ಮುಖ್ಯಮಂತ್ರಿ ಯಡಿಯೂರಪ್ಪರ ದ.ಕ.ಜಿಲ್ಲಾ ಪ್ರವಾಸ ರದ್ದು

ಮಂಗಳೂರು, ಎ.6: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎ.8 ಮತ್ತು 9ರಂದು ಹಮ್ಮಿಕೊಂಡಿದ್ದ ದ.ಕ.ಜಿಲ್ಲಾ ಪ್ರವಾಸವು ರದ್ದಾಗಿದೆ ಎಂದು ಮುಖ್ಯಮಂತ್ರಿಯ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ. ಚನ್ನಬಸವೇಶ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎ.8ರಂದು ಸಂಜೆ 4:10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಸಂಜೆ 6:30ಕ್ಕೆ ಜಿಪಂ ಸಭಾಂಗಣದಲ್ಲಿ ಕೋವಿಡ್-19ಗೆ ಸಂಬಂಧಿಸಿ ಪ್ರಧಾನಿ ಜೊತೆ ವೀಡಿಯೋ ಸಂವಾದ ಮತ್ತು ರಾತ್ರಿ 9:15ಕ್ಕೆ ಕಡಬ ತಾಲೂಕಿನ ಕೆಳಗಿನ ಕುಂಜಾಡಿ ಗ್ರಾಮದಲ್ಲಿ ನಡೆಯಲಿರುವ ಧರ್ಮನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ನಿರ್ಧರಿಸಲಾಗಿತ್ತು. ಆದರೆ ಇದೀಗ ಆ ಪ್ರವಾಸವನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





