Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂಡಿಯಾ ಫ್ರೆಟರ್ನಿಟಿ ಫೋರಂ ವತಿಯಿಂದ 'ದಿ...

ಇಂಡಿಯಾ ಫ್ರೆಟರ್ನಿಟಿ ಫೋರಂ ವತಿಯಿಂದ 'ದಿ ಡಿಸ್ಟಾನ್ಸ್' ಸ್ಮರಣಿಕೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ11 April 2021 9:20 PM IST
share
ಇಂಡಿಯಾ ಫ್ರೆಟರ್ನಿಟಿ ಫೋರಂ ವತಿಯಿಂದ ದಿ ಡಿಸ್ಟಾನ್ಸ್ ಸ್ಮರಣಿಕೆ ಬಿಡುಗಡೆ

ದಮಾಮ್: ಇಂಡಿಯಾ ಫ್ರೆಟರ್ನಿಟಿ ಫೋರಂ ನ 'ದಿ ಡಿಸ್ಟಾನ್ಸ್" ಸ್ಮರಣಿಕೆಯನ್ನು ಅಲ್ ಖೊಬರ್ ನ ಸೆಂಟ್ರೊ ರೊಟಾನಾ ಹೊಟೇಲಿನಲ್ಲಿ ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಬಿಡುಗಡೆಗೊಳಿಸಲಾಯಿತು.

ಅನಿವಾಸಿ ಭಾರತೀಯ ಸಮುದಾಯದ ಹಲವು ನಾಯಕರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ  ಫೋರಂನ ಝೋನಲ್ ಅಧ್ಯಕ್ಷ ಮೂಸಾ ಕುಟ್ಟಿ ಪೂರ್ವ ಪ್ರಾಂತ್ಯದ ದಿಲ್ಲಿ ಸಮುದಾಯದ ಗೌರವಾನ್ವಿತ ನಾಯಕ ಅರ್ಶದ್ ಅನ್ವರ್ ಗೆ ಮ್ಯಾಗಝಿನ್ ನ ಮೊದಲ ಪ್ರತಿ ಹಸ್ತಾಂತರಿಸಿದರು. ಭಾರತೀಯ ರಾಯಭಾರಿ‌ ಕಚೇರಿ‌ ಮಿಶನ್ ರಿಯಾದ್ ನ ಉಪ ಮುಖ್ಯಸ್ಥ ಎನ್.ರಾಮ್ ಪ್ರಸಾದ್ ಮಾರ್ಚ್ 28, 2021ರಂದು ಈ ಸ್ಮರಣಿಕೆಯನ್ನು ಉದ್ಘಾಟಿಸಿದ್ದರು.

'ದಿ ಡಿಸ್ಟ್ಯಾನ್ಸ್' ಮ್ಯಾಗಝಿನ್ ನ ಪ್ರಧಾನ ಸಂಪಾದಕ ಮತ್ತು ಪ್ರಿನ್ಸ್ ಸತಾಮ್ ಯುನಿವರ್ಸಿಟಿಯ ಉಪನ್ಯಾಸಕ ವಾದಿ ಅಲ್ ದವಸಿರ್ ವೀಡಿಯೊ ಕಾನ್ಫರೆನ್ಸ್ ಮೂಲಕ ಸಮಾರಂಭವನ್ನುದ್ದೇಶಿಸಿ ಮುಖ್ಯ ಭಾಷಣ ಮಾಡಿದರು.

ಸಮುದಾಯದ ಸ್ವಯಂಸೇವಕರು ಪ್ರಯತ್ನಗಳ ಅರ್ಹ ರ ಸೇವೆ ಮಾಡಿದ ನಿಸ್ವಾರ್ಥವಾದ ಸ್ಫೂರ್ತಿದಾಯಕ ಘಟನೆಗಳು ಮತ್ತು ಕೋವಿಡ್ ಸಾಂಕ್ರಾಮಿಕ ತಡೆಗಟ್ಟುವುದಕ್ಕಾಗಿ‌ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ ಆರೋಗ್ಯ ವೃತ್ತಿಪರರ ಸಮರ್ಪಣಾ ಸೇವೆಯ ಕುರಿತ ಈ ಸಂಗ್ರಹವನ್ನು ಪ್ರಕಟಿಸಿದ ಉದ್ದೇಶವನ್ನು ಅವರು ವಿವರಿಸಿದರು. ಮ್ಯಾಗಝಿನ್ ಕೋವಿಡ್ ವಾರಿಯರ್ ಗಳ ತ್ಯಾಗಗಳ ಕುರಿತು ಓದುಗರಿಗೆ ನೆನಪಿಸಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು. ಮಾನಸಿಕ ಸಂಬಂಧವನ್ನು ಉಳಿಸಿ ಬೆಳೆಸುತ್ತಾ ದೈಹಿಕ ಅಂತರ ಕಾಪಾಡಿಕೊಳ್ಳಲು ನಮ್ಮ ಮನಸ್ಸನ್ನು ಮರುಹೊಂದಿಸಲು ಇದು ನೆರವಾಗಲಿದೆಯೆಂದು ಅವರು ಆಶಿಸಿದರು.

ಆರೋಗ್ಯ, ಹಣಕಾಸು ಆಡಳಿತ ಮತ್ತು ಮಾಧ್ಯಮ ಕ್ಷೇತ್ರ ಗಳ  ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಡಾ.ನಬೀಲ್ ಅಹ್ಮದ್ (ತಮಿಳುನಾಡು), ಡಾ.ಸಜ್ಜಾದ್ ಪಾಶ (ಬೆಂಗಳೂರು) ಮುಹಮ್ಮದ್ ಅಬ್ದುಲ್‌ ವಾರಿಸ್ (ಹೈದರಾಬಾದ್), ಆಲ್ಬಿನ್ ಜೋಸೆಫ್‌(ಕೇರಳ) ಈ ಸಂದರ್ಭದಲ್ಲಿ ಸ್ಮರಣಿಕೆ ಬಿಡುಗಡೆಗಾಗಿ ಅಭಿನಂದಿಸಿದರು. ಅರ್ಹರನ್ನು ತಲುಪುವ ಫೋರಂನ ಅವಿರತ ಪ್ರಯತ್ನವನ್ನು ಅವರು ಶ್ಲಾಘಿಸಿದರು. ವ್ಯಾಪಾರ, ಸಮುದಾಯಗಳು ಮತ್ತು ಜೀವನ ಶೈಲಿಯ ಮೇಲೆ ಪರಿಣಾಮ ಬೀರಿದ ಸಾಂಕ್ರಾಮಿಕ  ಘಟ್ಟದಲ್ಲಿ  ನಡೆಸಿದ ಸಾಮಾಜಿಕ ಸೇವೆಯನ್ನು ಫೋರಂ ಮುಂದುವರಿಸಲಿದೆಯೆಂದು ಅವರು ಭರವಸೆ ವ್ಯಕ್ತಪಡಿಸಿದರು.

ಅಬ್ದುಲ್ ಸಲಾಂ (ಪ್ರಾದೇಶಿಕ ಕಾರ್ಯದರ್ಶಿ, ಇಂಡಿಯಾ ಫ್ರೆಟರ್ನಿಟಿ ಫೋರಂ) ವಂದಿಸಿ, ಫೋರಂ ಸಮುದಾಯ ಚಟುವಟಿಕೆಗಳನ್ನು ಮುಂದುವರಿಸಲಿದೆ ಮತ್ತು ಸೌದಿ ಅರೇಬಿಯಾದಲ್ಲಿ ಬಡ ಮತ್ತು ಅರ್ಹರು ಎಲ್ಲೇ ಇದ್ದರೂ ಅವರನ್ನು ಬೆಂಬಲಿಸಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಇಂಡಿಯಾ ಫ್ರೆಟರ್ನಿಟಿ ಫೋರಂನ ಕಾರ್ಯಕಾರಿ ಸಮಿತಿ ಸದಸ್ಯ ಮೀರಾಜ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X