Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ರಾತ್ರಿ ಕರ್ಫ್ಯೂ: ಉಡುಪಿ, ಮಣಿಪಾಲ...

ಕೊರೋನ ರಾತ್ರಿ ಕರ್ಫ್ಯೂ: ಉಡುಪಿ, ಮಣಿಪಾಲ ಸಂಪೂರ್ಣ ಸ್ತಬ್ಧ

ವಾರ್ತಾಭಾರತಿವಾರ್ತಾಭಾರತಿ11 April 2021 9:10 PM IST
share
ಕೊರೋನ ರಾತ್ರಿ ಕರ್ಫ್ಯೂ: ಉಡುಪಿ, ಮಣಿಪಾಲ ಸಂಪೂರ್ಣ ಸ್ತಬ್ಧ

ಉಡುಪಿ, ಎ.11: ಹೆಚ್ಚುತ್ತಿರುವ ಕೊರೋನ ಸೋಂಕು ನಿಯಂತ್ರಿಸುವ ಉದ್ದೇಶದಿಂದ ರಾಜ್ಯ ಸರಕಾರ ವಿಧಿಸಿದ್ದ ಕೊರೋನಾ ರಾತ್ರಿ ಕರ್ಫ್ಯೂ ಹಿನ್ನೆಲೆ ಯಲ್ಲಿ ಉಡುಪಿ ನಗರ ಮತ್ತು ಮಣಿಪಾಲ ಎ.10ರಂದು ರಾತ್ರಿ 10 ಗಂಟೆ ಯಿಂದ ಬಹುತೇಕ ಸ್ತಬ್ಧಗೊಂಡಿತ್ತು.

ಕರ್ಫ್ಯೂ ಹಿನ್ನೆಲೆಯಲ್ಲಿ ಮಲ್ಪೆ, ಉಡುಪಿ ನಗರದ ಬನ್ನಂಜೆ, ಕಲ್ಸಂಕ ಸರ್ಕಲ್, ಮಣಿಪಾಲ ಸಿಂಡಿಕೇಟ್ ಸರ್ಕಲ್ ಮತ್ತು ಪರ್ಕಳ ಸಮೀಪ ಚೆಕ್‌ಪೋಸ್ಟ್ ಗಳನ್ನು ನಿರ್ಮಿಸಿ ಪೊಲೀಸರು ಪ್ರತಿ ವಾಹನಗಳನ್ನು ತಪಾಸಣೆ ನಡೆಸಿದರು. ಪೊಲೀಸರು ಮಲ್ಪೆ, ಮಣಿಪಾಲ, ಉಡುಪಿ ನಗರ ದಲ್ಲಿ ಪೊಲೀಸರು ಅಂಗಡಿ, ಹೊಟೇಲ್‌ಗಳಿಗೆ ಬಂದ್ ಮಾಡುವಂತೆ ಮತ್ತು ಸಾರ್ವಜನಿಕರು ಮನೆ ಸೇರುವಂತೆ ಸೂಚನೆ ನೀಡಿದರು.

ರಾತ್ರಿ ಕಲ್ಸಂಕ ಹಾಗೂ ಮಣಿಪಾಲ ಚೆಕ್‌ಪೋಸ್ಟ್‌ಗೆ ಆಗಮಿಸಿದ್ದ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, 10 ಗಂಟೆಯ ನಂತರ ಅನಗತ್ಯವಾಗಿ ರಸ್ತೆಗೆ ಇಳಿದ ವಾಹನಗಳ ಚಾಲಕರಿಗೆ ಎಚ್ಚರಿಕೆ ನೀಡಿದರು. ಅದೇ ರೀತಿ ಉಡುಪಿ ಜಿಲ್ಲಾ ಎಸ್ಪಿ ವಿಷ್ಣು ವರ್ದನ್ ಕಲ್ಸಂಕ, ಮಣಿಪಾಲ, ಪರ್ಕಳ ಚೆಕ್ ‌ಪೋಸ್ಟ್‌ಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

ಬಹುತೇಕ ಅಂಗಡಿ ಮುಗ್ಗಟ್ಟುಗಳು ರಾತ್ರಿ 10ಗಂಟೆಯೊಳಗೆ ಬಂದ್ ಆಗಿದ್ದವು. ಕರ್ಫ್ಯೂ ಹಿನ್ನೆಲೆಯಲ್ಲಿ ರಾತ್ರಿ ವೇಳೆ ನಗರದ ಪ್ರಮುಖ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಕಂಡು ಬಂತು. ಬಾರ್‌ಗಳು ಬಂದ್ ಆಗಿರುವುದರಿಂದ ವೈನ್‌ಶಾಪ್ಗಳಲ್ಲಿ ಹೆಚ್ಚಿನ ಗ್ರಾಹಕರು ಕಂಡುಬಂದರು. ಹೋಟೆಲ್ಗಳಿಗೆ 9.30ರೊಳಗೆ ಬಂದ್ ಮಾಡುವಂತೆ ಪೊಲೀಸರು ಗಡುವು ನೀಡಿದ್ದರು. ಅದರಂತೆ ಮಣಿಪಾಲ ಹಾಗೂ ಉಡುಪಿಯಲ್ಲಿ ಬಹುತೇಕ ಹೊಟೇಲ್ ‌ಗಳು 10ಗಂಟೆಗೆ ಮೊದಲೇ ಬಂದ್ ಆಗಿರುವುದಾಗಿ ತಿಳಿದುಬಂದಿದೆ.

ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮಣಿಪಾಲ ಹಾಗೂ ಉಡುಪಿ ನಗರದ ರಸ್ತೆಗಳು ವಾಹನ ಹಾಗೂ ಜನ ಸಂಚಾರ ಇಲ್ಲದೆ ಬೀಕೋ ಎನ್ನುತ್ತಿದ್ದವು. ಎಲ್ಲ ಕಡೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಉಡುಪಿ ಹಾಗೂ ಮಣಿಪಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ಸಂಪೂರ್ಣ ಬಂದ್ ಆಗಿತ್ತು. ಬಾರ್, ಹೊಟೇಲ್ ಹಾಗೂ ಅಂಗಡಿ ಮಾಲಕರು ಸರಕಾರದ ಆದೇಶಕ್ಕೆ ಉತ್ತಮ ರೀತಿಯಲ್ಲಿ ಸ್ಪಂದನೆ ನೀಡಿದ್ದಾರೆ. ಅನಗತ್ಯವಾಗಿ ಓಡಾಟ ನಡೆಸಿದ ವಾಹನ ಚಾಲಕರಿಗೆ ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಒಟ್ಟು 5 ಚೆಕ್‌ಪೋಸ್ಟ್, 5 ಪಿಕೇಟಿಂಗ್ ಪಾಯಿಂಟ್, ನಾಲ್ಕು ಸೆಕ್ಟರ್ ಪ್ಯಾಟ್ರೋಲಿಂಗ್‌ಗಳಿದ್ದವು.

-ವಿಷ್ಣುವರ್ಧನ್, ಎಸ್ಪಿ, ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X