ಮಹಾರಾಷ್ಟ್ರದಲ್ಲಿ ಮತ್ತೆ ವಾರಾಂತ್ಯದಲ್ಲಿ ಲಾಕ್‍ಡೌನ್

ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರಕಾರವು ಇಡೀ ರಾಜ್ಯದಲ್ಲಿ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ.
ಕಳೆದ ವಾರ ಜಾರಿಗೆ ಬಂದಿರುವ ನೈಟ್ ಕಫ್ರ್ಯೂ ರಾತ್ರಿ 8ರಿಂದ ಬೆಳಗ್ಗೆ 7ರ ತನಕ ಇರಲಿದೆ. ಹಗಲು ಹೊತ್ತಿನಲ್ಲಿ ಸೆಕ್ಷನ್ 144ನ್ನು ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 7 ರತನಕ ಸಂಪೂರ್ಣ ವಾರಾಂತ್ಯದ ಲಾಕ್ ಡೌನ್ ಜಾರಿಯಾಗಲಿದೆ. ಬೆಳಗ್ಗೆ 7ರಿಂದ ರಾತ್ರಿ 8 ರತನಕ ಸೆಕ್ಷನ್ 144ರ ಪ್ರಕಾರ ಐದಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ಸರಕಾರವು ಪ್ರಕಟನೆಯಲ್ಲಿ ತಿಳಿಸಿದೆ.
ಖಾಸಗಿ ಕಚೇರಿಗಳಲ್ಲಿ ಪಾಳಿ ಪ್ರಕಾರ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಸರಕಾರಿ ಕಚೇರಿಗಳು ಶೇ.50ರಷ್ಟು ಸಿಬ್ಬಂದಿಯೊಂದಿಗೆ ಕೆಲಸ ನಿರ್ವಹಿಸಲು ಅವಕಾಶವಿದೆ.
ಮಹಾರಾಷ್ಟ್ರದಲ್ಲಿ ರವಿವಾರ ಒಂದೇ ದಿನ 57,074 ಹೊಸ ಕೋವಿಡ್ ಕೇಸ್ ಗಳು ವರದಿಯಾಗಿವೆ.
Next Story





