Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 3ನೇ ದಿನವೂ ಮುಂದುವರಿದ ಸಾರಿಗೆ ನೌಕರರ...

3ನೇ ದಿನವೂ ಮುಂದುವರಿದ ಸಾರಿಗೆ ನೌಕರರ ಮುಷ್ಕರ: ಸರಕಾರಿ ಬಸ್ ನಿಲ್ದಾಣಗಳಲ್ಲಿ ಖಾಸಗಿ ಬಸ್‍ಗಳ ದರ್ಬಾರ್

ವಾರ್ತಾಭಾರತಿವಾರ್ತಾಭಾರತಿ9 April 2021 8:02 PM IST
share
3ನೇ ದಿನವೂ ಮುಂದುವರಿದ ಸಾರಿಗೆ ನೌಕರರ ಮುಷ್ಕರ: ಸರಕಾರಿ ಬಸ್ ನಿಲ್ದಾಣಗಳಲ್ಲಿ ಖಾಸಗಿ ಬಸ್‍ಗಳ ದರ್ಬಾರ್

ಬೆಂಗಳೂರು, ಎ.9: ಆರನೆ ವೇತನ ಆಯೋಗದ ಶಿಫಾರಸು ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಹಾಗೂ ಸಾರಿಗೆ ಸಂಸ್ಥೆ ನೌಕರರ ಬಿಗಿಪಟ್ಟು 3ನೆ ದಿನವೂ ಮುಂದುವರಿದಿರುವುದರಿಂದ ಪ್ರಯಾಣಿಕರು ಸರಕಾರಿ ಬಸ್‍ಗಳಿಲ್ಲದೆ ಪರದಾಡುವಂತಹ ಪರಿಸ್ಥಿತಿ ಉಂಟಾಯಿತು.

ಮತ್ತೊಂದು ಕಡೆ ಖಾಸಗಿ ಬಸ್‍ಗಳು ರಾಜ್ಯದ ಸರಕಾರಿ ಬಸ್ ನಿಲ್ದಾಣಗಳಲ್ಲಿ ನಿಂತಿವೆಯಾದರೂ ಜನರು ಸರಕಾರಿ ಬಸ್‍ಗಳು ಇಲ್ಲ ಎಂಬ ಕಾರಣಕ್ಕೆ ಬಸ್ ನಿಲ್ದಾಣಗಳ ಕಡೆಗೆ ಹೆಚ್ಚಾಗಿ ಬರುತ್ತಿಲ್ಲ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಸೇರಿ ರಾಜ್ಯದ ಇತರೆ ಬಸ್ ನಿಲ್ದಾಣಗಳಲ್ಲಿ ಕಡಿಮೆ ಸಂಖ್ಯೆಯಲ್ಲಿ ಜನರು ಬಸ್‍ಗಳಿಗೆ ಕಾಯುತ್ತಾ ನಿಂತಿರುವ ದೃಶ್ಯ ಕಂಡು ಬಂದಿತು.  

ಬಸ್ ನಿಲ್ದಾಣಗಳ ಹೊರಗಡೆ ನಿಂತಿದ್ದ ಖಾಸಗಿ ಬಸ್‍ಗಳು, ಆಟೋ, ಟ್ಯಾಕ್ಸಿ ಇನ್ನಿತರೆ ವಾಹನಗಳು ಪ್ರಯಾಣಿಕರಿಂದ ದುಪ್ಪಟ್ಟು ಹಣವನ್ನು ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳಿವೆ. ಕೂಲಿ ಕಾರ್ಮಿಕರು, ಬಡವರು, ಮಧ್ಯಮ ವರ್ಗದವರು ದುಪ್ಪಟ್ಟು ಹಣವನ್ನು ನೀಡಲಾಗದೆ ಮತ್ತೊಂದು ದಿನ ಊರಿಗೆ ಹೋದರಾಯಿತು ಎಂದು ಮನೆ ಕಡೆಗೆ ಮುಖ ಮಾಡಿದರೆ, ಅನಿವಾರ್ಯತೆ ಇದ್ದವರು ದುಪ್ಪಟ್ಟು ಹಣವನ್ನು ನೀಡಿಯೇ ಪ್ರಯಾಣ ಮಾಡುತ್ತಿದ್ದಾರೆ. ಇದರಿಂದ, ಪ್ರಯಾಣಿಕರು ಸರಕಾರ, ಸಾರಿಗೆ ನೌಕರರ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಸಾರಿಗೆ ಇಲಾಖೆ ಅಧಿಕಾರಿಗಳು ಮುಷ್ಕರದಲ್ಲಿ ನಿರತರಾಗಿರುವ ಸಿಬ್ಬಂದಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಆದರೆ, ಆ ನೋಟಿಸ್‍ಗೆ ಸಿಬ್ಬಂದಿಗಳು ಯಾವುದೇ ಉತ್ತರವನ್ನು ನೀಡಿಲ್ಲ.

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಜನರು ರಾಜಧಾನಿಯಿಂದ ಇತರೆ ಜಿಲ್ಲೆಗಳಿಗೆ ತೆರಳಲು ಮುಂದಾಗಿದ್ದಾರೆ. ಆದರೆ, ಇದೇ ಸಂದರ್ಭದಲ್ಲಿ ಬಿಎಂಟಿಸಿ, ಕೆಎಸ್ಸಾರ್ಟಿಸಿ ಸೇರಿ ನಾಲ್ಕು ವಿಭಾಗಗಳ ಬಸ್‍ಗಳು ಮುಷ್ಕರದಿಂದಾಗಿ ನಿಂತಲ್ಲೆ ನಿಂತಿವೆ. ಜನರು ಖಾಸಗಿ ಬಸ್‍ಗಳಿಗೆ ದುಪ್ಪಟ್ಟು ಹಣವನ್ನು ನೀಡಿ ತಮ್ಮ ಊರುಗಳಿಗೆ ತಲುಪಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಚಾಲಕ ಆತ್ಮಹತ್ಯೆಗೆ ಯತ್ನ

ಸಾರಿಗೆ ನೌಕರರ ಮುಷ್ಕರದ ನಡುವೆಯೇ ಕರ್ತವ್ಯಕ್ಕೆ ಹಾಜರಾಗಬೇಕೆಂಬ ಹಿರಿಯ ಅಧಿಕಾರಿಗಳ ಒತ್ತಡಕ್ಕೆ ನೊಂದು ಚಾಲಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗದಗ ನಗರದ ಹುಡ್ಕೊ ಕಾಲನಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಬಸ್ ಚಾಲಕನನ್ನು ವಸಂತ ರಾಮದುರ್ಗ(48) ಎಂದು ಗುರುತಿಸಲಾಗಿದೆ.

536 ಬಸ್‍ಗಳ ಸಂಚಾರ

ಶುಕ್ರವಾರ ಕೆಎಸ್ಸಾರ್ಟಿಸಿ-214, ಬಿಎಂಟಿಸಿ-75, ಎನ್‍ಇಕೆಆರ್‍ಟಿಸಿ-172, ಎನ್‍ಡಬ್ಲ್ಯುಕೆಆರ್ ಟಿಸಿ-75 ಬಸ್‍ಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

42 ಕೋಟಿ ರೂ. ನಷ್ಟ

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಕಳೆದ 3 ದಿನಗಳಲ್ಲಿ ಕೆಎಸ್ಸಾರ್ಟಿಸಿ ಸೇರಿ ನಾಲ್ಕು ನಿಗಮಗಳಿಗೆ 42 ಕೋಟಿ ರೂ. ನಷ್ಟ ಉಂಟಾಗಿದ್ದು, ಪ್ರತಿದಿನ ಸರಾಸರಿ 7 ಕೋಟಿ ರೂ. ನಷ್ಟವಾಗಿದೆ. ಬಿಎಂಟಿಸಿಗೆ ಕಳೆದ 3 ದಿನದ ಮುಷ್ಕರದಿಂದ 9 ಕೋಟಿ ನಷ್ಟ ಆಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X