ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಕೊರೋನ ಸೋಂಕು

ತಿರುವನಂತಪುರ, ಎ. 8: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿರುವುದಾಗಿ ಮುಖ್ಯಮಂತ್ರಿ ಕಾರ್ಯಾಲಯ ಗುರುವಾರ ಪ್ರಕಟನೆಯಲ್ಲಿ ತಿಳಿಸಿದೆ.
ಅವರ ಆರೋಗ್ಯ ಸ್ಥಿರವಾಗಿದೆ. ಯಾವುದೇ ತೊಂದರೆ ಕಂಡು ಬಂದಿಲ್ಲ ಎಂದು ಅದು ಹೇಳಿದೆ. ಅವರ ಪುತ್ರಿ ವೀಣಾ ಅವರು ಕೂಡ ಕೊರೋನ ಸೋಂಕಿಗೆ ಒಳಗಾಗಿದ್ದಾರೆ. ‘‘ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಕೋಝಿಕ್ಕೋಡ್ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದಿದ್ದವರು ಪರೀಕ್ಷೆಗೆ ಒಳಗಾಗಿ ’’ ಎಂದು ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.
Next Story