Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ...

ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ: ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ4 April 2021 10:47 PM IST
share
ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ: ಬಸವರಾಜ ಬೊಮ್ಮಾಯಿ

ಹರಿಹರ, ಎ.4: ಹಿಂದುಳಿದ ವರ್ಗದವರ ಹಿತ ಕಾಪಾಡಲು ಈಗಿರುವ ಮೀಸಲಾತಿ ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚು ಮಾಡುವುದು ಅಗತ್ಯ. ಈ ಸಂಬಂಧ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಅಧಿಕೃತವಾಗಿ ಪ್ರಕಟಿಸಿದರು.  

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾಮಠ ಬೆಳ್ಳೊಡಿಯಲ್ಲಿ ನಿರ್ಮಿಸಲಾಗಿರುವ ನೂತನ ವಿದ್ಯಾರ್ಥಿನಿಲಯ, ಸಮುದಾಯ ಭವನ ಮತ್ತು ಮುಖ್ಯ ಮಹಾದ್ವಾರ ಉದ್ಘಾಟನೆ ಹಾಗೂ ಶಾಖಾಮಠದ 5ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

ಹಾಲುಮತ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕಾದರೆ ಮೀಸಲಾತಿ ಪ್ರಮಾಣವನ್ನು ಶೇಕಡಾ 7.5ಕ್ಕೆ ಹೆಚ್ಚಿಸಬೇಕು. ಅದೇ ರೀತಿ ಬೇರೆ ಸಮಾಜದವರು ಮೀಸಲಾತಿಗೆ ಅರ್ಜಿ ಸಲ್ಲಿಸಿದ್ದಾರೆ. ಹಿಂದುಳಿದ ವರ್ಗಗಳ ಎಲ್ಲ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಬೇಕಾದರೆ ಈಗಿರುವ ಶೇಕಡ 50ರಷ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದು ಅನಿವಾರ್ಯವಾಗುತ್ತದೆ ಎಂದು ಅವರು ಪ್ರಕಟಿಸಿದರು. 

ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು  ಸುಪ್ರೀಂಕೋರ್ಟಿಗೆ ಪ್ರಮಾಣಪತ್ರವನ್ನು ಸಲ್ಲಿಸಲಾಗಿದೆ. ಸುಪ್ರೀಂಕೋರ್ಟ್ ನಿಂದ ಒಳ್ಳೆಯ ತೀರ್ಮಾನದ ನಿರೀಕ್ಷೆಯಲ್ಲಿ‌ ಇದ್ದೇವೆ ಎಂದು ಅವರು ಅವರು ತಿಳಿಸಿದರು.

ಮೀಸಲಾತಿ ಹೆಚ್ಚಿಸುವುದು ನಿಜಕ್ಕೂ ಸವಾಲು. ಮೀಸಲಾತಿ ಎಲ್ಲ ಸಮುದಾಯಗಳಿಗೆ ಕಾನೂನಾತ್ಮಕವಾಗಿ, ಸಂವಿಧಾನದ ಚೌಕಟ್ಟಿನಲ್ಲಿ, ಸೈದ್ಧಾಂತಿಕವಾಗಿ ನಿಗದಿ ಆಗಬೇಕು. ಮುಂದಿನ ದಿನಗಳಲ್ಲಿ ಯಾರೂ ಕೂಡ ಈ ನಿರ್ಧಾರವನ್ನು ಪ್ರಶ್ನೆ ಮಾಡಬಾರದೆಂಬ ಸದುದ್ದೇಶದಿಂದ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತಜ್ಞರ ಸಮೀತಿ ರಚಿಸಲಾಗಿದೆ. ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕೆಂಬ ಬೇಡಿಕೆ ಇದೆ. ಈ ಸಂಬಂಧ ಕುಲಶಾಸ್ತ್ರ ಅಧ್ಯಯನ ನಡೆಯುತ್ತದೆ. ಪಂಚಮಸಾಲಿ ‌ಸಮಾಜದವರು 2ಎ ಬೇಡಿಕೆ ಇಟ್ಟಿದ್ದಾರೆ. ಅದೇ ರೀತಿ ಹಲವು ಸಣ್ಣ ಸಮುದಾಯದ ಜನ ಮೀಸಲಾತಿ ಬೇಡಿಕೆ ಇಟ್ಟಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು. 

ಕನಕ‌ಗುರು ಪೀಠಕ್ಕೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಎಲ್ಲ ರೀತಿಯ ನೆರವು ನೀಡಿದೆ. ಮೈಲಾರ ಮಠದ ಅಭಿವೃದ್ಧಿಗಾಗಿ 10 ಕೋಟಿ ರೂ. ಮಂಜೂರು ಮಾಡಲಾಗಿದೆ. ಆ ಪೈಕಿ 2.5 ಕೋಟಿ ಹಣವನ್ನು ಯಡಿಯೂರಪ್ಪ ಅವರು ಬಿಡುಗಡೆ ಮಾಡಿದ್ದಾರೆ. ಹೀಗಾಗಿ ಸರ್ಕಾರ ಮತ್ತು ಯಡಿಯೂರಪ್ಪ ಅವರ ಪ್ರೀತಿ ಸಮಾಜದ ಮೇಲಿದೆ. ಈ ಸಮಾಜದವರ ಪ್ರೀತಿ ಸರ್ಕಾರ ಮತ್ತು ಯಡಿಯೂರಪ್ಪ ಹಾಗೂ ಇತರೆ ನಾಯಕರ ಮೇಲಿದೆ ಎಂದು ಬೊಮ್ಮಾಯಿ ಹೇಳಿದರು. 

ಕನಕದಾಸರು ಅಪರೂಪಕ್ಕೆ, ಯುಗಕ್ಕೆ ಒಮ್ಮೆ ಹುಟ್ಟುತ್ತಾರೆ. ಅಂಥ ದಾರ್ಶನಿಕರು ಹುಟ್ಟಿದ ಊರು ಬಾಡ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವುದು ನನಗೆ ಹೆಮ್ಮೆಯ ವಿಷಯ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಳಿತವನ್ನು ಸೂಕ್ಷ್ಮ ವಾಗಿ ಗಮನಿಸಿದರೆ ಅವರಿಗೆ ಯಾವುದೇ ಜಾತಿ ಧರ್ಮ ಇಲ್ಲ. ಕನಕದಾಸರ ರೀತಿ ಎಲ್ಲಾ ಧರ್ಮಗಳಿಗೆ ಒಳಿತು ಮಾಡಬೇಕೆಂಬ ಮನೋಧರ್ಮ ಯಡಿಯೂರಪ್ಪ ಅವರದು. ಹೀಗಾಗಿ ಸರ್ವಧರ್ಮ ಗಳಿಗೆ ಅವರು ಸಕಲ ನೆರವು ನೀಡಿದ್ದಾರೆ ಎಂದು ಬೊಮ್ಮಾಯಿ ಮೆಚ್ವುಗೆ ವ್ಯಕ್ತಪಡಿಸಿದರು. 

ಕನಕದಾಸರು ದಾಯಾದಿಗಳಿಂದಲೇ ಆಕ್ರಮಣ ಎದುರಿಸಿದರು. ಅದರಲ್ಲಿ ಅವರು ಸೋತರು. ಆ ಸೋಲಿನಲ್ಲಿ ನಾನು ಹಲವಾರು ಗೆಲುವು ಕಂಡೆ ಎಂದು ಕನಕದಾಸರೇ ಹೇಳುತ್ತಾರೆ. ಆ ಸೋಲಿನಲ್ಲಿ ನನ್ನನ್ನೇ ನಾನು ಗೆದ್ದುಕೊಂಡೆ ಎಂದು ಕನಕದಾಸರು ಹೇಳಿಕೊಂಡಿದ್ದಾರೆ. 

-ಬಸವರಾಜ ಬೊಮ್ಮಾಯಿ, ಗೃಹ ಸಚಿವರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X