ಎ.7ರಂದು ವಿಶ್ವ ಆರೋಗ್ಯ ದಿನ
ಉಡುಪಿ, ಎ.6: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ವಿಶ್ವ ಆರೋಗ್ಯ ದಿನವನ್ನು ಎ.7ರಂದು ಬೆಳಗ್ಗೆ 10 ಗಂಟೆಗೆ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ಆಚರಿಸಲಾಗುವುದು.
ಕಾರ್ಯಕ್ರಮವನ್ನು ಜಿಲ್ಲಾ ಸರ್ಜನ್ ಡಾ. ಮಧುಸೂದನ ನಾಯಕ್ ಉದ್ಘಾಟಿಸಲಿದ್ದು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Next Story





