ಪರಸ್ಪರ ಅರಿತು ಸಹಬಾಳ್ವೆಯಿಂದ ಬದುಕಿ: ಡಾ.ಆರ್.ಜಿ.ಆನಂದ್

ಉಡುಪಿ, ಎ.8: ಮಕ್ಕಳು ಪರಸ್ಪರ ಅರಿತು ಸಹಬಾಳ್ವೆಯಿಂದ ಬದುಕಬೇಕು. ಕ್ರೀಡಾ ಕ್ಷೇತ್ರದಲ್ಲಿ ಮಕ್ಕಳನ್ನು ಉತ್ತೇಜಿಸುವುದು ಖೇಲೋ ಇಂಡಿಯಾ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಸ್ಯ ಡಾ.ಆರ್.ಜಿ.ಆನಂದ್ ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ನಿಟ್ಟೂರು ಬಾಲಕಿಯರ ಬಾಲಮಂದಿರದಲ್ಲಿ ಇಂದು ಆಯೋಜಿಸಲಾದ ಖೇಲೋ ಇಂಡಿಯಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್.ಶೇಷಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶೋಭಾ ಶೆಟ್ಟಿ, ನಿವೃತ್ತ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಬಾಲಕಿಯರ ಬಾಲ ಮಂದಿರದ ಅಧೀಕ್ಷಕಿ ಸುಮತಿ, ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಕಳ ಕಾರ್ಮಿಕ ನಿರೀಕ್ಷಕ ಪ್ರಸನ್ನ ಉಪಸ್ಥಿತರಿದ್ದರು.
Next Story





