Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೀಲಾವರದಲ್ಲಿ ವಿಜಯನಗರ ಕಾಲದ ಶಾಸನ ಪತ್ತೆ

ನೀಲಾವರದಲ್ಲಿ ವಿಜಯನಗರ ಕಾಲದ ಶಾಸನ ಪತ್ತೆ

ವಾರ್ತಾಭಾರತಿವಾರ್ತಾಭಾರತಿ8 April 2021 7:08 PM IST
share
ನೀಲಾವರದಲ್ಲಿ ವಿಜಯನಗರ ಕಾಲದ ಶಾಸನ ಪತ್ತೆ

ಉಡುಪಿ, ಎ.8: ಬ್ರಹ್ಮಾವರ ತಾಲೂಕು ನೀಲಾವರದ ಮಹಿಷಮರ್ದಿನಿ ದೇವಸ್ಥಾನದ ಒಳಪ್ರದಕ್ಷಿಣಾ ಪಥದಲ್ಲಿ ವಿಜಯನಗರ ಕಾಲದ ಶಾಸನ ವೊಂದು ಪತ್ತೆಯಾಗಿದೆ ಎಂದು ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ (ಮಾಹೆ) ದ ಆಡಳಿತಾಧಿಕಾರಿ ಹಾಗೂ ಇತಿಹಾಸ ಸಂಶೋಧಕ ಡಾ.ಬಿ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಗುರುಮೂರ್ತಿ ಕೆ.ಕೆ ಹಾಗೂ ಸಂಶೋಧಕ ಶ್ರುತೇಶ್ ಆಚಾರ್ಯ ಇವರ ಸಹಾಯದಿಂದ ಓದಲಾದ ಈ ಶಾಸನವನ್ನು ಕ್ರಿ.ಶ 1468ರಲ್ಲಿ ಬರೆಸಲಾಗಿದ್ದು, ಆಗ ವಿಜಯನಗರದ ಅರಸನಾಗಿದ್ದ ವಿರೂಪಾಕ್ಷ ಮಹಾರಾಯನ ಕಾಲದ್ದಾಗಿದೆ.

ಆಗ ಬಾರಕೂರಿನ ರಾಜ್ಯಪಾಲನಾಗಿದ್ದವನು ವಿಠರಸ ಒಡೆಯ. ಇದೊಂದು ಧರ್ಮಶಾಸನ. ಇಲ್ಲಿ ನೀಲಾವರ ಗ್ರಾಮ ನಿಳುವರದ ಗ್ರಾಮ ಎಂಬುದಾಗಿ ಉಲ್ಲೇಖಿತವಾಗಿದೆ. ಹೆಚ್ಚಿನ ವಿಜಯನಗರ ಶಾಸನಗಳಲ್ಲಿ ರಾಜನ ಬಗ್ಗೆ ಹೇಳುವಾಗ ‘ಚತುಸ್ಸಮುದ್ರಾಧಿಪತಿ’ ಎಂಬ ಉಲ್ಲೇಖ ಬರುತ್ತದೆಯಾದರೂ ಇಲ್ಲಿ ರಾಜನ ಬಗ್ಗೆ ಹೇಳುವಾಗ ಅವನು ದಕ್ಷಿಣ ಪಶ್ಚಿಮ ಸಮುದ್ರದ ಮಧ್ಯೆ ಸಮಸ್ತವನು ಪ್ರತಿಪಾಲಿಸುತ್ತಿದ್ದ ಎಂಬುದಾಗಿ ಹೇಳಲಾಗಿದೆ.

ಇದನ್ನು ಸಂಗಮ ವಂಶದ ಕೊನೆಗಾಲದಲ್ಲಿ ರಾಜಕೀಯ ಹಿನ್ನಡೆಯ ಸೂಚನೆ ಎಂದೂ ಭಾವಿಸಬಹುದು. ಅಲ್ಲದೆ ಯೆಲ್ಲಪ್ಪ ಒಡೆಯ ಹಾಗೂ ಮಾಬಯ್ಯ ಒಡೆಯನ ಉಲ್ಲೇಖವೂ ಬರುತ್ತದೆ. ತೆಂಗಿನೆಣ್ಣೆಗೆ ಇದ್ದ ಪ್ರಾಮುಖ್ಯತೆ ಇಲ್ಲಿ ವ್ಯಕ್ತವಾಗಿದೆ. ಶಾಪವಾಕ್ಯಗಳನ್ನು ಉಲ್ಲೇಖಿಸುವಾಗ ಶಾಸನ ರಕ್ಷಿಸಿದರೆ ಸಿಗುವ ಪುಣ್ಯದ ಬಗ್ಗೆ ಹೇಳುವಾಗ ದೇವರಿಗೆ ತೆಂಗಿನೆಣ್ಣೆ ಹೊಯ್ದ ಫಲ ಎಂದಿರುವುದು ಬಹಳ ವಿಶೇಷವಾಗಿದೆ.

ಈ ಶಾಸನದ ಬಗ್ಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಸುಧೀರ ಕುಮಾರ್ ಶೆಟ್ಟಿ ತಿಳಿಸಿದ್ದು, ಸಂಶೋಧಕ ಸುಬಾಷ ನಾಯಕ್ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗ ಇದರ ಪ್ರತಿಮಾಡಲು ಸಹಕರಿಸಿದ್ದಾರೆ ಎಂದು ಡಾ.ಬಿ.ಜಗದೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಾರಕೂರಿನಲ್ಲೂ ಪತ್ತೆ: ಬಾರಕೂರಿನ ಮಣಿಗಾರ ಕೇರಿಯ ಸೋಮನಾಥೇಶ್ವರ ದೇವಸ್ಥಾನದ ಆವರಣದಲ್ಲೂ ಮಣ್ಣಿನ ಅಡಿಯಲ್ಲಿ ಶಿಲಾಶಾಸನ ಪತ್ತೆಯಾಗಿದೆ. ಇದು ಸಹ ವಿಜಯನಗರಕಾಲದ ಶಾಸನವಾಗಿದ್ದು ಸೋಮನಾಥೇಶ್ವರ ದೇವಸ್ಥಾನದ ಉಲ್ಲೇಖ ಹಾಗೂ ದಾನ ನೀಡಿದ ವಿವರ ಗಳಿವೆ. ಇದರ ಅಧ್ಯಯನವನ್ನು ಸಂಶೋಧಕ ಶ್ರುತೇಶ್ ಆಚಾರ್ಯ ಅವರ ಸಹಾಯದಿಂದ ಮಾಡಲಾಗುತ್ತಿದೆ ಎಂದು ಡಾ.ಬಿ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X