'ಬೆಲ್ಕಿರಿ’ ದ್ವೈಮಾಸಿಕ ಸಂಚಿಕೆಗೆ ಬರಹ ಆಹ್ವಾನ
ಮಂಗಳೂರು, ಎ.8: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಬ್ಯಾರಿ ಭಾಷೆ, ಸಂಸ್ಕೃತಿ, ಸಾಹಿತ್ಯದ ಬೆಳವಣಿಗೆಗಾಗಿ ಪ್ರತೀ 2 ತಿಂಗಳಿಗೊಮ್ಮೆ ಪ್ರಕಟಿಸುವ ‘ಬೆಲ್ಕಿರಿ’ ದ್ವೈಮಾಸಿಕ ಸಂಚಿಕೆಯಲ್ಲಿ ಪ್ರಕಟಿಸಲು ಬ್ಯಾರಿ ಇತಿಹಾಸ/ಸಂಶೋಧನಾ ಲೇಖನಗಳು/ಬ್ಯಾರಿ ಪುಸ್ತಕ ಪರಿಚಯ/ಮರೆಯಬಾರದ ಬ್ಯಾರಿ ಮಹನೀಯರು/ಬ್ಯಾರಿ ಕಥೆ/ಕವನ/ಚುಟುಕುಗಳನ್ನು ಆಹ್ವಾನಿಸಲಾಗಿದೆ.
ನುಡಿ/ಬರಹ ಫಾಂಟ್‌ನಲ್ಲಿ ಟೈಪ್ ಮಾಡಿ ಕಳುಹಿಸಬಹುದು. ಹೆಸರು ಮತ್ತು ವಿಳಾಸಲ್ಲದ ಬರಹಗಳನ್ನು ಪ್ರಕಟಿಸಲಾಗುವುದಿಲ್ಲ. ಪ್ರಕಟಿತ ಬರಹಗಳಿಗೆ ಗೌರವ ಸಂಭಾವನೆ ಪಾವತಿಸಲಾಗುವುದು.
ಬರಹಗಳನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ, ಸಾಮರ್ಥ್ಯ ಸೌಧ, 2ನೆ ಮಹಡಿ, ಮಂಗಳೂರು ತಾಪಂ ಹಳೆ ಕಟ್ಟಡ, ಮಿನಿ ವಿಧಾನಸೌಧದ ಬಳಿ, ಮಂಗಳೂರು 575001 ಅಥವಾ ಬೆಲ್ಕಿರಿ ದ್ವೈಮಾಸಿಕ ಸಂಚಿಕೆಯ ಸಂಪಾದಕ/ಅಕಾಡಮಿಯ ಸದಸ್ಯ ಶಂಶೀರ್ ಬುಡೋಳಿ (ವಾಟ್ಸ್‌ಆಪ್ ಸಂಖ್ಯೆ: 9008857485/ಅಕಾಡಮಿಯ ವಾಟ್ಸ್‌ಆ್ಯಪ್ ಸಂಖ್ಯೆ: 7483946578) ಇವರಿಗೆ ಕಳಹಿಸಿಕೊಡಬಹುದು ಎಂದು ರಿಜಿಸ್ಟ್ರಾರ್ ಪೂರ್ಣಿಮಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





