Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಆರ್ಥಿಕ ಸಂಕಷ್ಟದ ಸಂದರ್ಭ ಸಾರಿಗೆ...

ಕೋವಿಡ್ ಆರ್ಥಿಕ ಸಂಕಷ್ಟದ ಸಂದರ್ಭ ಸಾರಿಗೆ ನೌಕರರ ಚಳವಳಿ ಸರಿಯಲ್ಲ: ಸಾರಿಗೆ ನಿಗಮದ ಅಧ್ಯಕ್ಷ ಚಂದ್ರಪ್ಪ

''ನೌಕರರ ಬೇಡಿಕೆ ಈಡೇರಿಕೆಗೆ ನೀತಿ ಸಂಹಿತೆ ತೊಡಕಾಗಿದೆ''

ವಾರ್ತಾಭಾರತಿವಾರ್ತಾಭಾರತಿ6 April 2021 6:17 PM IST
share
ಕೋವಿಡ್ ಆರ್ಥಿಕ ಸಂಕಷ್ಟದ ಸಂದರ್ಭ ಸಾರಿಗೆ ನೌಕರರ ಚಳವಳಿ ಸರಿಯಲ್ಲ: ಸಾರಿಗೆ ನಿಗಮದ ಅಧ್ಯಕ್ಷ ಚಂದ್ರಪ್ಪ

ಚಿಕ್ಕಮಗಳೂರು, ಎ.6: ಕೋವಿಡ್ ಮಹಾಮಾರಿಯ ಕಾರಣದಿಂದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಭಾರೀ ನಷ್ಟದಲ್ಲಿದ್ದರೂ ಸಾರ್ವಜನಿಕರ ಪ್ರಯಾಣಕ್ಕೆ ಕಿಂಚಿತ್ ತೊಂದರೆಯಾಗಬಾರದೆಂಬ ಉದ್ದೇಶದಿಂದ ಸಾರಿಗೆ ಸೇವೆಯನ್ನು ನಿಗಮ ಸಮರ್ಪಕವಾಗಿ ಒದಗಿಸಲು ಮುಂದಾಗಿದೆ. ಇಂತಹ ಸಂದರ್ಭದಲ್ಲಿ ನಿಗಮದ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚಳವಳಿಗೆ ಕರೆ ನೀಡಿರುವುದು ಸರಿಯಲ್ಲ. ಸಂಸ್ಥೆಯ ನೌಕರರನ್ನು ಕೆಲ ಸಂಘಟನೆಗಳ ಮುಖಂಡರು ದಾರಿ ತಪ್ಪಿಸಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಚಂದ್ರಪ್ಪ ತಿಳಿಸಿದ್ದಾರೆ.

ಮಂಗಳವಾರ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿರುವ ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ವಿಭಾಗದ ನಿಯಂತ್ರಣಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮಾರ್ಚ್ ನಲ್ಲಿ ಕೋವಿಡ್ ಕಾರಣಕ್ಕೆ ಲಾಕ್‍ಡೌನ್ ಘೋಷಣೆಯಾಗಿದ್ದರಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಎಲ್ಲ ವಿಭಾಗಗಳೂ ನಷ್ಟದಲ್ಲಿವೆ. ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ವಿಭಾಗಕ್ಕೆ ಕಳೆದ ವರ್ಷ 43.76 ಕೋಟಿ ರೂ. ನಷ್ಟವಾಗಿದ್ದರೆ, ಈ ಸಾಲಿನಲ್ಲಿ 64 ಕೋಟಿ ರೂ. ನಷ್ಟವಾಗಿದೆ. ಇದೇ ರೀತಿ ರಾಜ್ಯದ ಎಲ್ಲ ಸಾರಿಗೆ ವಿಭಾಗಗಳು ಸೇರಿ ನಿಗಮಕ್ಕೆ ಕಳೆದ 2020ರ ಮಾರ್ಚ್ ನಿಂದ ಇದುವರೆಗೆ ಒಟ್ಟಾರೆ 3200 ಕೋಟಿ ರೂ. ನಷ್ಟವಾಗಿದೆ ಎಂದರು.

ಸಾರಿಗೆ ನಿಗಮದಲ್ಲಿ 3074 ಮಂದಿ ಚಾಲಕರು, ನಿರ್ವಾಹಕರು ಹಾಗೂ ನೌಕರರು ಇದ್ದಾರೆ. ಕಳೆದ ವರ್ಷ 218 ಕೋಟಿ ರೂ. ಆದಾಯ ಬಂದಿದ್ದರೆ, 262 ಕೋಟಿ ರೂ. ನಷ್ಟವಾಗಿದೆ. 43 ಕೋಟಿ ರೂ. ಹೆಚ್ಚುವರಿ ನಷ್ಟವಾಗಿದೆ. 2021-22ರ ಸಾಲಿನಲ್ಲಿ ಕೇವಲ 117 ಕೋಟಿ ರೂ. ಆದಾಯ ಬಂದಿದ್ದು, 180 ಕೋಟಿ ರೂ. ಖರ್ಚು ವೆಚ್ಚ ಆಗಿದೆ. ಸಂಸ್ಥೆ ಭಾರೀ ನಷ್ಟದಲ್ಲಿದ್ದರೂ ಕೂಡ ಸರಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಸರಕಾರಿ ಸಾರಿಗೆ ಸೇವೆಯನ್ನು ಸಮರ್ಪಕವಾಗಿ ಒದಗಿಸುವ ನಿಟ್ಟಿನಲ್ಲಿ ರಾಜ್ಯ, ಹೊರರಾಜ್ಯ ಸೇರಿದಂತೆ ಎಲ್ಲ ಮಾರ್ಗಗಳಲ್ಲೂ ಸರಕಾರಿ ಬಸ್‍ಗಳ ಸಂಚಾರ ನಿರಂತರವಾಗಿ ನಡೆಯುತ್ತಿದೆ ಎಂದ ಅವರು, ಕರ್ನಾಟಕ ರಸ್ತೆ ಸಾರಿಗೆ ನಿಗಮ ನಷ್ಟದಲ್ಲಿರುವ ಸಂಸ್ಥೆಯಾಗಿದ್ದು, ಇದು ಲಾಭವನ್ನೇ ದೃಷ್ಟಿಯಲ್ಲಿಟ್ಟುಕೊಂಡು ನಡೆಯುತ್ತಿರುವ ಸಂಸ್ಥೆಯಲ್ಲ. ಸಾರ್ವಜನಿಕರ ಸೇವಾ ಕ್ಷೇತ್ರವಾಗಿರುವುದರಿಂದ ಸರಕಾರಕ್ಕೆ ನಷ್ಟವಾದರೂ ಕೂಡ ಉತ್ತಮ ಸಾರಿಗೆ ಸಂಪರ್ಕದ ಸೌಲಭ್ಯ ಒದಗಿಸುತ್ತಿದೆ ಎಂದು ಶಾಸಕ ಚಂದ್ರಪ್ಪ ಹೇಳಿದರು.

ಕಳೆದ ಡಿಸೆಂಬರ್ ನಲ್ಲಿ ಸಾರಿಗೆ ಸಂಸ್ಥೆಯ ನೌಕರರು 9 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಲಸ ಸ್ಥಗಿತಗೊಳಿಸಿ ಹೋರಾಟ ಮಾಡಿದ್ದರು. ಈ ಸಂದರ್ಭದಲ್ಲಿ ಸಂಘಟನೆಗಳ ಮುಖಂಡರೊಂದಿಗೆ ಮಾತುಕತೆ ನಡೆಸಿ 9 ಬೇಡಿಕೆಗಳ ಪೈಕಿ 8 ಬೇಡಿಕೆಗಳನ್ನು ಈಡೇರಿಸಲು ಸರಕಾರ ಈಡೇರಿಸಿದೆ. ಆದರೆ ನೌಕರರ ಬೇಡಿಕೆಗಳ ಪೈಕಿ 6ನೇ ವೇತನ ಆಯೋಗದ ಜಾರಿ ಪ್ರಮುಖ ಬೇಡಿಕೆಯಾಗಿದ್ದು, ಈ ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದು ಬುಧವಾರದಿಂದ ಮತ್ತೆ ಕೆಲಸ ಸ್ಥಗಿತಗೊಳಿಸಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಸಾರಿಗೆ ನಿಗಮದ ಅಧಿಕಾರಿಗಳು, ಸಾರಿಗೆ ಸಚಿವರು, ಹಣಕಾಸು ಇಲಾಖೆ ಹಾಗೂ ಸಿಎಂ ಸೇರಿ ಚರ್ಚೆ ನಡೆಸಿದ್ದೇವೆ. ಕೋವಿಡ್‍ನಿಂದಾಗಿ ಸರಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಆದರೂ ನೌಕರರ ಹಿತಕಾಯುವ ಉದ್ದೇಶ ಸರಕಾರಕಿದೆ. ನೌಕರರ ಬೇಡಿಕೆಗಳನ್ನು ಈಡೇರಿಸಲು ಸರಕಾರ ಬದ್ಧವಾಗಿದೆ. ಆದರೆ ಮೂರು ಕಡೆಗಳಲ್ಲಿ ಉಪಚುನಾವಣೆ ಘೋಷಣೆಯಾಗಿರುವುದರಿಂದ ನೀತಿ ಸಂಹಿತೆ ನೌಕರರ ಬೇಡಿಕೆ ಈಡೇರಿಕೆಗೆ ತೊಡಕಾಗಿದೆ ಎಂದರು.

ನೌಕರರ ಚಳವಳಿ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿಯವರು ಮೇ 4ರಂದು ನಿಗಮಕ್ಕೆ ಸರಕಾರ ನಿರ್ದಿಷ್ಟ ಪ್ರಮಾಣದ ಹಣ ಬಿಡುಗಡೆಗೆ ಮನವಿ ಮಾಡಿದ್ದು, ಇದು ಮಾಧ್ಯಮಗಳಲ್ಲೂ ಸುದ್ದಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಕರೆ ನೀಡಿರುವ ಸಂಘಟನೆಗಳು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು ಎಂದ ಅವರು, ಕಳೆದ ಕೋವಿಡ್ ಸಂಕಷ್ಟದಿಂದಾಗಿ ನಿಗಮಕ್ಕೆ 3200 ಕೋ ರೂ. ನಷ್ಟವಾಗಿದೆ. ಆದರೂ ಸರಕಾರ ಈ ಹಿಂದೆ 1780 ಕೋಟಿ ರೂ. ಹಣವನ್ನು ಸಿಬ್ಬಂದಿ ವೇತನಕ್ಕೆಂದು ನಿಗಮಕ್ಕೆ ಬಿಡುಗಡೆ ಮಾಡಿದ್ದು, ಕೋವಿಡ್ ಸಂಕಷ್ಟದಲ್ಲೂ ಸರಕಾರ ಸಿಬ್ಬಂದಿಯ ಒಂದು ತಿಂಗಳ ವೇತನವನ್ನೂ ತಡೆಹಿಡಿದಿಲ್ಲ. ಕೆಎಸ್ಸಾರ್ಟಿಸಿ ಸಂಸ್ಥೆಯಲ್ಲಿ ಉತ್ತಮ ನಡವಳಿಕೆಯ ಸಿಬ್ಬಂದಿ ಇದ್ದು, ಸಂಸ್ಥೆ ಉಳಿದರೆ ಮಾತ್ರ ನೌಕರರ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಸಾಧ್ಯ, ಇಲ್ಲದಿದ್ದಲ್ಲಿ ಏನೂ ಮಾಡಲು ಸಾಧ್ಯವಿಲ್ಲ ಎಂಬುದನ್ನು ನೌಕರರು ಅರ್ಥ ಮಾಡಿಕೊಳ್ಳಬೇಕೆಂದು ತಾನು ಮನವಿ ಮಾಡುವುದಾಗಿ ಹೇಳಿದರು.

ಸಂಸ್ಥೆಯಲ್ಲಿ 1 ಲಕ್ಷ 30 ಸಾವಿರ ಉದ್ಯೋಗಿಗಳಿದ್ದಾರೆ. 30 ಸಾವಿರ ಬಸ್‍ಗಳಿವೆ. 1 ಲಕ್ಷ ಉದ್ಯೋಗಿಗಳಿಗೂ ವೇತನ ನೀಡಿದ್ದೇವೆ. 30 ಸಾವಿರ ಬಸ್‍ಗಳ ಪೈಕಿ 22 ಸಾವಿರ ಬಸ್‍ಗಳ ಸೇವೆಯನ್ನು ಆರಂಭಿಸಿದ್ದೇವೆ. ಕೋವಿಡ್ ಕಾರಣಕ್ಕೆ ಸುಮಾರು 8 ಸಾವಿರ ವೋಲ್ವೋದಂತಹ ಐಷಾರಾಮಿ ಬಸ್‍ಗಳನ್ನು ರಸ್ತೆಗಿಳಿಸಲು ಹಿಂದುಮುಂದು ನೋಡುವಂತಾಗಿದೆ. ಆದರೂ ನೌಕರರಿಗೆ ಅನ್ಯಾಯವಾಗದಂತೆ ಸರಕಾರ ಕ್ರಮವಹಿಸಿದೆ ಎಂದರು.

ಶಿಕ್ಷಣ ಇಲಾಖೆಯ ಶಿಕ್ಷಕರಿಗೆ ಹೆಚ್ಚುವರಿ ಕೆಲಸ ನೀಡಿದರೂ ಅವರಿಗೆ ಯಾವುದೇ ಹೆಚ್ಚುವರಿ ವೇತನದಂತಹ ಸೌಲಭ್ಯಗಳನ್ನು ಸರಕಾರ ನೀಡುತ್ತಿಲ್ಲ. ಆದರೆ ಸಾರಿಗೆ ಇಲಾಖೆ ನೌಕರರಿಗೆ ಓಟಿ, ಟಿಎ, ಡಿಎ, ಎಚ್‍ಆರ್‍ಎ, ಬಾಟಾದಂತಹ ಸೌಲಭ್ಯಗಳನ್ನು ನೀಡಲಾಗುತ್ತಿದೆ. 6ನೇ ವೇತನ ಆಯೋಗದ ಬಗ್ಗೆ ಸಾರಿಗೆ ಇಲಾಖೆ ನೌಕರರು ತಲೆಗೆ ಹುಳು ಬಿಟ್ಟುಕೊಂಡಿದ್ದಾರೆ. 2005ರಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಂದು ತೀರ್ಮಾನ ಕೈಗೊಂಡಿವೆ. ಅದರಂತೆ 2005ರಿಂದೀಚೆಗೆ ಸರಕಾರಿ ನೌಕರರಿಗೆ ಸೇರಿದವರಿಗೆ ಪಿಂಚಣಿ ಸೌಲಭ್ಯ ಇರುವುದಿಲ್ಲ. ಆದರೂ ನೌಕರರು 6ನೇ ವೇತನ ಆಯೋಗಕ್ಕಾಗಿ ಏಕೆ ಪಟ್ಟು ಹಿಡಿದಿದ್ದಾರೋ ಗೊತ್ತಿಲ್ಲ. ಕೆಲ ಸಂಘಟನೆಗಳು ಸಾರಿಗೆ ಇಲಾಖೆಯ ಸಿಬ್ಬಂದಿಯನ್ನು ದಾರಿ ತಪ್ಪಿಸುತ್ತಿರುವ ಬಗ್ಗೆ ಸರಕಾರದ ಬಳಿ ವರದಿಗಳಿವೆ. ನೌಕರರು ತಮ್ಮ ನಿಲುವು ಬದಲಿಸುವ ಮೂಲಕ ಚಳವಳಿ ಕೈಬಿಡಬೇಕು. ನೌಕರರ ಎಲ್ಲ ಬೇಡಿಕೆಗಳನ್ನು ಸರಕಾರ ಮುಂದಿನ ದಿನಗಳಲ್ಲಿ ಈಡೇರಿಸಲಿದೆ ಎಂದು ಇದೇ ವೇಳೆ ನಿಗಮದ ಅಧ್ಯಕ್ಷ ಚಂದ್ರಪ್ಪ ಹೇಳಿದರು.

ಸಾರಿಗೆ ನಿಗಮವು ಜನಪರವಾದ ಕೆಲ ಉತ್ತಮವಾದ ಯೋಜನೆಗಳನ್ನು ಜಾರಿಗೆ ಮುಂದಾಗಿದೆ. ಸುಮಾರು 20 ಲಕ್ಷ ಕಟ್ಟಡ ಕಾರ್ಮಿಕರಿಗೆ ಸಾರಿಗೆ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಗುರಿ ಹೊಂದಿದೆ. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್‍ನ ಹಣ ಹಣಕಾಸು ಇಲಾಖೆಯಿಂದಲೇ ನೇರವಾಗಿ ನಿಗಮಕ್ಕೆ ಪಾವತಿಯಾಗುವುದರಿಂದ ಈ ಸೌಲಭ್ಯವನ್ನೂ ಸಮರ್ಪಕವಾಗಿ ನೀಡಲಾಗುತ್ತಿದೆ. ಆದ್ದರಿಂದ ಸಂಸ್ಥೆಯನ್ನು ಉತ್ತಮ ರೀತಿಯಲ್ಲಿ ನಡೆಸುವ ಸಲುವಾಗಿ ನೌಕರರು ಸಹಕಾರ ನೀಡಬೇಕು. ಸರಕಾರದ ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುವ ಕೆಲಸಕ್ಕೆ ನೌಕರರು ಮುಂದಾಗಬಾರದು.
- ಚಂದ್ರಪ್ಪ, ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾರ್ಮಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿರುವುದರಿಂದ ಅವರ ಸಾರಿಗೆ ಸಮಸ್ಯೆ ದೃಷ್ಟಿಯಲ್ಲಿಟ್ಟುಕೊಂಡು ಜಿಲ್ಲಾದ್ಯಂತ ಎಕ್ಸ್ ಪ್ರೆಸ್ ಸೇರಿದಂತೆ ಯಾವುದೇ ಬಸ್‍ಗಳಿಗೆ ಯಾವುದೇ ಜಾಗದಲ್ಲಾದರೂ ಕೈ ಅಡ್ಡ ಹಾಕಿದರೂ ಬಸ್ ನಿಲ್ಲಿಸಿ ಪ್ರಯಾಣಕ್ಕೆ ಅವಕಾಶ ನೀಡಬೇಕೆಂದು ಸಾರಿಗೆ ಇಲಾಖೆಯಿಂದಲೇ ಆದೇಶ ಹೊರಡಿಸಲಾಗಿದೆ. ಜಿಲ್ಲೆಯ ಯಾವುದೇ ಭಾಗದಲ್ಲೂ ಸಾರ್ವಜನಿಕರಿಗೆ ಪ್ರಯಾಣಕ್ಕೆ ತೊಂದರೆಯಾಗುತ್ತಿಲ್ಲ. 
- ಎಚ್.ಟಿ.ವೀರೇಶ್, ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ವಿಭಾಗದ ಅಧಿಕಾರಿ

ಸಾರಿಗೆ ಇಲಾಖೆ ನೌಕರರು ಬುಧವಾರ ಕೆಲಸ ನಿಲ್ಲಿಸಿ ಚಳವಳಿಗೆ ಕರೆ ನೀಡಿದ್ದಾರೆ. ಚಳವಳಿ ಬೇಡ ಎಂದು ಸರಕಾರದ ವತಿಯಿಂದ ನಾಲ್ಕು ಬಾರಿ ಮಾತುಕತೆ ನಡೆಸಲಾಗಿದೆ. ಇದನ್ನು ಮೀರಿ ಚಳವಳಿ ನಡೆಸಿದರೇ ಸರಕಾರ ಪರ್ಯಾಯ ವ್ಯವಸ್ಥೆ ಮಾಡಲು ಮುಂದಾಗಿದೆ. ಖಾಸಗಿ ಬಸ್‍ಗಳ ಮಾಲಕರ ಸಂಘದೊಂದಿಗೆ ಈ ಸಂಬಂಧ ಮಾತುಕತೆ ನಡೆಸಿದ್ದು, ಅವರು ಸಂಪೂರ್ಣ ಸಹಕಾರ ನೀಡಲು ಮುಂದಾಗಿದ್ದಾರೆ. ಸಾರಿಗೆ ಬಸ್‍ಗಳು ರಸ್ತೆಗಿಳಿಯದಿದ್ದಲ್ಲಿ ಸಂಬಂಧಿಸಿದ ಮಾರ್ಗಗಳಲ್ಲಿ ಖಾಸಗಿ ಬಸ್‍ಗಳು, ಟೆಂಪೋ, ಟ್ಯಾಕ್ಸಿಗಳ ಮೂಲಕ ಸಾರ್ವಜನಿಕರ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ಖಾಸಗಿ ಬಸ್‍ಗಳಿಗೆ ಯಾರಾದರೂ ತೊಂದರೆ ಮಾಡಿದಲ್ಲಿ ಸಂಸ್ಥೆಯ ಸಿಬ್ಬಂದಿ, ಪೊಲೀಸರು, ಆರ್‍ಟಿಒ ಅಧಿಕಾರಿಗಳು ಕ್ರಮವಹಿಸಲಾಗಿದ್ದಾರೆ. ಸರಕಾರ ನಿಗದಿ ಮಾಡುವ ದರದಲ್ಲೇ ಖಾಸಗಿ ಸಾರಿಗೆಯವರು ಸಾರ್ವಜನಿಕರಿಗೆ ಸೇವೆ ನೀಡಬೇಕೆಂದು ಸೂಚನೆ ನೀಡಲಾಗಿದೆ. ಹೆಚ್ಚು ಹಣ ವಸೂಲಿ ಮಾಡಿದಲ್ಲಿ ಸಂಬಂಧಿಸಿದ ಇಲಾಖಾಧಿಕಾರಿಗಳು ಕ್ರಮವಹಿಸಲಿದ್ದಾರೆ.
- ಚಂದ್ರಪ್ಪ, ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X