ವಸತಿ ಶಾಲೆಗಳು ಎ.20ರವರೆಗೆ ಸ್ಥಗಿತ
ಬೆಂಗಳೂರು, ಎ.3: ಕೋವಿಡ್ ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದ ಮೇರೆಗೆ 10, 11 ಹಾಗೂ 12ನೇ ತರಗತಿಯ ಬೋರ್ಡ್ ಪರೀಕ್ಷೆ, ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷೆ ಬರೆಯುವವರನ್ನು ಹೊರತುಪಡಿಸಿ ಎಲ್ಲ ತರಗತಿಗಳನ್ನು ಎ.20ರವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ತಿಳಿಸಿದೆ.
ಈ ಕುರಿತು ಪತ್ರಿಕಾ ಪ್ರಕಟನೆಯ ಹೊರಡಿಸಿರುವ ಸಂಘವು, ವಸತಿ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ಕಾಲೇಜುಗಳಲ್ಲಿ 6ರಿಂದ 9ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರನ್ನು ಕರೆಯಿಸಿಕೊಂಡು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಸುರಕ್ಷಿತವಾಗಿ ಮನೆಗೆ ಕಳುಹಿಸಬೇಕೆಂದು ಸೂಚಿಸಲಾಗಿದೆ.
Next Story





