Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ ಆಟೊಮೊಬೈಲ್ ಕ್ಷೇತ್ರದಲ್ಲಿ...

ರಾಜ್ಯದ ಆಟೊಮೊಬೈಲ್ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ಕ್ರಾಂತಿಗೆ ದಿನಗಣನೆ: ಡಿಸಿಎಂ ಡಾ.ಅಶ್ವತ್ಥ ನಾರಾಯಣ

ಜಾಗತಿಕ ತಂತ್ರಜ್ಞಾನ ಆಡಳಿತ ಶೃಂಗಸಭೆ

ವಾರ್ತಾಭಾರತಿವಾರ್ತಾಭಾರತಿ6 April 2021 10:47 PM IST
share
ರಾಜ್ಯದ ಆಟೊಮೊಬೈಲ್ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ಕ್ರಾಂತಿಗೆ ದಿನಗಣನೆ: ಡಿಸಿಎಂ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಎ.6: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಎಲೆಕ್ಟ್ರೀಕರಣ ಮಾಡುವುದು ಸೇರಿದಂತೆ ಆಡಳಿತ, ಅಭಿವೃದ್ಧಿ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳಲಾಗುವುದು ಎಂದು ವಿಜ್ಞಾನ-ತಂತ್ರಜ್ಞಾನ, ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಮಂಗಳವಾರ ಜಪಾನ್‍ನಲ್ಲಿ ನಡೆಯುತ್ತಿರುವ ಜಾಗತಿಕ ತಂತ್ರಜ್ಞಾನ ಆಡಳಿತ ಶೃಂಗಸಭೆಯಲ್ಲಿ ವರ್ಚುಯಲ್‍ನಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ಈಗಾಗಲೇ ಬೆಂಗಳೂರು ಮೆಟ್ರೋ ವಿದ್ಯುತ್‍ನಿಂದಲೇ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇತರೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯೂ ಎಲೆಕ್ಟ್ರೀಕರಣ ಆಗಲಿದೆ. ಜತೆಗೆ, ಸರಕಾರದ ಮಟ್ಟದಲ್ಲೂ ಪೆಟ್ರೋಲ್-ಡೀಸೆಲ್ ವಾಹನಗಳಿಗೆ ಬದಲು ಎಲೆಕ್ಟ್ರಿಕ್ ವಾಹನಗಳನ್ನೇ ಬಳಸಲಾಗುವುದು. ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ದಿನಗಣನೆ ಶುರುವಾಗಿದೆ ಎಂದರು.

ಸಾಂಪ್ರದಾಯಿಕ ಮೂಲಗಳ ಜತೆಗೆ ಅಸಂಪ್ರದಾಯಿಕ ಮೂಲಗಳಿಂದ ಕರ್ನಾಟಕ ಉತ್ತಮ ರೀತಿಯಲ್ಲಿ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಹೀಗಾಗಿ ಕೈಗಾರಿಕೆ ಹೂಡಿಕೆಗೆ ಇದಕ್ಕಿಂತ ಉತ್ತಮ ರಾಜ್ಯ ಮತ್ತೊಂದಿಲ್ಲ. ವಿದ್ಯುತ್ ಸ್ವಾವಲಂಬನೆ ಸಾಧಿಸುವ ಮೂಲಕ ರಾಜ್ಯದ ಆಟೋಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯೇ ಆಗುತ್ತಿದೆ. ಇನ್ನು ಕೆಲ ದಿನಗಳಲ್ಲಿಯೇ ರಾಜ್ಯದ ಉದ್ದಗಲಕ್ಕೂ ಎಲೆಕ್ಟ್ರಿಕ್ ವಾಹನಗಳೇ ರಸ್ತೆಗಳ ಮೇಲೆ ರಾರಾಜಿಸಲಿವೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಎಲೆಕ್ಟ್ರಿಕ್ ವಾಹನ ಮತ್ತು ಇಆರ್ ಅಂಡ್ ಡಿ ನೀತಿ: ಹೊಸ ತಲೆಮಾರಿನ ವಾಹನಗಳಿಗೆ ಪೂರಕವಾದ ಎಲ್ಲ ವ್ಯವಸ್ಥೆಗಳನ್ನು ರಾಜ್ಯ ಸರಕಾರ ಮಾಡಿದೆ. ಇಡೀ ದೇಶದಲ್ಲಿಯೇ ಮೊತ್ತ ಮೊದಲಿಗೆ ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೆ ತಂದ ರಾಜ್ಯವೆಂದರೆ ಕರ್ನಾಟಕ ಮಾತ್ರ. ಇದಕ್ಕೆ ಪೂರಕವಾಗಿ ಕೆಲ ದಿನಗಳ ಹಿಂದೆ ಇಆರ್ ಅಂಡ್ ಡಿ (ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ) ನೀತಿಯನ್ನು ಜಾರಿಗೆ ತರಲಾಗಿದೆ. ಇಂತಹ ನೀತಿಯನ್ನು ಅಳವಡಿಸಿಕೊಂಡ ಭಾರತದ ಮೊದಲ ರಾಜ್ಯ ಕರ್ನಾಟವೇ ಆಗಿದೆ ಎಂದು ಅವರು ತಿಳಿಸಿದರು.

ಇನ್ನು ಕೆಲ ದಿನಗಳಲ್ಲಿಯೇ ಎಲ್ಲೆಲ್ಲೂ ಪೆಟ್ರೋಲ್ ಬಂಕ್‍ಗಳು ಇರುವಂತೆಯೇ ವಾಹನಗಳಿಗೆ ಬೇಕಾದ ಚಾರ್ಜಿಂಗ್ ಪಾಯಿಂಟ್‍ಗಳು ಹಾಗೂ ಬ್ಯಾಟರಿ ಬ್ಯಾಂಕ್ ಕಾಣಸಿಗಲಿವೆ. ನಮ್ಮಲ್ಲಿ ನೂರಕ್ಕೆ ನೂರರಷ್ಟು ವಿದ್ಯುತ್ ಸ್ವಾವಲಂಬನೆ ಇರುವುದರಿಂದ ಇದು ಸಾಧ್ಯವಾಗುತ್ತಿದೆ ಎಂದು ಅಶ್ವತ್ಥನಾರಾಯಣ ಹೇಳಿದರು.

ಕರ್ನಾಟಕವನ್ನು ದೇಶದ ಅತ್ಯುತ್ತಮ ಕೈಗಾರಿಕಾ ನೆಲೆಯಾಗಿಸುವ ನಿಟ್ಟಿನಲ್ಲಿ ಸರಕಾರ ವಿದೇಶಿ ಬಂಡವಾಳ ಹೂಡಿಕೆ, ಆವಿಷ್ಕಾರ, ತಂತ್ರಜ್ಞಾನ, ಮೂಲಸೌಕರ್ಯಕ್ಕೆ ಹೆಚ್ಚು ಒತ್ತು ನೀಡಿದೆಯಲ್ಲದೆ, ವಿವಿಧ ನೀತಿಗಳನ್ನು ಜಾರಿಗೆ ತರುವ ಮೂಲಕ ಆಮೂಲಾಗ್ರ ಸುಧಾರಣೆಗಳನ್ನು ಜಾರಿಗೊಳಿಸಿದೆ. ಕೋವಿಡೋತ್ತರ ಕಾಲದಲ್ಲಿ ರಾಜ್ಯದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಸರಕಾರ ಅತ್ಯಗತ್ಯವಾದ ಎಲ್ಲ ಉಪ ಕ್ರಮಗಳನ್ನು ಕೈಗೊಂಡಿದ್ದು, ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದರು.

ಮೂಲಸೌಕರ್ಯವೆಂದರೆ, ಮುಖ್ಯವಾಗಿ ವಿದ್ಯುತ್, ರಸ್ತೆ, ನೀರು ಇತ್ಯಾದಿಗಳನ್ನು ಆದ್ಯತೆಯ ಮೇರೆಗೆ ಒದಗಿಸುವುದು ಹಾಗೂ ಕೈಗಾರಿಕಾ ಪೂರಕ ವ್ಯವಸ್ಥೆ, ಹೂಡಿಕೆದಾರ ಸ್ನೇಹಿ ನೀತಿ ಇತ್ಯಾದಿಗಳ ಮೂಲಕ ಕರ್ನಾಟಕವು ಹೂಡಿಕೆದಾರರ ನೆಚ್ಚಿನ ತಾಣವಾಗಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ಶೃಂಗದಲ್ಲಿ ವರ್ಲ್ಡ್ ಎಕಾನಾಮಿಕ್ ಫೋರಂ ಕ್ರಿಸ್ಟೋಫ್ ವುಲ್ಫ್, ಬಿಸ್ನೆಸ್ ಎಕ್ಸ್‍ಪರ್ಟ್ ಆಂಡ್ರೆ ಆಂಡೋನಿಯನ್, ಟೆಕ್ನಾಲಜಿ ನಿಪುಣ ಯಾಶಿಫುಮಿ ಕಾಟೋ, ಲಾಜಿಸ್ಟಿಕ್ಸ್ ಪರಿಣಿತರಾದ ಮಾರಿಯಮ್ ಅಲ್-ಫೌಂಡ್ರೆ ಮುಂತಾದವರು ವರ್ಚುವಲ್ ಸಭೆಯಲ್ಲಿ ಪಾಲ್ಗೊಂಡು ತಮ್ಮ ವಿಚಾರಗಳನ್ನು ಮಂಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X