ಕೆಎಎಸ್ ಅಧಿಕಾರಿಗಳ ಕಾರ್ಯನಿರ್ವಹಣೆ: ಡಾ.ಮುಹಮ್ಮದ್ ಸನಾವುಲ್ಲಾ ನೇತೃತ್ವದಲ್ಲಿ ಸಮಿತಿ ರಚಿಸಿದ ಸರಕಾರ

ಡಾ.ಮುಹಮ್ಮದ್ ಸನಾವುಲ್ಲಾ
ಬೆಂಗಳೂರು, ಎ.5: ಕೆಎಎಸ್ ಅಧಿಕಾರಿಗಳ ಗ್ರೂಪ್-ಎ ಮತ್ತು ಗ್ರೂಪ್-ಬಿ ಅಧಿಕಾರಿಗಳ ಕಾರ್ಯನಿರ್ವಹಣಾ ವರದಿಯನ್ನು(ಇ-ಪಿಎಆರ್) ಪರಾಮರ್ಶಿಸಲು, ಉತ್ತಮಪಡಿಸಲು ಹಾಗೂ ಸಲಹೆಗಳನ್ನು ನೀಡಲು ನಿವೃತ್ತ ಐಎಎಸ್ ಅಧಿಕಾರಿ ಡಾ.ಮುಹಮ್ಮದ್ ಸನಾವುಲ್ಲಾ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮುಹಮ್ಮದ್ ಸನಾವುಲ್ಲಾ ಅಧ್ಯಕ್ಷತೆಯ ಸಮಿತಿಯಲ್ಲಿ ಐಐಎಂಬಿಯ ಸೆಂಟರ್ ಫಾರ್ ಪಬ್ಲಿಕ್ ಪಾಲಿಸಿಯ ಪ್ರೊ.ವಾಸಂತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು(ಇವರು ಅಥವಾ ಇವರ ಪ್ರತಿನಿಧಿ), ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರು(ಇವರು ಅಥವಾ ಇವರ ಪ್ರತಿನಿಧಿ), ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ(ಸೇವೆಗಳು), ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯವಿಭವಸ್ವಾಮಿಯವರನ್ನು ಸದಸ್ಯರನ್ನಾಗಿ ಮಾಡಲಾಗಿದ್ದು, ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಸರಕಾರದ ಅಧೀನ ಕಾರ್ಯದರ್ಶಿಯನ್ನು ಸಮಿತಿಯ ಸಂಚಾಲಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
Next Story





