ಉಡುಪಿ: 45 ವರ್ಷ ಮೇಲಿನ 5861 ಮಂದಿಗೆ ಕೊರೋನ ಲಸಿಕೆ
ಉಡುಪಿ, ಎ.6: ಕೊರೋನ ಎರಡನೇ ಅಲೆಯ ನಿಯಂತ್ರಣಕ್ಕಾಗಿ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ನೀಡುತ್ತಿರುವ ಕೋವಿಡ್ ಲಸಿಕೆಯನ್ನು ಮಂಗಳವಾರ ಜಿಲ್ಲೆಯಲ್ಲಿ ಒಟ್ಟು 5861 ಮಂದಿ ಸ್ವೀಕರಿಸಿದರು. ಇವರಲ್ಲಿ 5725 ಮಂದಿ ಲಸಿಕೆಯ ಮೊದಲ ಡೋಸ್ ಪಡೆದರೆ, 136 ಮಂದಿಗೆ ಎರಡನೇ ಡೋಸ್ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಜಿಲ್ಲೆಯಲ್ಲಿ ಒಟ್ಟಾರೆಯಾಗಿ 5930 ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 5726 ಮಂದಿ ಮೊದಲ ಡೋಸ್‌ನ್ನೂ 204 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. 51 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 18 ಮಂದಿ ಕೊರೋನ ಮುಂಚೂಣಿ ಯೋಧರು ಇಂದು ಲಸಿಕೆ ಯನ್ನು ಸ್ವೀಕರಿಸಿದ್ದಾರೆ ಎಂದವರು ಹೇಳಿದರು.
ಜಿಲ್ಲೆಯಲ್ಲಿ ಇದುವರೆಗೆ ಲಸಿಕೆಯ ಮೊದಲ ಡೋಸ್‌ನ್ನು ಪಡೆದವರ ಒಟ್ಟು ಸಂಖ್ಯೆ 1,15,174 ಆಗಿದ್ದು, 20,076 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಡಾ.ಸೂಡ ತಿಳಿಸಿದರು.
Next Story





