ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ ಅನಾಹುತ

ಮಂಗಳೂರು : ನಗರ ಹೊರವಲಯದ ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ರವಿವಾರ ರಾತ್ರಿ ಬೆಂಕಿ ಅನಾಹುತ ಸಂಭವಿಸಿದೆ.
ಇದರಿಂದ ಪಚ್ಚನಾಡಿ ಸುತ್ತಮುತ್ತಲಿನ ಪರಿಸರದಲ್ಲಿ ದಟ್ಟ ಹೊಗೆ ಕಾಣಿಸಿದ್ದು ಸ್ಥಳೀಯರಿಗೆ ಸಮಸ್ಯೆ ಎದುರಾಗಿದೆ. ಬೆಂಕಿ ನಂದಿಸುವ ಪ್ರಯತ್ನ ನಡೆದಿದೆ. ಆದರೆ ಬೆಂಕಿಯ ಜ್ವಾಲೆ ಮತ್ತು ದಟ್ಟ ಹೊಗೆಯಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Next Story





