Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ: 72 ಕಡಲಾಮೆ ಮರಿಗಳು...

ಕುಂದಾಪುರ: 72 ಕಡಲಾಮೆ ಮರಿಗಳು ಸಮುದ್ರಕ್ಕೆ

ವಾರ್ತಾಭಾರತಿವಾರ್ತಾಭಾರತಿ7 April 2021 6:55 PM IST
share
ಕುಂದಾಪುರ: 72 ಕಡಲಾಮೆ ಮರಿಗಳು ಸಮುದ್ರಕ್ಕೆ

ಕುಂದಾಪುರ, ಎ.7: ಕೋಡಿ ಲೈಟ್‌ಹೌಸ್ ಬೀಚ್‌ನ ಕಡಲ ತೀರದಲ್ಲಿ ನೆಟ್‌ಗಳ ಮೂಲಕ ರಕ್ಷಿಸಲಾಗಿದ್ದ 7ನೇ ಹ್ಯಾಚರಿಯಲ್ಲಿದ್ದ ಕಡಲಾಮೆಯ ಮೊಟ್ಟೆಗಳಲ್ಲಿ 72 ಮರಿಗಳು ಮಂಗಳವಾರ ರಾತ್ರಿ ಹೊರಬಂದಿದ್ದು, ಅವುಗಳನ್ನು ಸುರಕ್ಷಿತವಾಗಿ ಸಮುದ್ರದ ಮಡಿಲಿಗೆ ಸೇರಿಸಲಾಗಿದೆ.

ಈ ವರ್ಷದ ಜ.22ರಿಂದ ಮಾ.3ರವರೆಗೆ ಕೋಡಿ ಲೈಟ್‌ಹೌಸ್ ಬೀಚ್‌ನಲ್ಲಿ 10 ಹಾಗೂ ಗೋಪಾಡಿ ಬೀಚ್‌ನಲ್ಲಿ ಒಂದು ಕಡೆ ಸೇರಿದಂತೆ ಒಟ್ಟು 11 ಕಡೆಗಳಲ್ಲಿ ಅಪರೂಪದ ಆಲಿವ್ ರಿಡ್ಲೇ ಪ್ರಬೇಧಕ್ಕೆ ಸೇರಿದ ಕಡಲಾಮೆಗಳು ಬಂದು ಮೊಟ್ಟೆ ಇಟ್ಟು ತೆರಳಿವೆ. ಇವುಗಳ ಪೈಕಿ ಮೊದಲೆರಡು ಹ್ಯಾಚರಿಗಳಿಂದ ಮಾ.18ರ ರಾತ್ರಿ ಒಟ್ಟು 120 ಮರಿಗಳು ಮೊಟ್ಟೆಯೊಡೆದು ಹೊರಬಂದಿದ್ದು, ಅವುಗಳನ್ನು ಸುರಕ್ಷಿತವಾಗಿ ಅರಬಿಸಮುದ್ರಕ್ಕೆ ಸೇರಿಸಲಾಗಿತ್ತು.

ಅಂದಿನಿಂದ ಇಂದಿನವರೆಗೆ ಬೀಜಾಡಿಯ ಒಂದು ಹ್ಯಾಚರಿ ಸೇರಿದಂತೆ ಒಟ್ಟು ಏಳು ಗೂಡುಗಳಿಂದ ಒಟ್ಟು ಸುಮಾರು 370 ಮರಿಗಳು ಮೊಟ್ಟೆ ಯಿಂದ ಹೊರಬಂದು ಸುರಕ್ಷಿತವಾಗಿ ಸಮುದ್ರ ಸೇರಿವೆ ಎಂದು ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ತಿಳಿಸಿದ್ದಾರೆ.

ಕೋಡಿ ಬೀಚ್‌ನಲ್ಲಿ ಇನ್ನು ನಾಲ್ಕು ಹ್ಯಾಚರಿಗಳಲ್ಲಿ ಅಂದಾಜು 400 ಮೊಟ್ಟೆಗಳಿದ್ದು, ಅವುಗಳಿಂದ ಮೇ ಮೊದಲ ವಾರದವರೆಗೂ ಮೊಟ್ಟೆ ಯೊಡೆದು ಮರಿಗಳು ಹೊರಬರುವ ನಿರೀಕ್ಷೆ ಇದೆ. ಸಾಮಾನ್ಯವಾಗಿ ರಾತ್ರಿ ವೇಳೆ ಸುರಕ್ಷಿತ ಸಮುದ್ರ ತೀರಕ್ಕೆ ಬಂದು ಮರಳಿನಲ್ಲಿ ತಾಯಿ ಆಮೆ ಇಡುವ ಮೊಟ್ಟೆ ಸಾಮಾನ್ಯವಾಗಿ 50ರಿಂದ 55 ದಿನಗಳಲ್ಲಿ ಒಡೆದು ಮರಿಗಳು ಹೊರಬರುತ್ತವೆ ಎಂದು ಪ್ರಭಾಕರ ಕುಲಾಲ್ ತಿಳಿಸಿದರು.

ಈ ಬಾರಿ ತಾಯಿ ಆಮೆಗಳು 11 ಕಡೆಗಳಲ್ಲಿ ಒಟ್ಟು ಸುಮಾರು ಒಂದು ಸಾವಿರ ಮೊಟ್ಟೆಗಳನ್ನು ಇಟ್ಟಿದ್ದು, ಅವುಗಳಲ್ಲಿ ಇದುವರೆಗೆ 370 ಮರಿಗಳು ಹೊರಬಂದಿವೆ. 60 ದಿನಗಳವರೆಗೆ ನಾವು ಈ ಮೊಟ್ಟೆಗಳನ್ನು ಮುಟ್ಟುವುದಿಲ್ಲ. ಆ ಬಳಿಕ ಅವುಗಳನ್ನು ಪರಿಶೀಲಿಸಿ ವಿಲೇವಾರಿ ಮಾಡುತ್ತೇವೆ. ಮೊಟ್ಟೆಯಿಂದ ಹೊರಬಂದ ಕಡಲಾಮೆ ಮರಿಗಳಿಗೆ ಬೆಳಕಿನ ಮೂಲಕ ಅವುಗಳಾಗಿಯೇ ಕಡಲು ಸೇರಲು ಬೇಕಾದ ಮಾರ್ಗದರ್ಶನ ಮಾಡು ತ್ತೇವೆ ಎಂದವರು ಹೇಳಿದರು.

ಮಂಗಳವಾರ ಮಧ್ಯರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 2 ರವರೆಗೆ ಈ ಕಾರ್ಯಾಚರಣೆ ನಡೆಯಿತು. ರಾಜ್ಯ ಅರಣ್ಯ ಇಲಾಖೆಯ ಅರಣ್ಯ ಪಡೆ (ಪಿಸಿಸಿಎಫ್) ಮುಖ್ಯಸ್ಥ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಮೋಹನ್, ಕುಂದಾಪುರ ಉಪಅರಣ್ಯ ಸಂರಕ್ಷಣಾಧಿಕಾರಿ ಅಶೀಶ್ ರೆಡ್ಡಿ, ಅರಣ್ಯ ಇಲಾಖೆ ಸಿಬ್ಬಂದಿಗಳು, ಎಫ್‌ಎಸ್‌ಎಲ್ ಇಂಡಿಯಾ, ಕ್ಲೀನ್ ಕುಂದಾಪುರ ಪ್ರಾಜೆಕ್ಟ್, ರೀಫ್ ವಾಚ್ ಸಂಸ್ಥೆಯ ಸದಸ್ಯರು, ಸ್ಥಳೀಯ ಕೋಡಿ ಗ್ರಾಮಸ್ಥರು ತಡರಾತ್ರಿಯ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಪ್ರಭಾಕರ ಕುಲಾಲ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X