ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನೆರವು

ಮಂಗಳೂರು, ಎ.9: ಸಮಾಜದ ಅಶಕ್ತರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸುಮಾರು 15 ಲಕ್ಷ ರೂ. ಮೊತ್ತದ ವಿವಿಧ ರೀತಿಯ ಆರ್ಥಿಕ ನೆರವನ್ನು ನಗರದ ಬಂಟ್ಸ್ ಹಾಸ್ಟೆಲ್‌ನಲ್ಲಿರುವ ಅಮೃತೋತ್ಸವ ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಕೊರೋನದಂತಹ ಆರ್ಥಿಕ ಸಂಕಷ್ಟದ ಮಧ್ಯೆಯೂ ಬಂಟ ಸಮಾಜದಲ್ಲಿ ಅಸಹಾಯಕರಾಗಿರುವವರನ್ನು ಗುರುತಿಸಿ ವಸತಿ ನಿರ್ಮಾಣ, ವೈದ್ಯಕೀಯ, ವಿದ್ಯಾರ್ಥಿ ವೇತನ, ಹೆಣ್ಣು ಮಕ್ಕಳ ವಿವಾಹಕ್ಕೆ ನೆರವು ನೀಡುತ್ತಾ ಬಂದಿದೆ ಎಂದರು.
ಒಕ್ಕೂಟದ ಪೋಷಕ ಸದಸ್ಯ ಅಧ್ಯಕ್ಷ ರವಿ ಶೆಟ್ಟಿ, ಉದ್ಯಮಿ ಗಜಾನನ ಪೂಂಜ ಮಾತನಾಡಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಒಕ್ಕೂಟದ ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜಾ, ಜೀವನ್ ಶೆಟ್ಟಿ ಮುಲ್ಕಿ, ದೇವಪ್ಪಶೇಖ, ಲೋಕಯ ಶೆಟ್ಟಿ ಮುಂಚೂರು, ಪ್ರಕಾಶ್ ಶೆಟ್ಟಿ ಪಡುಬಿದ್ರೆ, ಸುದರ್ಶನ್ ಶೆಟ್ಟಿ ಪೆರ್ಮಂಕಿ, ಪ್ರದೀಪ್ ರೈ, ಈಶ್ವರ್ ಶೆಟ್ಟಿ ಚಿಪ್ಪಾಡಿ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್ ಕಾರ್ಯಕ್ರಮ ನಿರೂಪಿಸಿದರು.





