Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು...

ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲು: ಸಚಿವ ಡಾ. ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ12 April 2021 4:36 PM IST
share
ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲು: ಸಚಿವ ಡಾ. ಸುಧಾಕರ್

ಬೆಂಗಳೂರು : ಕಳೆದ ಬಾರಿ ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲಿಡಲಾಗಿತ್ತು. ಇದೇ ರೀತಿ ಈಗ ಹಾಸಿಗೆ ಮೀಸಲಿಡಬೇಕು ಎಂದು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್ ಗಳ ಸಂಘಟನೆ (PHANA) ಸಂಘಟನೆ ಜೊತೆ ವೀಡಿಯೋ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು,  ಕೋವಿಡ್ ಅಲ್ಲದ ರೋಗಿಗಳಿಗೆ ದಾಖಲಾತಿ ಅವಶ್ಯಕತೆ ಇಲ್ಲದಿದ್ದಲ್ಲಿ ಅಂತಹ ರೋಗಿಗಳಿಗೆ ಮನವಿ ಮಾಡಿ, ಬಿಡುಗಡೆ ಮಾಡಬೇಕು. ಅವನ್ನು ಕೋವಿಡ್ ಗೆ ಮೀಸಲಿಡಬೇಕು ಎಂದು ಹೇಳಲಾಗಿದೆ. ಒಂದು ವಾರದೊಳಗೆ 50% ರಷ್ಟು ಹಾಸಿಗೆ ನೀಡಲು ಖಾಸಗಿ ಆಸ್ಪತ್ರೆಗಳವರು ಒಪ್ಪಿಕೊಂಡಿದ್ದಾರೆ. ಅಲ್ಪ ರೋಗಲಕ್ಷಣ ಹಾಗೂ ಲಕ್ಷಣರಹಿತ ರೋಗಿಗಳಿಗೆ ಹೋಟೆಲ್ ಗಳಲ್ಲಿ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ವ್ಯವಸ್ಥೆ ಮಾಡಬೇಕೆಂದು ಸೂಚಿಸಲಾಗಿದೆ. ಆಸ್ಪತ್ರೆಗಳ ಹಾಸಿಗೆಗಳಲ್ಲಿ ಅನಿವಾರ್ಯ ಇರುವವರಿಗೆ ಚಿಕಿತ್ಸೆ ನೀಡಬೇಕೆಂದು ಸೂಚಿಸಲಾಗಿದೆ ಎಂದರು.

ರೆಮಿಡಿಸಿವಿರ್ ಔಷಧಿ ತಯಾರಿಕೆ, ಪೂರೈಕೆಯನ್ನು ಕಂಪನಿಗಳು ಸ್ಥಗಿತಗೊಳಿಸಿವೆ. ರಾಜ್ಯಕ್ಕೆ ಇದರ ಅಗತ್ಯ ಇದೆ. ಕೆಲ ಖಾಸಗಿ ಆಸ್ಪತ್ರೆಗಳು ಔಷಧಿ ಲಭ್ಯವಾಗುತ್ತಿಲ್ಲ ಎಂದು ದೂರಿದ್ದಾರೆ. ಡ್ರಗ್ ಕಂಟ್ರೋಲರ್ ಜೊತೆ ಚರ್ಚಿಸಿ, ಅಗತ್ಯವಿರುವ ಔಷಧ ಪ್ರಮಾಣ ಗುರುತು ಮಾಡಿ, ಸರ್ಕಾರದಿಂದಲೇ ನಿರ್ದಿಷ್ಟ ದರದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಪೂರೈಸುವ ಕ್ರಮ ವಹಿಸಲಾಗುವುದು. ಆಕ್ಸಿಜನ್, ಆಕ್ಸಿಜನ್ ಜನರೇಟರ್ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ. ಕೊರತೆಯ ಸಂಭವ ಬಂದರೆ ಕೈಗಾರಿಕಾ ಆಕ್ಸಿಜನ್ ಬಳಸಲು ಕ್ರಮ ವಹಿಸಲಾಗುವುದು ಎಂದರು.

ತಾಂತ್ರಿಕ ಸಲಹಾ ಸಮಿತಿಯು ಮುಂದಿನ ಎರಡು ತಿಂಗಳ ಕೊರೊನಾ ಸ್ಥಿತಿಗತಿಯನ್ನು ಅಂದಾಜಿಸಿದ್ದು, ಸರ್ಕಾರ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಲಹೆ ನೀಡಿದೆ. ಈ ಒಂದು ವರ್ಷದ ಅನುಭವದಲ್ಲಿ ಕೊರೊನಾ ಬಗ್ಗೆ ಗೊತ್ತಾಗಿದೆ. ಕೋವಿಡ್ ನಿಂದಾಗಿ ಆರ್ಥಿಕ ನಷ್ಟ ಉಂಟಾಗಿದ್ದು, ಜನರು ಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಲಾಕ್ ಡೌನ್ ನಂತಹ ಕಠಿಣ ಕ್ರಮಕ್ಕೆ ಮುಂದಾಗುವುದು ಕಷ್ಟ ಎಂದರು.

ಕೋವಿಡ್ ಪರೀಕ್ಷೆಯಲ್ಲಿ ತಪ್ಪೆಸಗಿದ ನೌಕರರನ್ನು ವಜಾಗೊಳಿಸಲಾಗಿದೆ. ಇದೊಂದು ತಪ್ಪಿಗಾಗಿ ಸರ್ಕಾರ ಮಾಡಿದ ಉತ್ತಮ ಕೆಲಸಗಳನ್ನು ಮರೆಮಾಚುವುದು ಬೇಡ. ಈವರೆಗೆ 2.2 ಕೋಟಿಗೂ ಅಧಿಕ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 85% ನಷ್ಟು ಆರ್ ಟಿಪಿಸಿಆರ್ ಪರೀಕ್ಷೆಯಾಗಿದೆ ಎಂದರು.

ಕೊರೋನ ತಡೆಗೆ ಜನರ ಸಹಕಾರ ಅಗತ್ಯ. ಲಾಕ್ ಡೌನ್ ಮಾಡುತ್ತೇವೆ ಎಂದು ಎಲ್ಲೂ ಹೇಳಿಲ್ಲ. ಆದರೆ ಅಂತಹ ಅನಿವಾರ್ಯ ತರಬೇಡಿ ಎಂದು ಮನವಿ ಮಾಡುತ್ತಿದ್ದೇವೆ. ಲಾಕ್ ಡೌನ್ ನಿಂದ ಎಷ್ಟು ನಷ್ಟವಾಗುತ್ತದೆ ಎಂಬ ಅರಿವಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X