ರೆಂಜಿಲಾಡಿಯಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ

ಕಡಬ, ಎ.5: ಯುವತಿಯೋರ್ವಳು ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ಸೋಮವಾರ ನಡೆದಿರುವುದು ವರದಿಯಾಗಿದೆ.
ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರಿ ಪುಷ್ಪಲತಾ ಯಾನೆ ದೀಕ್ಷಾ (25) ಆತ್ಮಹತ್ಯೆ ಮಾಡಿಕೊಂಡವರು.
ಕಡಬದ ಬೈಕ್ ಶೋರೂಂ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪುಷ್ಪಲತಾ ತನ್ನ ಮನೆ ಸಮೀಪ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ.
Next Story





