ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಪ್ರಧಾನ ಕಾರ್ಯದರ್ಶಿ ಮೌಲಾನಾ ವಲಿ ರಹ್ಮಾನಿ ನಿಧನ

ಹೊಸದಿಲ್ಲಿ: ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಮುಖ ವಿದ್ವಾಂಸರಾದ ಮೌಲಾನಾ ವಲಿ ರಹ್ಮಾನಿ ನಿಧನರಾಗಿದ್ದಾರೆಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಪ್ರಕಟನೆಯಲ್ಲಿ ತಿಳಿಸಿದೆ.
ಮೌಲಾನಾ ವಲಿ ರಹ್ಮಾನಿಯವರು ಒಂದು ವಾರಗಳ ಮುಂಚೆ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಆರೋಗ್ಯ ಪರಿಸ್ಥಿತಿಯಲ್ಲಿ ಯಾವುದೇ ಚೇತರಿಕೆ ಕಾಣದೇ ನಿಧನ ಹೊಂದಿದ್ದಾರೆಂದು ತಿಳಿದು ಬಂದಿದೆ.
ಈ ಕುರಿತು ಟ್ವಿಟರ್ ನಲ್ಲಿ ಪ್ರಕಟನೆ ಹೊರಡಿಸಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ "ಪ್ರಧಾನ ಕಾರ್ಯದರ್ಶಿ ಮೌಲಾನಾ ವಲಿ ರಹ್ಮಾನಿ ಸಾಬ್ ನಿಧನರಾಗಿದ್ದಾರೆ. ಇದು ಮುಸ್ಲಿಮ್ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ. ಎಲ್ಲರೂ ಪ್ರಾರ್ಥಿಸಬೇಕಾಗಿ ವಿನಂತಿಸುತ್ತಿದ್ದೇವೆ" ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಕಾರ್ಯದರ್ಶಿ ಮೌಲಾನಾ ಉಮ್ರೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Gen. Sec. Maulana Wali Rahmani sahab RA has expired. It is an irreparable loss for the entire Muslim Ummah. Appeal for prayers and patience to all Muslims. Indeed to Allah we belong and to Him we return. @MaulanaUmrain, Secretary AIMPLB
— All India Muslim Personal Law Board (@AIMPLB_Official) April 3, 2021