ಉಡುಪಿ ಜಿಲ್ಲಾ ಧರ್ಮೋತ್ಥಾನ ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಎ.7: ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆ ಮತ್ತು ಜಿಲ್ಲಾ ಧಾರ್ಮಿಕ ಪರಿಷತ್ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಧಾರ್ಮಿಕ ಕ್ಷೇತ್ರದಲ್ಲಿ ಸಮಾಜಮುಖಿಯಾಗಿ ಸೇವೆ ಸಲ್ಲಿಸಿದ ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿಂದ ಜಿಲ್ಲಾ ಧರ್ಮೋತ್ಥಾನ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಶಸ್ತಿ ಪುರಸ್ಕೃತರಿಗೆ 25,000 ರೂ. ನಗದು ಬಹುಮಾನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಎ.15 ಕೊನೆಯ ದಿನವಾಗಿದೆ. ಅರ್ಜಿ ಯನ್ನು ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಹಾಗೂ ಕಾರ್ಯದರ್ಶಿ, ಜಿಲ್ಲಾ ಧಾರ್ಮಿಕ ಪರಿಷತ್, ಜಿಲ್ಲಾ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ತಿನ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನಿಷ್ಠ 60 ವರ್ಷ ಮೇಲ್ಪಟ್ಟವರನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸಲಾಗುವುದು. ಧಾರ್ಮಿಕ ಕ್ಷೇತ್ರದಲ್ಲಿ ಸಮಾಜಮುಖಿಯಾಗಿ ಸೇವೆ ಸಲ್ಲಿಸಿದವರು ಹಾಗೂ ಇಲಾಖೆಯ ನಿಯಮಗಳಿಗೆ ಒಳಪಡುವ ಮತ್ತು ಪಂಥಗಳ ಸಾಧಕರನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.





