Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೇಡಿಕೆಗಳು ಈಡೇರುವವರೆಗೂ ಸತ್ಯಾಗ್ರಹ...

ಬೇಡಿಕೆಗಳು ಈಡೇರುವವರೆಗೂ ಸತ್ಯಾಗ್ರಹ ಕೈಬಿಡುವುದಿಲ್ಲ: ಕೋಡಿಹಳ್ಳಿ ಚಂದ್ರಶೇಖರ್

ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ7 April 2021 9:48 PM IST
share
ಬೇಡಿಕೆಗಳು ಈಡೇರುವವರೆಗೂ ಸತ್ಯಾಗ್ರಹ ಕೈಬಿಡುವುದಿಲ್ಲ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು, ಎ.7: ಆರವೇ ವೇತನ ಆಯೋಗದ ಶಿಫಾರಸು ಜಾರಿ ಸಂಬಂಧ ರಾಜ್ಯ ಸರಕಾರ ಕೊಟ್ಟ ಮಾತು ಉಳಿಸಿಕೊಳ್ಳಲಿ. ಇಲ್ಲವಾದರೆ, ಗುರುವಾರವೂ ಮುಷ್ಕರದ ಬಿಸಿ ಎದುರಿಸಲಿ ಎಂದು ಕೆಎಸ್ಸಾರ್ಟಿಸಿ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ಬುಧವಾರ ಗಾಂಧಿನಗರದ ತಮ್ಮ ಕಚೇರಿಯಲ್ಲಿ ಮುಷ್ಕರ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಸತ್ಯಾಗ್ರಹ ಇಂದಿನಿಂದ ಆರಂಭವಾಗಿದ್ದು, ನಾಳೆಯೂ ಮುಂದುವರಿಯಲಿದೆ ಎಂದು ಪ್ರಕಟಿಸಿದರು.

ಸಾರಿಗೆ ನೌಕರರ ಬೇಡಿಕೆ ಈಡೆರಿಸಲು 700 ಕೋಟಿ ರೂಪಾಯಿ ಬೇಕಾಗುತ್ತದೆ, 700 ಕೋಟಿ ನಷ್ಟವಾಗುತ್ತದೆ ಎಂದು ಮಾತುಕತೆಗೆ ಹೋದಾಗ ಸರಕಾರ ಹೇಳಿದೆ. ಒಂದೂವರೆ ಲಕ್ಷ ಬಡ ಕಾರ್ಮಿಕರಿಗೆ ಇಷ್ಟು ಹಣ ನೀಡಿದರೆ ಅದು ನಷ್ಟ ಹೇಗೆ ಆಗುತ್ತದೆ. ನಿಮಗೆ ಬೇಕಾದ ಮಠಗಳಿಗೆ, ಜಾತಿ ಧರ್ಮಗಳಿಗೆ, ನಿಗಮ ಮಂಡಳಿ, ಅಭಿವೃದ್ಧಿ ಮಂಡಳಿಗೆ 500 ಕೋಟಿಗಳಿಗೂ ಹೆಚ್ಚು ಹಣಗಳನ್ನು ಬಿಡುಗಡೆ ಮಾಡುತ್ತಿದ್ದೀರಿ ಅದು ನಿಮಗೆ ನಷ್ಟವೆನಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರ ಮುಂಜಾನೆಯಿಂದಲೇ ಸಾರಿಗೆ ಸತ್ಯಾಗ್ರಹ ಶುರುವಾಗಿದ್ದು, ನ್ಯಾಯಯುತ ಬೇಡಿಕೆಗಳು ಈಡೇರಿಸುವರೆಗೂ ಈ ಸತ್ಯಾಗ್ರಹ ಕೈಬಿಡುವುದಿಲ್ಲ. ಅಲ್ಲದೆ, ಯಾವುದೇ ರೀತಿಯ ಕೋವಿಡ್ ನೀತಿ ನಿಯಮ ಉಲ್ಲಂಘನೆ, ಅಹಿತಕರ ಘಟನೆ ನಡೆದಿಲ್ಲ. ಶಿಸ್ತಿನೊಂದಿಗೆ ಸತ್ಯಾಗ್ರಹ ಮುಂದುವರಿದಿದೆ ಎಂದರು.

ಇದರ ಜೊತೆಗೆ ಬರುವ ಎಪ್ರಿಲ್ 10 ರಂದು 4 ನಿಗಮಗಳಿಗೆ ಸಂಬಂಧಿಸಿದಂತೆ ವಿಭಾಗ ಸಭೆಯನ್ನು ಮಾಡಲಾಗುತ್ತೆ. ಬೆಳಗಾವಿಯಲ್ಲಿ ಮುಖ್ಯಸ್ಥರ ಜೊತೆಗೆ ಸಭೆ ಮಾಡುತ್ತೇವೆ. ಅಲ್ಲಿ, ಅನಿರ್ದಿಷ್ಟಾವಧಿ ಸತ್ಯಾಗ್ರಹದ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ತದನಂತರ, ಎ.11 ರಂದು ಗುಲ್ಬರ್ಗಾ, ಬೀದರ್ ನಲ್ಲಿ ಸಭೆ ನಡೆಸಿ ಕುಂದುಕೊರತೆ ಕುರಿತು ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದರು.

ಎಸ್ಮಾ ಜಾರಿ: ರಾಜ್ಯ ಸರಕಾರ ಎಸ್ಮಾ ಜಾರಿ ಮಾಡಲಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಎಸ್ಮಾ ವಿಶೇಷ ಸಂದರ್ಭದಲ್ಲಿ ಬಳಕೆ ಆಗಬೇಕು. ಕರ್ನಾಟಕದಲ್ಲಿ ಅಂತಹ ಸನ್ನಿವೇಶ ಸೃಷ್ಟಿಯಾಗಿಲ್ಲ. ಸರಕಾರದ ವೈಫಲ್ಯ ಕಾಣಿಸುತ್ತಿದೆ. ಅಲ್ಲದೆ, ಸಾರಿಗೆ ಸಚಿವರು ಮಾತುಕತೆ ಮಾಡಿಲ್ಲ. ಹೀಗಾಗಿ ಸತ್ಯಾಗ್ರಹ ಅನಿವಾರ್ಯ ಆಯಿತು ಎಂದು ತಿಳಿಸಿದರು.

ವೇತನ ಕಡಿತ: ಮಾರ್ಚ್ ತಿಂಗಳ ವೇತನ ಬಿಡುಗಡೆ ಮಾಡುವುದಿಲ್ಲ ಎನ್ನುವುದು ತಪ್ಪು. ದುಡಿದಿರುವ ವೇತನ ನೀಡುವುದಿಲ್ಲವೆಂದರೆ ಹೇಗೆ ಎಂದು ಪ್ರಶ್ನಿಸಿದ ಅವರು, ಇಂತಹ ತಪ್ಪು ಸರಕಾರ ಮಾಡಬಾರದು ಎಂದು ಕೋಡಿಹಳ್ಳಿ ನುಡಿದರು.

`ವಾಸ್ತವ ಸ್ಥಿತಿ ವಿಜಯೇಂದ್ರಗೆ ಗೊತ್ತಿಲ್ಲ'

ಬಿಜೆಪಿ ನಾಯಕ ಬಿ.ವೈ. ವಿಜಯೇಂದ್ರ ಮುಷ್ಕರ ಕೈ ಬಿಡಬೇಕು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಕೋಡಿಹಳ್ಳಿ ಚಂದ್ರಶೇಖರ್, ವಿಜಯೇಂದ್ರಗೆ ವಾಸ್ತವ ಸ್ಥಿತಿ ಗೊತ್ತಿಲ್ಲ, ಅದನ್ನು ಅರ್ಥ ಮಾಡಿಕೊಳ್ಳಬೇಕು. ಈ ಸಮಸ್ಯೆ ಅರ್ಥ ಮಾಡಿಕೊಂಡು, ನಿಮ್ಮ ಸರಕಾರಕ್ಕೆ ಹೇಳಿ, ಶೋಷಣೆ ಮುಕ್ತ ಸಾರಿಗೆ ಮಾಡಿ ಎಂದು ತಿರುಗೇಟು ನೀಡಿದರು.

ಸರಕಾರ ಸ್ಪಂದಿಸಲಿ

ಸಾರಿಗೆ ನೌಕರರ ಬೇಡಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಸ್ಪಂದಿಸಬೇಕು. ಜೊತೆಗೆ ಸಾರಿಗೆ ನೌಕರರು ಹಠಕ್ಕೆ ಬೀಳದೆ, ಕೆಲಸಕ್ಕೆ ಹಾಜರಾಗುವ ಮೂಲಕ ಪ್ರತಿಭಟಿಸಿ, ಸಾರ್ವಜನಿಕರು ತೊಂದರೆ ಆಗದಂತೆ ನೋಡಿಕೊಳ್ಳಿ.

-ಬಡಗಲಪುರ ನಾಗೇಂದ್ರ, ಅಧ್ಯಕ್ಷ, ಕರ್ನಾಟಕ ರಾಜ್ಯ ರೈತ ಸಂಘ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X