Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗೆ...

ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗೆ ಅಡ್ಡಿಪಡಿಸಿದರೆ ಗಂಭೀರ ಕ್ರಮ: ಸಾರಿಗೆ ಸಚಿವ ಸವದಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ9 April 2021 10:10 PM IST
share
ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗೆ ಅಡ್ಡಿಪಡಿಸಿದರೆ ಗಂಭೀರ ಕ್ರಮ: ಸಾರಿಗೆ ಸಚಿವ ಸವದಿ ಎಚ್ಚರಿಕೆ

ಬೆಂಗಳೂರು, ಎ.9: ಸಾರಿಗೆ ನೌಕರರ ಮುಷ್ಕರದ ನಡುವೆಯೂ ಕೆಲವು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿ ಜನ ಸೇವೆಗೆ ಸ್ಪಂದಿಸಲು ಮುಂದಾಗುತ್ತಿದ್ದರೂ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕೆಲವು ಕಾರ್ಮಿಕ ಮುಖಂಡರೊಂದಿಗೆ ಸೇರಿ ಬೆದರಿಕೆ ಒಡ್ಡುತ್ತಾ ಅವರ ಕೆಲಸ ಕಾರ್ಯಗಳಿಗೆ ಅಡ್ಡಿಪಡಿಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದ್ದು, ಇಂಥ ಕೃತ್ಯಕ್ಕೆ ಮುಂದಾಗುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಲಕ್ಷ್ಮಣ ಸವದಿ ಅವರು, ಬಹುತೇಕ ಸಾರಿಗೆ ನೌಕರರಿಗೆ ತಮ್ಮ ವೇತನ ಹೆಚ್ಚಳವಾದರೆ ಸಾಕು, ಈ ಮುಷ್ಕರವಾಗಲೀ ಅಥವಾ ವೇತನ ಆಯೋಗದ ಶಿಫಾರಸ್ಸುಗಳ ಜಾರಿಯಾಗಲಿ ಅವಶ್ಯವಿಲ್ಲ ಎಂಬ ಮನೋಭಾವನೆಯಿಂದ ಸ್ವಯಂ ಪ್ರೇರಿತರಾಗಿ ಕರ್ತವ್ಯ ನಿರ್ವಹಿಸಲು ಮುಂದಾಗುತ್ತಿದ್ದಾರೆ.

ಆದರೆ ಈ ಮುಷ್ಕರವನ್ನೇ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಗಣಿಸಿದವರು ಇವರಿಗೆ ಅಡ್ಡಿಪಡಿಸುತ್ತಿರುವುದು ಸರಿಯಲ್ಲ. ಇಂಥ ಕಾನೂನು ವಿರೋಧಿ ದುಷ್ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ನಮ್ಮ ಕರೆಗೆ ಓಗುಟ್ಟು ಯಾರೇ ಕರ್ತವ್ಯಕ್ಕೆ ಹಾಜರಾದರೂ ಅಂತಹವರಿಗೆ ಸೂಕ್ತ ರಕ್ಷಣೆ ಕಲ್ಪಿಸುವುದು ನಮ್ಮ ಸರಕಾರದ ಹೊಣೆಯಾಗಿದೆ. ಹೀಗಾಗಿ, ಈ ಬಗ್ಗೆ ಯಾರೂ ಅಂಜಿಕೆ ಪಡಬೇಕಾಗಿಲ್ಲ ಎಂದು ಹೇಳಿದ್ದಾರೆ.

ನಮ್ಮ ಸರಕಾರದ ಪದೇ ಪದೇ ವಿನಂತಿಸಿಕೊಂಡಿದ್ದರೂ ಸಹ ಸಾರಿಗೆ ನೌಕರರ ಮುಷ್ಕರ ಮೂರನೆಯ ದಿನಕ್ಕೂ ಮುಂದುವರಿದು ರಾಜ್ಯಾದ್ಯಂತ ಅಸಂಖ್ಯಾತ ಪ್ರಯಾಣಿಕರಿಗೆ ತೊಂದರೆಯಾಗಿರುವುದು ತೀರಾ ಬೇಸರದ ಬೆಳವಣಿಗೆಯಾಗಿದೆ. ನಾಡಿನಾದ್ಯಂತ ಈ ಮುಷ್ಕರದಿಂದ ಸಾರ್ವಜನಿಕರೂ ಬೇಸತ್ತು ಮುಷ್ಕರ ನಿರತರ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ, ಮುಷ್ಕರವನ್ನು ತಕ್ಷಣ ನಿಲ್ಲಿಸಿ ಕರ್ತವ್ಯಕ್ಕೆ ಹಾಜರಾಗಲು ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. 

ಸಾರಿಗೆ ನೌಕರರಿಗೆ ವೇತನ ಪರಿಷ್ಕರಣೆ ಮಾಡುವ ವಿಚಾರದಲ್ಲಿ ಸರಕಾರ ಮೀನಮೇಷ ನಡೆಸುತ್ತಿಲ್ಲ. ಪ್ರಸ್ತುತ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರುವುದರಿಂದ ಈ ಬಗ್ಗೆ ಚುನಾವಣಾ ಆಯೋಗದ ಅನುಮತಿಗಾಗಿ ಸ್ವಲ್ಪ ಕಾಯುವುದು ಅನಿವಾರ್ಯವಾಗಿದೆ. ಆದರೆ ಈ ಅಂಶವನ್ನೂ ತಪ್ಪಾಗಿ ಬಿಂಬಿಸಿ ಮುಗ್ಧ ಸಾರಿಗೆ ನೌಕರರನ್ನು ಹಾದಿ ತಪ್ಪಿಸಿ ಮತ್ತಷ್ಟು ಸಂಕಷ್ಟಕ್ಕೆ ತಳ್ಳುವ ಹುನ್ನಾರವನ್ನು ಕೆಲವರು ನಡೆಸುತ್ತಿರುವುದು ವಿಷಾದನೀಯ. ಅಷ್ಟೇ ಅಲ್ಲ, ಸಾರಿಗೆ ನಿಗಮಗಳಿಗೆ ಸಂಬಂಧವೇ ಇಲ್ಲದವರು ಸಾರಿಗೆ ನೌಕರರ ಮನಸ್ಸಿನಲ್ಲಿ ಸರಕಾರದ ಬಗ್ಗೆ ಹುಳಿ ಹಿಂಡುತ್ತಾ ಸ್ವಯಂ ಘೋಷಿತ ಮುಖಂಡರಾಗಲು ಹವಣಿಸುತ್ತಿದ್ದಾರೆ. ಇಂಥವರ ಬಗ್ಗೆ ನಮ್ಮ ನೌಕರ ಬಾಂಧವರು ಎಚ್ಚರಿಕೆಯಿಂದಿರಬೇಕು ಎಂದು ಹೇಳಿದ್ದಾರೆ.

ಆದರೆ ಇಷ್ಟೆಲ್ಲಾ ಕುತಂತ್ರ-ಪ್ರಚೋದನೆಗಳ ನಡುವೆಯೂ ಕಳೆದೆರಡು ದಿನಗಳಿಂದ ನಮ್ಮ ನಾಲ್ಕೂ ಸಾರಿಗೆ ನಿಗಮಗಳ ಸಾವಿರಾರು ಬಸ್ಸುಗಳು ಸಂಚರಿಸಲು ಧೈರ್ಯದಿಂದ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಂಥ ನಮ್ಮ ಕೆಲವು ಸಾರಿಗೆ ಸಿಬ್ಬಂದಿಗಳ ಸೇವಾಮನೋಭಾವವನ್ನು ನಾನು ಮುಕ್ತ ಕಂಠದಿಂದ ಪ್ರಶಂಸಿಸುತ್ತೇನೆ ಎಂದಿದ್ದಾರೆ.

ಇದೇ ರೀತಿ ನಮ್ಮ ಮನವಿಗೆ ಓಗುಟ್ಟು ಖಾಸಗಿ ವಾಹನ ಮಾಲಕರೂ ತಮ್ಮ ಬಸ್ಸು, ಮ್ಯಾಕ್ಸಿ ಕ್ಯಾಬ್, ಮತ್ತಿತರ ವಾಹನಗಳ ಸೇವೆಯನ್ನು ವ್ಯಾಪಕವಾಗಿ ಒದಗಿಸಿಕೊಟ್ಟು ಸಾರ್ವಜನಿಕರಿಗೆ ಸ್ಪಂದಿಸಿರುವುದು ಸಹ ಶ್ಲಾಘನೀಯ. ಇದೇ ರೀತಿ ಮುಂದೆಯೂ ಅವರ ಸಹಕಾರವನ್ನು ನಿರೀಕ್ಷಿಸುತ್ತೇವೆ ಎಂದರು.

ವಾಹನಗಳ ದಾಖಲಾತಿ ಸಿಂಧುತ್ವ ವಿಸ್ತರಣೆ: ಈ ಮುಷ್ಕರದ ಸಂದರ್ಭದಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಮೋಟಾರು ವಾಹನಗಳ ಕಾಯ್ದೆ 1988 ಮತ್ತು ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989 ರಡಿಯಲ್ಲಿ ವಿತರಿಸಿರುವ ಎಲ್ಲ ತರಹದ ದಾಖಲಾತಿಗಳ ಪೈಕಿ, 2020ರ ಫೆ.1ರಿಂದ ಸಿಂಧುತ್ವ ಮುಕ್ತಾಯಗೊಂಡಿರುವಂತಹ ದಾಖಲಾತಿಗಳಿಗೆ ಸೀಮಿತಗೊಳಿಸಿ ಸಿಂಧುತ್ವದ ಅವಧಿಯನ್ನು 2021ರ ಜೂ.30ರವರೆಗೆ ವಿಸ್ತರಿಸಲಾಗಿದೆ ಎಂದಿದ್ದಾರೆ.

ವದಂತಿಗಳಿಗೆ ಕಿವಿಕೊಡದೆ ಕರ್ತವ್ಯಕ್ಕೆ ಹಾಜರಾಗಿ

‘ನಮ್ಮ ಸಾರಿಗೆ ನೌಕರ ಬಾಂಧವರು ಯಾವುದೇ ವದಂತಿಗಳಿಗೆ ಕಿವಿಕೊಡದೆ ಮತ್ತು ಪ್ರಚೋದನೆಗೆ ಒಳಗಾಗದೆ ಮುಷ್ಕರವನ್ನು ಕೈಬಿಟ್ಟು ಕೂಡಲೇ ಕರ್ತವ್ಯಕ್ಕೆ ಮರಳುವ ಮೂಲಕ ಸಾರಿಗೆ ನಿಗಮಗಳ ಘನತೆ ಗೌರವಗಳನ್ನು ಮತ್ತಷ್ಟು ಹೆಚ್ಚಿಸುವಂತಾಗಲಿ ಎಂದು ಮತ್ತೊಮ್ಮೆ ಕಳಕಳಿಯಿಂದ ಮನವಿ ಮಾಡಿಕೊಂಡಿದ್ದಾರೆ.’

-ಲಕ್ಷ್ಮಣ ಸವದಿ, ಉಪ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X