ಮತದಾರರಿಗೆ ಹಂಚಲು ತಯಾರಿಸಿದ್ದ ಜಿಲೇಬಿ, ಸಮೋಸಗಳನ್ನು ವಶಪಡಿಸಿಕೊಂಡ ಪೊಲೀಸರು
ಉತ್ತರಪ್ರದೇಶದಲ್ಲಿ ಪಂಚಾಯತ್ ಚುನಾವಣೆ

ಉನ್ನಾವೊ, (ಉತ್ತರ ಪ್ರದೇಶ): ಹಸನ್ ಗಂಜ್ ನ ಗ್ರಾಮಪಂಚಾಯತ್ ಚುನಾವಣೆಯ ಅಭ್ಯರ್ಥಿಯೊಬ್ಬರು ಮತದಾರರಿಗೆ ಹಂಚಲು ತಯಾರಿಸಿದ್ದ ಎರಡು ಕ್ವಿಂಟಾಲ್ ಜಿಲೇಬಿ ಹಾಗೂ 1,050 ಸಮೋಸಗಳನ್ನು ಉನ್ನಾವೊ ಪೊಲೀಸರು ವಶಪಡಿಸಿಕೊಂಡಿದ್ದಾರೆ.
"ಕೋವಿಡ್ ಮಾನದಂಡಗಳು ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ಪ್ರಕರಣ ದಾಖಲಿಸಲಾಗಿದೆ. 10 ಜನರನ್ನು ಬಂಧಿಸಲಾಗಿದೆ" ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಪೊಲೀಸರು, ಚುನಾವಣಾ ಅಭ್ಯರ್ಥಿಯ ನಿವಾಸದ ಮೇಲೆ ದಾಳಿ ನಡೆಸಿ ಎಲ್‌ಪಿಜಿ ಸಿಲಿಂಡರ್‌ಗಳು, ಜಿಲೇಬಿ ಹಾಗೂ ಸಮೋಸಗಳನ್ನು ತಯಾರಿಸಲು ಬಳಸುತ್ತಿದ್ದ ಹಿಟ್ಟು, ತುಪ್ಪ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಉತ್ತರಪ್ರದೇಶದಲ್ಲಿ ಪಂಚಾಯತ್ ಚುನಾವಣೆ ಎಪ್ರಿಲ್ 15 ರಿಂದ ನಾಲ್ಕು ಹಂತಗಳಲ್ಲಿ ನಡೆಯಲಿದೆ. ಅಂತಿಮ ಹಂತ ಎಪ್ರಿಲ್ 29 ರಂದು ನಡೆಯಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.
Next Story





