ದ.ಕ.ಜಿಲ್ಲೆ: 83 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಎ.4: ದ.ಕ.ಜಿಲ್ಲೆಯಲ್ಲಿ ರವಿವಾರ 83 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಡುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 35,998 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.
ರವಿವಾರ 67 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡಿದ್ದಾರೆ. ಹಾಗಾಗಿ ಈವರೆಗೆ 34,614 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಜಿಲ್ಲೆಯಲ್ಲಿ ಈವರೆಗೆ 6,41,183 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 60,51,185 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 642 ಸಕ್ರಿಯ ಪ್ರಕರಣವಿದೆ. ಈವರೆಗೆ ಕೊರೋನ ಸೋಂಕಿಗೆ ಜಿಲ್ಲೆಯಲ್ಲಿ 742 ಮಂದಿ ಮೃತಪಟ್ಟಿದ್ದಾರೆ.
ದಂಡ: ಜಿಲ್ಲೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದುದಕ್ಕೆ ಸಂಬಂಧಿಸಿ ಈವರೆಗೆ 42,393 ಪ್ರಕರಣ ದಾಖಲಿಸಿ, 44,13,230 ರೂ. ದಂಡ ವಸೂಲಿ ಮಾಡಲಾಗಿದೆ.
Next Story





