ಕರ್ತವ್ಯ ಲೋಪದ ಆರೋಪ : ಉಡುಪಿ ಬಿಇಒ ಅಮಾನತು
ಉಡುಪಿ, ಎ.7: ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಅವರನ್ನು ಕರ್ತವ್ಯ ಲೋಪದ ಆರೋಪದಲ್ಲಿ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಗಳು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮಂಜುಳಾ ವಿರುದ್ಧ ದೂರಿನ ಬಗ್ಗೆ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಇಲಾಖೆಗೆ ವರದಿ ಸಲ್ಲಿಸಿದ್ದರು. ಅದರಂತೆ ಸರಕಾರ ಇವರನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ ಇವರ ಲೀನ್ ಸ್ಥಾನವನ್ನು ಡಯಟ್ ಮಂಗಳೂರು ಇಲ್ಲಿ ಖಾಲಿ ಇರುವ ಹಿರಿಯ ಉಪನ್ಯಾಸಕರ ಹುದ್ದೆಗೆ ವರ್ಗಾಯಿಸಲಾಗಿದೆ ಎಂದು ಇಲಾಖಾ ಆದೇಶದಲ್ಲಿ ತಿಳಿಸಲಾಗಿದೆ.
Next Story





