ಡ್ರಗ್ಸ್ ಪೆಡ್ಲರ್‍ಗಳ ಬಂಧನ: 10 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು, ಎ.3: ಮಾದಕ ವಸ್ತುಗಳ ಸಾಗಣೆ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ಡ್ರಗ್ಸ್ ಪೆಡ್ಲರ್‍ಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 10 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಜಯನಗರದ 7ನೆ ಬ್ಲಾಕ್ ನಿವಾಸಿ ಜೇಡನ್‍ಸೌದ್(22), ನಾಗರಾಜ್ ರಾವ್(23) ಬಂಧಿತ ಆರೋಪಿಗಳಾಗಿದ್ದು, ಇವರಿಂದ 10ಲಕ್ಷ ರೂ. ಮೌಲ್ಯದ 100 ಎಲ್‍ಎಸ್‍ಡಿ ಪೇಪರ್, 100 ಎಕ್ಸಟೇಸಿ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಆರೋಪಿಗಳು ಅನೂಜ್ ಮತ್ತು ಹರ್ಷವರ್ಧನ್ ಎಂಬುವವರಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿ ಮಾಡುತ್ತಿದ್ದ ಆರೋಪಿಗಳು, ಸಾಫ್ಟ್‍ವೇರ್ ಇಂಜಿನಿಯರ್‍ಗಳು, ಕಾಲೇಜ್ ವಿದ್ಯಾರ್ಥಿಗಳಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದರು ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಬಂಧಿತರು ಇಲ್ಲಿನ ಬನಶಂಕರಿ ಬಳಿ ಮಾದಕವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.





