ಎ.10: ಬ್ಯಾರಿ ಜಾನಪದ ಕಲೆಗಳ ಸರ್ಟಿಫಿಕೇಟ್ ಕೋರ್ಸ್ ತರಬೇತಿಗೆ ಚಾಲನೆ
ಮಂಗಳೂರು, ಎ.8: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಸಂತ ಅಲೋಶಿಯಸ್ ಕಾಲೇಜಿನ ಸಹಕಾರದಲ್ಲಿ ಬ್ಯಾರಿ ಜಾನಪದ ಕಲೆಗಳ (ದಫ್, ಕೋಲ್ಕಲಿ, ಒಪ್ಪನೆ ಪಾಟ್)ಸರ್ಟಿಫಿಕೇಟ್ ಕೋರ್ಸ್ ತರಬೇತಿ ಶಿಬಿರಕ್ಕೆ ಎ.10ರಂದು ಮಧ್ಯಾಹ್ನ 2 ಗಂಟೆಗೆ ಕಾಲೇಜಿನ ಮಾಫೇಯಿ ಸೆಂಟರ್ ಎರಿಕ್ ಮಥಾಯಸ್ ಸಭಾಂಗಣದಲ್ಲಿ ಚಾಲನೆ ನೀಡಲಾಗುವುದು ಎಂದು ರಿಜಿಸ್ಟ್ರಾರ್ ಪೂರ್ಣಿಮಾ ತಿಳಿಸಿದ್ದಾರೆ.
ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ರೆ. ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ. ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ, ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಶೀರ್ ಬೈಕಂಪಾಡಿ, ಕಾಲೇಜಿನ ಕುಲಸಚಿವ ಡಾ. ಆಲ್ವಿನ್ ಡೇಸಾ, ಬ್ಯಾರಿ ಸಂಗೀತ ಕಲಾವಿದರ ಒಕ್ಕೂಟದ ಅಧ್ಯಕ್ಷ ಶಮೀರ್ ಮುಲ್ಕಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ರಹೀಸ್ ಟಿ. ಕಣ್ಣೂರು ಮತ್ತು ಕಾರ್ನಾಡ್ ಮುಲ್ಕಿಯ ದಫ್ ಉಸ್ತಾದ್ ಕೆ.ಎಚ್.ನೂರ್ ಮುಹಮ್ಮದ್ ಭಾಗವಹಿಸಲಿದ್ದಾರೆ.
Next Story





