Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನರು ಸಹಕರಿಸದಿದ್ದರೆ ಕಠಿಣ ಪರಿಸ್ಥಿತಿ...

ಜನರು ಸಹಕರಿಸದಿದ್ದರೆ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ: ಗೃಹ ಸಚಿವ ಬೊಮ್ಮಾಯಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ9 April 2021 5:37 PM IST
share
ಜನರು ಸಹಕರಿಸದಿದ್ದರೆ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ: ಗೃಹ ಸಚಿವ ಬೊಮ್ಮಾಯಿ ಎಚ್ಚರಿಕೆ

ಬೀದರ್, ಎ. 9: ಜನರ ಸಹಕಾರ ಇದ್ದರೆ ಮಾತ್ರ ಯಾವುದೇ ಲಾಕ್‍ಡೌನ್ ಮತ್ತು ಆರ್ಥಿಕ ನಿರ್ಬಂಧ ಇಲ್ಲದೆ ಕೋವಿಡ್ ನಿಯಂತ್ರಣ ಸಾಧ್ಯ. ಇಲ್ಲದಿದ್ದರೆ ಎಲ್ಲರೂ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಎಚ್ಚರಿಸಿದ್ದಾರೆ.

ಶುಕ್ರವಾರ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣ ಕೇವಲ ಸರಕಾರದ ಹೊಣೆಯಲ್ಲ. ಸಾರ್ವಜನಿಕರ ಜವಾಬ್ದಾರಿಯೂ ಇದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದಾರೆ. ಕೋವಿಡ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ರಾತ್ರಿ ಕರ್ಫ್ಯೂ ಜಾರಿ ಅನಿವಾರ್ಯವಾಗಿದೆ ಎಂದರು.

ನೈಟ್ ಕರ್ಫ್ಯೂ ಜಾರಿ ಮಾಡಲಾಗಿರುವ ಜಿಲ್ಲೆಗಳಲ್ಲಿ ನಿಯಂತ್ರಣ ಕ್ರಮಗಳನ್ನ ಕಟ್ಟುನಿಟ್ಟಾಗಿ ಅನುಷ್ಠಾಕ್ಕೆ ತರುವಂತೆ ಈಗಾಗಲೇ ನಾನು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದ ಅವರು, ಜನರಿಗೆ ಈಗ ಕೋವಿಡ್ ಬಗ್ಗೆ ಹೆಚ್ಚಿಗೆ ಹೇಳಬೇಕಾದ ಅವಶ್ಯಕತೆ ಇಲ್ಲ. ಕೋವಿಡ್ ನಿಯಂತ್ರಣ ತಪ್ಪಿದರೆ ಕಠಿಣ ಪರಿಸ್ಥಿತಿ ಎದುರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಾರ್ವಜನಿಕರು ಮಾರ್ಗಸೂಚಿ ಪಾಲಿಸುವ ಮೂಲಕ ಕಠಿಣ ಕ್ರಮಕ್ಕೆ ಅವಕಾಶ ಮಾಡಿಕೊಡಬಾರದು. ಸದ್ಯಕ್ಕೆ ನಾವೇ ಪರಿಸ್ಥಿತಿಯನ್ನು ನಿಭಾಯಿಸುವ ಸ್ಥಿತಿಯಲ್ಲಿದ್ದೇವೆ. ಆದರೆ, ಇದಕ್ಕೆ ಜನರ ಸಹಕಾರ ಅತಿಮುಖ್ಯ. ಜನರ ಸಹಕಾರ ಸಿಕ್ಕಿದ್ದೇ ಆದರೆ ಇದನ್ನು ನಾವು ಯಾವುದೇ ಲಾಕ್‍ಡೌನ್ ಇಲ್ಲದೆ, ಆರ್ಥಿಕ ನಿರ್ಬಂಧ ಎದುರಿಸದೇ ನಿಯಂತ್ರಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಮತ್ತೊಮ್ಮೆ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯಲ್ಲಿ ನಾವಿರಬೇಕು ಎಂದು ಬೊಮ್ಮಾಯಿ ಹೇಳಿದರು.

ರಾತ್ರಿ ವೇಳೆ ಬಾರ್ ಮತ್ತು ಪಬ್‍ಗಳನ್ನು ಬಂದ್ ಮಾಡಲಾಗುವುದು. ಆದರೆ, ಬಸ್ ಸಂಚಾರಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸುವವರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ ಕಾರ್ಯಕ್ರಮಗಳ ಆಯೋಜಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.

`ರಾತ್ರಿ ವೇಳೆ ಕೋವಿಡ್-19 ಹರಡದಂತೆ ತಡೆಯುವ ದೃಷ್ಟಿಯಿಂದ ಕೆಲ ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಜನರ ಸಹಕಾರ ಅತಿಮುಖ್ಯ. ಇಲ್ಲದಿದ್ದರೆ ಎಲ್ಲರೂ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ'

-ಬಸವರಾಜ ಬೊಮ್ಮಾಯಿ, ಗೃಹ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X