ಉಡುಪಿ ಜಿಲ್ಲೆಯಲ್ಲಿ 57 ಮಂದಿಗೆ ಕೊರೋನ ಪಾಸಿಟವ್
ಉಡುಪಿ, ಎ.6: ಮಂಗಳವಾರ ಜಿಲ್ಲೆಯಲ್ಲಿ ಒಟ್ಟು 57 ಮಂದಿ ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ 55 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, ಕೋವಿಡ್‌ಗೆ ಸಕ್ರಿಯರಾಗಿರುವವರ ಸಂಖ್ಯೆ 398 ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದ 57 ಮಂದಿಯಲ್ಲಿ 35 ಮಂದಿ ಪುರುಷರು ಹಾಗೂ 22 ಮಂದಿ ಮಹಿಳೆಯರು. ಇವರಲ್ಲಿ 30 ಮಂದಿ ಉಡುಪಿ ತಾಲೂಕಿನ ವರಾದರೆ, 12 ಮಂದಿ ಕುಂದಾಪುರ ತಾಲೂಕು ಹಾಗೂ 13 ಮಂದಿ ಕಾರ್ಕಳ ತಾಲೂಕಿನವರು. ಹೊರ ಜಿಲ್ಲೆಗಳಿಂದ ಬಂದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಡಾ.ಸೂಡ ತಿಳಿಸಿದರು.
ಸೋಮವಾರ 55 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 25,041ಕ್ಕೇರಿದೆ. ಸೋಮವಾರ ಜಿಲ್ಲೆಯ 1652 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಂದಿನ 57 ಮಂದಿ ಸೇರಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 25,631 ಆಗಿದೆ ಎಂದು ಡಾ.ಸೂಡ ತಿಳಿಸಿದರು.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,31,640 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ನಿಂದ ಸತ್ತವರ ಸಂಖ್ಯೆ 192 ಆಗಿದೆ.







