದಿನ ಕಳೆದಿದೆ. ರಜೆ ಪಡೆದು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ಹೇಳಿ ಬಂದಿದ್ದರೂ ಪಿಡಿಒ ಅವರು ಕನಿಷ್ಠ ಆರೋಗ್ಯ ವಿಚಾರಿಸುವ ಸೌಜನ್ಯವನ್ನೂ ತೋರಿಲ್ಲ. ಕೊಟ್ಟ ಹಣವನ್ನು ವಾಪಸ್ ಮಾಡದೇ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಸದ್ಯ ಆರೋಗ್ಯ ಖರ್ಚುಗಳಿಗೆ ಹಣದ ಕೊರತೆಯಾಗಿ ತೊಂದರೆಗೆ ಸಿಲುಕಿದ್ದೇನೆ.
-ಪಿ.ಮಹೇಶ್, ಪೌರಕಾರ್ಮಿಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X