ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ: ಬೆಂಗಳೂರು ನಗರ ವಿವಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು, ಎ.7: ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಎ.8 ಹಾಗೂ 9ರಂದು ನಡೆಯಬೇಕಾಗಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವಿಶ್ವವಿದ್ಯಾಲಯವು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಉಂಟಾಗಬಹುದಾದ ವ್ಯತ್ಯಯದಿಂದಾಗಿ ವಿದ್ಯಾರ್ಥಿಗಳ ಮನವಿ ಮೇರೆಗೆ ಎ.8 ಮತ್ತು 9ರಂದು ನಡೆಯಬೇಕಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕುಲಸಚಿವರು ತಿಳಿಸಿದ್ದಾರೆ.
Next Story