ಅಣ್ಣಾಮಲೈಗೆ ಕೊರೋನ ಪಾಸಿಟಿವ್

ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ನಾಯಕ ಅಣ್ಣಾ ಮಲೈ ಅವರಿಗೆ ಕೊರೋನ ಸೋಂಕು ದೃಢಪಟ್ಟಿದೆ.
ನನಗೆ ಕೊರೋನ ಪಾಸಿಟಿವ್ ಆಗಿದ್ದು, ಆಸ್ಪತ್ರೆಗೆ ದಾಖಲಾಗಿರುವೆ. ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರು ಯಾವುದೆ ಲಕ್ಷಣ ಕಂಡುಬಂದರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಕೆ.ಅಣ್ಣಾಮಲೈ ರವಿವಾರ ಟ್ವೀಟರ್ ಮೂಲಕ ವಿನಂತಿಸಿದರು.
ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ವೃತ್ತಿಜೀವನಕ್ಕೆ ಪೂರ್ಣ ವಿರಾಮವಿಟ್ಟು ರಾಜಕೀಯಕ್ಕೆ ಪ್ರವೇಶಿಸಿದ್ದರು. ಸದ್ಯ ಬಿಜೆಪಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ತಮ್ಮ ತವರೂರಾದ ಅರವಕುರುಚ್ಚಿ ಕ್ಷೇತ್ರದಿಂದ ಸ್ಪರ್ಧಿಸಿರುವ ಅಣ್ಣಾಮಲೈ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.
Next Story





