ಉಡುಪಿ: ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಅಜಿತ್ ಕುಮಾರ್ ಶೆಟ್ಟಿ ಆಯ್ಕೆ

ಅಜಿತ್ ಕುಮಾರ್ ಶೆಟ್ಟಿ
ಉಡುಪಿ, ಎ.5: ಕಾಂಗ್ರೆಸ್ ಪಕ್ಷದ ಯುವ ಕಾಂಗ್ರೆಸ್ ವತಿಯಿಂದ 2020-2021ನೇ ಸಾಲಿನಲ್ಲಿ ಆನ್ಲೈನ್ ಮೂಲಕ ಯುವ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆಗೆ ನಡೆದ ಆಂತರಿಕ ಚುನಾವಣೆಯಲ್ಲಿ ಉಡುಪಿ ಜಿಲ್ಲೆ ವಡ್ಡರ್ಸೆ ಗ್ರಾಮದ ಅಜಿತ್ ಕುಮಾರ್ ಶೆಟ್ಟಿ ಅತ್ಯಧಿಕ ಮತ ಪಡೆದ ರಾಜ್ಯ ಯುವ ಕಾಂಗ್ರೆಸ್ನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಇದೀಗ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಅಜಿತ್ ಕುಮಾರ್ ಶೆಟ್ಟಿ 1231 ಮತಗಳನ್ನು ಪಡೆದು ಯುವ ಕಾಂಗ್ರೆಸ್ ರಾಜ್ಯ ಕಾರ್ಯ ದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇವರು ವಡ್ಡರ್ಸೆ ಬೂತ್ ಕಾಂಗ್ರೆಸ್ ಅಧ್ಯಕ್ಷರಾಗಿ, ಬ್ರಹ್ಮಾವರ ಎಸ್ಎಂಎಸ್ ಕಾಲೇಜಿನ ಎನ್ಎಸ್ಯುಐ ಅಧ್ಯಕ್ಷರಾಗಿ, ಕೋಟ ಬ್ಲಾಕ್ ಕಾಂಗ್ರೆಸ್ನ ಎನ್ಎಸ್ಯುಐ ಅಧ್ಯಕ್ಷರಾಗಿ ಹಾಗೂ ಯುವ ಇಂಟಕ್ (ಕಾರ್ಮಿಕ ಸಂಘಟನೆ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
Next Story





