Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ ಮುಸ್ಲಿಂ ಲೀಗ್ ಕಾರ್ಯಕರ್ತನ ಕೊಲೆ...

ಕೇರಳ ಮುಸ್ಲಿಂ ಲೀಗ್ ಕಾರ್ಯಕರ್ತನ ಕೊಲೆ ಪ್ರಕರಣ: ಓರ್ವ ಆರೋಪಿಯ ಮೃತದೇಹ ಪತ್ತೆ

ವಾರ್ತಾಭಾರತಿವಾರ್ತಾಭಾರತಿ10 April 2021 1:53 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೇರಳ ಮುಸ್ಲಿಂ ಲೀಗ್  ಕಾರ್ಯಕರ್ತನ ಕೊಲೆ ಪ್ರಕರಣ: ಓರ್ವ ಆರೋಪಿಯ ಮೃತದೇಹ ಪತ್ತೆ

ತಿರುವನಂತಪುರ,ಎ.10: ಕಣ್ಣೂರು ಜಿಲ್ಲೆಯ ಕೂತುಪರಂಬ ಬಳಿಯ ಪುಲ್ಲುಕ್ಕರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದ್ದ ಇಂಡಿಯನ್ ಯುನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಕಾರ್ಯಕರ್ತ ಮನ್ಸೂರ್(22) ಕೊಲೆ ಪ್ರಕರಣದ ಆರೋಪಿಗಳ ಪೈಕಿ ರತೀಶ್ ಕೊಲೊತ್ ಎಂಬಾತ ಶುಕ್ರವಾರ ಕೋಝಿಕೋಡ್‌ನ ವಳಯಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ರತೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದ್ದು,ಪೊಲೀಸರು ಅಸಹಜ ಸಾವಿನ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪಾಣೂರ್ ನಿವಾಸಿ ರತೀಶ್ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ.

ಎ.6ರಂದು ಮನ್ಸೂರ್ ಮತ್ತು ಯುಡಿಎಫ್ ಮತಗಟ್ಟೆ ಏಜೆಂಟ್ ಆಗಿದ್ದ ಆತನ ಸೋದರ ಮುಹ್ಸಿನ್ ಅವರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳ ಗುಂಪು ಅವರತ್ತ ಬಾಂಬ್‌ಗಳನ್ನು ಎಸೆದಿತ್ತು ಮತ್ತು ಮನ್ಸೂರ್‌ನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಮುಹ್ಸಿನ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಳಿಕ ಮನ್ಸೂರ್‌ನ ನೆರೆಯ ನಿವಾಸಿಯಾಗಿದ್ದ ರತೀಶ್ ತಲೆಮರೆಸಿಕೊಂಡಿದ್ದ.

ರಾಜ್ಯ ಪೊಲೀಸರು ಗುರುವಾರ ಪ್ರಕರಣವನ್ನು ಜಿಲ್ಲಾ ಕ್ರೈಂ ಬ್ರಾಂಚ್‌ಗೆ ಹಸ್ತಾಂತರಿಸಿದ್ದು,15 ಸದಸ್ಯರ ತಂಡವು ತನಿಖೆಯನ್ನು ಆರಂಭಿಸಿದೆ.

ಮನ್ಸೂರ್ ಮೇಲೆ ದಾಳಿ ನಡೆಸಿದ್ದ 24 ಶಂಕಿತರ ಪೈಕಿ 11 ಆರೋಪಿಗಳನ್ನು ಪೊಲೀಸರು ಗುರುತಿಸಿದ್ದಾರೆ. ಈ ಪೈಕಿ ಇಬ್ಬರನ್ನು ಈಗಾಗಲೇ ಬಂಧಿಸಲಾಗಿದೆ. ಆರೋಪಿಗಳ ಪೈಕಿ ಕೆಲವರು ಸ್ಥಳೀಯ ಸಿಪಿಎಂ ನಾಯಕರಾಗಿದ್ದಾರೆ. ಹೆಚ್ಚಿನ ಶಂಕಿತರು ಸಿಪಿಎಂ ಕಾರ್ಯಕರ್ತರು ಎನ್ನಲಾಗಿದೆ.

ತನ್ಮಧ್ಯೆ ಐಯುಎಂಎಲ್ ನಾಯಕರು ಪೊಲೀಸ್ ತನಿಖೆಯಲ್ಲಿ ಅಪನಂಬಿಕೆಯನ್ನು ವ್ಯಕ್ತಪಡಿಸಿದ್ದಾರೆ.

ತನಿಖೆಯು ನಿಷ್ಪಕ್ಷವಾಗಿ ನಡೆಯಬೇಕು ಮತ್ತು ತನಿಖಾಧಿಕಾರಿಯು ಸಿಪಿಎಂ ಬಗ್ಗೆ ಒಲವು ಹೊಂದಿರಬಾರದು ಎಂದು ಹೇಳಿದ ಐಯುಎಂಎಲ್ ಪ್ರಧಾನ ಕಾರ್ಯದರ್ಶಿ ಪಿ.ಕೆ.ಕುಂಞಾಲಿಕುಟ್ಟಿ ಅವರು,ಮನ್ಸೂರ್ ಕೊಲೆಯು ಕೇವಲ ರಾಜಕೀಯ ಹತ್ಯೆಯಲ್ಲ. ಕೊಲೆಗೆ ಮುನ್ನ ಒಳಸಂಚು ನಡೆಸಲಾಗಿದೆ. ಸಿಪಿಎಂ ತನ್ನ ಕೊಲೆ ಸಂಸ್ಕೃತಿಯನ್ನು ಬಿಡುವುದಿಲ್ಲ. ಕೇರಳದ ಜನರು ಈ ಬಗ್ಗೆ ಯೋಚಿಸಬೇಕು ಎಂದರು.

ಆರೋಪವನ್ನು ತಿರಸ್ಕರಿಸಿರುವ ಸಿಪಿಎಂ,ಮನ್ಸೂರ್‌ ನದ್ದು ರಾಜಕೀಯ ಕೊಲೆಯಾಗಿರಲಿಲ್ಲ ಎಂದಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X