ಎ. 8: ಮುಖ್ಯಮಂತ್ರಿ ಯಡಿಯೂರಪ್ಪ ದ.ಕ. ಜಿಲ್ಲಾ ಪ್ರವಾಸ

ಮಂಗಳೂರು, ಎ.5: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎ.8 ಮತ್ತು 9ರಂದು ದ.ಕ. ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಎ.8ರಂದು ಸಂಜೆ 4:10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಸಂಜೆ 6:30ಕ್ಕೆ ಜಿಪಂ ಸಭಾಂಗಣದಲ್ಲಿ ಕೋವಿಡ್-19ಗೆ ಸಂಬಂಧಿಸಿ ಪ್ರಧಾನಿ ಜೊತೆ ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 9:15ಕ್ಕೆ ಕಡಬ ತಾಲೂಕಿನ ಕೆಳಗಿನ ಕುಂಜಾಡಿ ಗ್ರಾಮದಲ್ಲಿ ನಡೆಯಲಿರುವ ಧರ್ಮನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಎ.9ರಂದು ಬೆಳಗ್ಗೆ 8:25ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದ್ದಾರೆ.
Next Story





