Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿಯಂತೆ...

ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿಯಂತೆ ವಿಚಾರಣೆ, ಆರೋಪಿಗೆ ರಾಜ ಮರ್ಯಾದೆಯಲ್ಲಿ ವಿಚಾರಣೆ: ಕಾಂಗ್ರೆಸ್ ಆರೋಪ

ಅಶ್ಲೀಲ ಸಿಡಿ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ5 April 2021 10:08 AM IST
share
ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿಯಂತೆ ವಿಚಾರಣೆ, ಆರೋಪಿಗೆ ರಾಜ ಮರ್ಯಾದೆಯಲ್ಲಿ ವಿಚಾರಣೆ: ಕಾಂಗ್ರೆಸ್ ಆರೋಪ

ಬೆಂಗಳೂರು, ಎ.5: ಅಶ್ಲೀಲ ಸಿಡಿ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಆರೋಪಿಯಂತೆ ನಡೆಸಿಕೊಳ್ಳಲಾಗುತ್ತಿದೆ. ಆದರೆ ಆರೋಪಿಯನ್ನು ರಾಜ ಮರ್ಯಾದೆಯಲ್ಲಿ ನೆಪ ಮಾತ್ರದ ವಿಚಾರಣೆ ನಡೆಸಲಾಗಿದೆ. ಈ ಪ್ರಕರಣವೊಂದೇ ಸಾಕು ಬಿಜೆಪಿ ಆಡಳಿತದ ನಿಜಬಣ್ಣ ತಿಳಿಯಲು ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಬಗ್ಗೆ ಸೋಮವಾರ ಬೆಳಗ್ಗೆ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಕರ್ನಾಟಕ ಕಾಂಗ್ರೆಸ್, ‘ರಮೇಶ್ ಜಾರಕಿಹೊಳಿಯ ಅತ್ಯಾಚಾರ ಪ್ರಕರಣವೊಂದೇ ಸಾಕು ಬಿಜೆಪಿ ಆಡಳಿತದ ನಿಜಬಣ್ಣ ತಿಳಿಯಲು. ದೂರು ನೀಡಿದ ಸಂತ್ರಸ್ತೆಯನ್ನು ಆರೋಪಿಯಂತೆ ಸತತವಾಗಿ ವಿಚಾರಣೆ ನಡೆಸಲಾಗುತ್ತಿದೆ. ಅತ್ಯಾಚಾರ ಆರೋಪಿಯನ್ನು ರಾಜ ಮರ್ಯಾದೆಯಲ್ಲಿ ನೆಪ ಮಾತ್ರದ ವಿಚಾರಣೆ ನಡೆಸಲಾಗಿದೆ’ ಎಂದು ಆರೋಪಿಸಿದೆ.

‘ಈ ಪ್ರಕರಣದಿಂದ ಚಳಿ ಜ್ವರ ಬಂದಿರುವ ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಪೊಲೀಸರೂ ಆರೋಪಿ ತಲೆಮರೆಸಿಕೊಳ್ಳುವ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಆರೋಪಿಯ ಮೊಬೈಲ್‌ನ್ನು ಹಲವು ದಿನಗಳವರೆಗೆ ಪೊಲೀಸರು ವಶಪಡಿಸಿಕೊಂಡಿಲ್ಲ, ಸಾಕ್ಷ್ಯ ನಾಶಕ್ಕೆ ಸಾಕಷ್ಟು ಸಮಯ ಬೇಕಿತ್ತೋ ಏನೋ!’ ಎಂದು ವ್ಯಂಗ್ಯವಾಡಿದೆ.

‘ಆರೋಪಿ ಮಾಜಿ ಮಂತ್ರಿಯನ್ನು ವಿಚಾರಣೆಗೆ ಕರೆಸಿ ಹಿಂಬಾಗಿಲ ಮೂಲಕ ಕಳಿಸಿಕೊಡುತ್ತಾರೆ ಪೊಲೀಸರು. ಸಂತ್ರಸ್ತೆಗೆ ವಿಶ್ರಾಂತಿಯೂ ನೀಡದಂತೆ ಸತತ ವಿಚಾರಣೆ ನಡೆಸುತ್ತಾರೆ. ಆರೋಪಿಯನ್ನು ಕರೆದುಕೊಂಡು ಹೋಗಿ ಮಹಜರು ಮಾಡುವ ಬದಲಿಗೆ ಸಂತ್ರಸ್ತೆಯನ್ನು ಕಾಡಿಸಿ ಮಹಜರು ನಡೆಸಲಾಗುತ್ತಿದೆ’ ಎಂದು ಆರೋಪಿಸಿದೆ.

‘ಆರೋಪಿಯ ಕುಟುಂಬ, ಆರೋಪಿ ವಾಸಿಸುತ್ತಿದ್ದ ಸ್ಥಳ, ಬಳಸುತ್ತಿದ್ದ ಮೊಬೈಲ್ ಮುಂತಾದವುಗಳನ್ನು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುವುದು ಸಾಮಾನ್ಯ ಪ್ರಕ್ರಿಯೆ. ಆದರೆ ಇಲ್ಲಿ ಎಲ್ಲವೂ ಉಲ್ಟಾ, ದೂರು ನೀಡಿದ ಸಂತ್ರಸ್ತೆಯನ್ನೇ ಆರೋಪಿ ಎನ್ನುವಂತೆ ನಡೆಸಿಕೊಳ್ಳಲಾಗುತ್ತಿದೆ’ ಎಂದು ಕೆಪಿಸಿಸಿ ಹೇಳಿದೆ.
‘ಆರೋಪಿಯ ಕುಟುಂಬದ ವಿಚಾರಣೆ ಮಾಡುವ ಬದಲಿಗೆ ಸಂತ್ರಸ್ತೆಯ ಕುಟುಂಬದ ವಿಚಾರಣೆ. ಆರೋಪಿಯ ದೂರಿನಲ್ಲಿ ಸಂತ್ರಸ್ತೆಯ ಹೆಸರಿಲ್ಲದಿದ್ದರೂ ಯುವತಿಯೇ ಆರೋಪಿ ಎಂಬಂತೆ ವಿಚಾರಣೆ. ಸಂತ್ರಸ್ತೆಯ ದೂರಿನಲ್ಲಿ ಆರೋಪಿ ಹೆಸರು ನೇರವಾಗಿ ಉಲ್ಲೇಖವಿದೆ, ಆದರೂ ಬಂಧನವಿಲ್ಲ, ಸಮರ್ಪಕ ವಿಚಾರಣೆಯೂ ಇಲ್ಲ’ ಎಂದು ಆರೋಪಿಸಿದೆ.

‘ಆರೋಪಿಯನ್ನು ಬಂಧಿಸದೇ ಚುನಾವಣಾ ಪ್ರಚಾರಕ್ಕೆ ಸ್ವತಃ ಮುಖ್ಯಮಂತ್ರಿ ಕರೆಯುತ್ತಾರೆ. ಸ್ವತಃ ಸಿಎಂ ತನಿಖೆ ನಡೆಸದೆ “ಅವರದು ತಪ್ಪಿಲ್ಲ” ಎಂದು ಕ್ಲೀನ್ ಚಿಟ್ ನೀಡುತ್ತಾರೆ. ನಾವೆಲ್ಲ ಆರೋಪಿ ಬೆಂಬಲಕ್ಕಿದ್ದೇವೆ ಎಂದು ಹಲವು ಸಚಿವರು ಹೇಳುತ್ತಾರೆ. ಇದೆಲ್ಲವೂ ಆರೋಪಿಯನ್ನು ಬಿಜೆಪಿ ರಕ್ಷಿಸುತ್ತಿದೆ ಎನ್ನಲು ನಿದರ್ಶನ’ ಎಂದು ಆರೋಪಿಸಿದೆ.

‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ, ಅತ್ಯಾಚಾರ ಆರೋಪಿಯದ್ದು ತಪ್ಪಿಲ್ಲ, ಷಡ್ಯಂತ್ರ ನಡೆಸಲಾಗಿದೆ ಎಂದು ಹೇಳಿದ್ದೀರಿ, ನಿಮಗೆ ಹೇಗೆ ಅದು ಷಡ್ಯಂತ್ರ ಎನಿಸಿತು, ತಮ್ಮಲ್ಲಿ ಅದಕ್ಕಿರುವ ಸಾಕ್ಷ್ಯಗಳೇನು ಎನ್ನುವುದನ್ನ ತಾವೂ ಎಸ್.ಐ.ಟಿ. ಮುಂದೆ ಹಾಜರಾಗಿ ತಿಳಿಸಿಬಿಡಿ ಸ್ವಾಮಿ! ಪ್ರಕರಣ ಇತ್ಯರ್ಥವಾಗಿಬಿಡಲಿ!’ ಎಂದು ಕೆಪಿಸಿಸಿ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

ಸಂತ್ರಸ್ತ ಯುವತಿ ಹಾಜರಾದ ದಿನದಿಂದಲೂ ಆರೋಪಿ ತಲೆಮರೆಸಿಕೊಂಡಿದ್ದಾರೆ, ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎನ್ನುವುದು ತಿಳಿದಿಲ್ಲ. ಆರೋಪಿಯೊಬ್ಬನನ್ನು ತಲೆಮರೆಸಿಕೊಳ್ಳಲು ಸಹಕರಿಸಿದ ಕುಖ್ಯಾತಿ ಈ ಸರ್ಕಾರಕ್ಕೆ ಸಲ್ಲಬೇಕು. ಅತ್ಯಾಚಾರ ಆರೋಪಿಯನ್ನು ರಕ್ಷಿಸುವ ಕೀರ್ತಿ ಬಿಜೆಪಿಗೆ ಸಲ್ಲಬೇಕು.

1.
ರಮೇಶ್ ಜಾರಕಿಹೊಳಿಯ ಅತ್ಯಾಚಾರ ಪ್ರಕರಣವೊಂದೇ ಸಾಕು ಬಿಜೆಪಿ ಆಡಳಿತದ ನಿಜಬಣ್ಣ ತಿಳಿಯಲು.

ದೂರು ನೀಡಿದ ಸಂತ್ರಸ್ತೆಯನ್ನು ಆರೋಪಿಯಂತೆ ಸತತವಾಗಿ ವಿಚಾರಣೆ ನಡೆಸಲಾಗುತ್ತಿದೆ.
ಅತ್ಯಾಚಾರ ಆರೋಪಿಯನ್ನು ರಾಜಮರ್ಯಾದೆಯಲ್ಲಿ ನೆಪಮಾತ್ರದ ವಿಚಾರಣೆ ನಡೆಸಲಾಗಿದೆ.#BJPprotectingRapists

— Karnataka Congress (@INCKarnataka) April 5, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X