ಉಡುಪಿ: 45 ವರ್ಷ ಮೇಲಿನ 7260 ಮಂದಿಗೆ ಕೋವಿಡ್ ಲಸಿಕೆ
ಉಡುಪಿ : ಹೆಚ್ಚುತ್ತಿರುವ ಕೊರೋನ ಎರಡನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ನೀಡುತ್ತಿರುವ ಕೋವಿಡ್ ಲಸಿಕೆಯನ್ನು ಸೋಮವಾರ ಜಿಲ್ಲೆಯಲ್ಲಿ ಒಟ್ಟು 7260 ಮಂದಿ ಸ್ವೀಕರಿಸಿದರು. ಇವರಲ್ಲಿ 7054 ಮಂದಿ ಲಸಿಕೆಯ ಮೊದಲ ಡೋಸ್ ಪಡೆದರೆ, 206 ಮಂದಿಗೆ ಎರಡನೇ ಡೋಸ್ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಜಿಲ್ಲೆಯಲ್ಲಿ ಒಟ್ಟಾರೆಯಾಗಿ 7325 ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 7056 ಮಂದಿ ಮೊದಲ ಡೋಸ್‌ನ್ನೂ 269 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. ಕೇವಲ ಒಬ್ಬ ಆರೋಗ್ಯ ಕಾರ್ಯಕರ್ತ ಮೊದಲ ಡೋಸ್ ಪಡೆದರೆ 42 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. ಅದೇ ರೀತಿ ಕೊರೋನ ಮುಂಚೂಣಿ ಯೋಧರಲ್ಲಿ ಒಬ್ಬ ಮೊದಲ ಡೋಸ್‌ನ್ನು 21 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ ಎಂದವರು ಹೇಳಿದರು.
ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಲಸಿಕೆಯ ಮೊದಲ ಡೋಸ್‌ನ್ನು ಪಡೆದವರ ಒಟ್ಟು ಸಂಖ್ಯೆ 1,09,448 ಆಗಿದ್ದು, 19,872 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಡಾ.ಸೂಡ ತಿಳಿಸಿದರು.





