Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಉಡುಪಿ ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ...

‘ಉಡುಪಿ ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಲು ಕ್ರಮ’

ವಾರ್ತಾಭಾರತಿವಾರ್ತಾಭಾರತಿ5 April 2021 8:08 PM IST
share
‘ಉಡುಪಿ ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಲು ಕ್ರಮ’

ಉಡುಪಿ, ಎ.5: ಕೋವಿಡ್ 2ನೇ ಅಲೆಯನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಲು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

ಸೋಮವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಲಸಿಕಾ ಕಾರ್ಯಪಡೆಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ರಚಿಸಲಾಗಿರುವ ಕೋವಿಡ್ ನಿಯಂತ್ರಣ ಕುರಿತ ಕಾರ್ಯಪಡೆಗಳು ಹಾಗೂ ಗ್ರಾಮೀಣ ಪ್ರದೇಶದ ಕಾರ್ಯಪಡೆಗಳು ಶೀಘ್ರದಲ್ಲಿ ಸಭೆಗಳನ್ನು ನಡೆಸಿ ತಮ್ಮ ವ್ಯಾಪ್ತಿಯಲ್ಲಿನ 45 ವರ್ಷ ಮೇಲ್ಪಟ್ಟ ನಾಗರಿಕರನ್ನು ಗುರುತಿಸಿ ಅವರು ಲಸಿಕಾ ಕೇಂದ್ರಗಳಿಗೆ ಬಂದು ಲಸಿಕೆ ಪಡೆಯುವ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಡಿಸಿ ಸೂಚಿಸಿದರು.

ಶಿಕ್ಷಣ ಇಲಾಖೆಯಲ್ಲಿ 45 ವರ್ಷ ಮೇಲ್ಪಟ್ಟ ಹಲವು ಶಿಕ್ಷಕರಿದ್ದು, ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ, ಅನುದಾನಿತ ಶಾಲೆಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿನ ಶಿಕ್ಷಕರು ಲಸಿಕೆ ಪಡೆಯುವ ಕುರಿತಂತೆ ಸೂಚನೆ ನೀಡುವಂತೆ ಡಿಡಿಪಿಐಗೆ ಸೂಚಿಸಿದ ಜಿಲ್ಲಾಧಿಕಾರಿ, ಎಲ್ಲಾ ಖಾಸಗಿ ಬಸ್‌ ಗಳ 45 ವರ್ಷ ಮೇಲ್ಪಟ್ಟ ಚಾಲಕರು ಮತ್ತು ನಿರ್ವಾಹಕರು ಲಸಿಕೆ ಪಡೆಯುವ ಕುರಿತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಎಲ್ಲಾ ಅಟೋ ಮತ್ತು ಟ್ಯಾಕ್ಸಿ ಚಾಲಕರು, ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು, ಹೋಟೆಲ್ ಕಾರ್ಮಿಕರು ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ಜಿಲ್ಲಾಡಳಿತದ ಮೂಲಕ ಪತ್ರ ಬರೆದು ತಮ್ಮ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯುವಂತೆ ಮಾಡಲಾಗುವುದು ಎಂದು ತಿಳಿಸಿದರು.

ಚರ್ಚ್, ಮಸೀದಿಗಳು ಸೇರಿದಂತೆ ಎಲ್ಲಾ ಧಾರ್ಮಿಕ ಪ್ರದೇಶದಲ್ಲಿ ಕೋವಿಡ್ ಲಸಿಕೆ ಪಡೆಯುವ ಕುರಿತಂತೆ ತಿಳಿಸಲಾಗುವುದು ಎಂದ ಡಿಸಿ, ವಕ್ಫ್ ಇಲಾಖೆ ಅಧಿಕಾರಿಗಳು ಮಸೀದಿಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ಲಸಿಕೆ ಪಡೆಯುವ ಕುರಿತು ಅಗತ್ಯ ಸಂದೇಶ ನೀಡಲು ಕ್ರಮ ಕೈಗೊಳ್ಳು ವಂತೆ ತಿಳಿಸಿದರು.

ಜಿಲ್ಲೆಗೆ ಅಗತ್ಯ ಪ್ರಮಾಣದಲ್ಲಿ ಲಸಿಕೆ ತರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಲಸಿಕೆಯ ಕೊರತೆ ಇಲ್ಲ. ಅಲ್ಲದೆ ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಇಲ್ಲದೇ ಇದ್ದು ಸಾರ್ವಜನಿಕರು ನಿರ್ಭೀತಿಯಿಂದ ಲಸಿಕೆ ಪಡೆಯುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಯಲ್ಲಿ ಲಸಿಕೆ ವಿತರಣೆ ಸಂಪೂರ್ಣ ಗುರಿ ಸಾಧಿಸುವ ಕುರಿತಂತೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

ಡಬ್ಲುಎಚ್‌ಓ ಪರಿಶೀಲನೆ: ಸಭೆಯಲ್ಲಿ ಉಪಸ್ಥಿತರಿದ್ದ ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಡಾ.ಸತೀಶ್ಚಂದ್ರ ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆ, ಕೋವಿಡ್ ನಿಯಂತ್ರಣ ಕುರಿತು ಎಲ್ಲಾ ಜಿಲ್ಲೆಗಳಲ್ಲಿ ಕೈಗೊಂಡಿರುವ ನಿಯಂತ್ರಣ ಕ್ರಮಗಳ ಕುರಿತು ಪರಿಶೀಲನೆ ನಡೆಸುತ್ತಿದ್ದು, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಹಾಗೂ ಉಡುಪಿ ನಗರ ವ್ಯಾಪ್ತಿಯಲ್ಲಿ ರಿಸ್ಕ್ ಜಾಸ್ತಿ ಇದ್ದು, ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡುವ ಅಗತ್ಯವಿದೆ ಎಂದರು.

ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸರ್ವೇಕ್ಷಣ ಚಟುವಟಿಕೆಗಳು ನಡೆಯುತ್ತಿದ್ದು, ಪ್ರಕರಣ ಕಂಡು ಬಂದ ಕೂಡಲೆ ಕಂಟೈನ್ಮೆಂಟ್ ಝೋನ್ ರಚಿಸುವುದು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಕೋವಿಡ್ ಹರಡದಂತೆ ತಕ್ಷಣದಲ್ಲೇ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜಿಲ್ಲಾಧಿಕಾರಿ ತ್ವರಿತವಾಗಿ ನಿರ್ಧಾರಗಳನ್ನು ಕೈಗೊಂಡು ಅವುಗಳು ಅನುಷ್ಠಾನವಾಗುವಂತೆ ನೋಡಿಕೊಳ್ಳುತ್ತಿರುವುದೇ ಇದಕ್ಕೇ ಕಾರಣ ಎಂದು ಡಿಸಿ ಜಿ.ಜಗದೀಶ್ ಅವರ ಕಾರ್ಯವೈಖರಿಯನ್ನು ಅಭಿನಂದಿಸಿದರು.

ಸಭೆಯಲ್ಲಿ ಡಿಹೆಚ್‌ಓ ಡಾ.ಸುಧೀರ್‌ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ.ಮಧುಸೂಧನ್ ನಾಯಕ್, ಜಿಲ್ಲಾ ಕೋವಿಡ್ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಕೋವಿಡ್ ವಿಶೇಷಾಧಿಕಾರಿ ಡಾ.ಪ್ರೇಮಾನಂದ, ಜಿಲ್ಲಾ ಕೋವಿಡ್ ಲಸಿಕಾ ಅಧಿಕಾರಿ ಡಾ. ಎಂ.ಜಿ.ರಾಮ, ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X