Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೋರಾಟ ಮುಂದುವರಿಸಿದ ಸಾರಿಗೆ ನೌಕರರು:...

ಹೋರಾಟ ಮುಂದುವರಿಸಿದ ಸಾರಿಗೆ ನೌಕರರು: ರಾಜ್ಯದ ಹಲವೆಡೆ ತಟ್ಟೆ, ಲೋಟ ಬಡಿದು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 April 2021 8:41 PM IST
share
ಹೋರಾಟ ಮುಂದುವರಿಸಿದ ಸಾರಿಗೆ ನೌಕರರು: ರಾಜ್ಯದ ಹಲವೆಡೆ ತಟ್ಟೆ, ಲೋಟ ಬಡಿದು ಪ್ರತಿಭಟನೆ

ಬೆಂಗಳೂರು, ಎ.12: ಆರನೇ ವೇತನ ಆಯೋಗದ ಶಿಫಾರಸ್ಸು ಸೇರಿದಂತೆ ವಿವಿಧ ಬೇಡಿಕೆಗಳನ್ನು ರಾಜ್ಯ ಸರಕಾರ ಈಡೇರಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಸಾರಿಗೆ ಮುಷ್ಕರದ ಆರನೇ ದಿನವಾದ ಸೋಮವಾರ ನೌಕರರ ಕುಟುಂಬಸ್ಥರು ತಟ್ಟೆ, ಲೋಟ ಬಡಿದು ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಕಂದಾಯ ಭವನ ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ರಾಜ್ಯದ ವಿವಿಧೆಡೆ ಜಮಾಯಿಸಿದ ನೌಕರರ ಕುಟುಂಬಸ್ಥರು, ತಟ್ಟೆ, ಲೋಟ ಬಡಿಯುವ ಮೂಲಕ ಸರಕಾರದ ವಿರುದ್ಧ ವಿಭಿನ್ನವಾಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದುರು.

ರಾಜಧಾನಿ ಬೆಂಗಳೂರಿನಲ್ಲಿ ನೂರಕ್ಕೂ ಅಧಿಕ ಪ್ರತಿಭಟನಾಕಾರರು ಇಲ್ಲಿನ ಕೆಜಿ ಮುಖ್ಯರಸ್ತೆಗೆ ಜಮಾಯಿಸಿದರು. ಈ ಸಂದರ್ಭದಲ್ಲಿ ನೂರಾರು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮಕ್ಕಳು, ಮಹಿಳೆಯರು ಸೇರಿದಂತೆ ಹಲವರನ್ನು ವಶಕ್ಕೆ ಪಡೆದುಕೊಂಡರು. ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಪ್ರತಿಭಟನೆ, ಧರಣಿಗೆ ಅವಕಾಶ ಇಲ್ಲವೇ ಇಲ್ಲ ಎಂದು ನೌಕರರ ಕುಟುಂಬಸ್ಥರಿಗೆ ತಿಳಿ ಹೇಳುತ್ತಿದ್ದ ದೃಶ್ಯಕಂಡಿತು.

ನಮ್ಮ ಶಾಂತಿಯುತ ಪ್ರತಿಭಟನೆ ಗೆಲುವು ಸಾಧಿಸುತ್ತದೆ ವಿನಃ ಸರಕಾರದ ಹಠದ ಧೋರಣೆ ಅಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಮ್ಮನ್ನು ಜೈಲಿಗೆ ಹಾಕಿದರೂ ಪರವಾಗಿಲ್ಲ, ಆರನೆ ವೇತನ ಆಯೋಗ ಜಾರಿಯಾಗಲೇಬೇಕು. ನಾಲ್ಕೈದು ದಶಕಗಳ ಕಾಲ ಕಷ್ಟಪಡುವ ಬದಲು ಒಂದೇ ದಿನ ಸಾಯೋಣ. ನೌಕರರು ಯಾವುದಕ್ಕೂ ಎದೆಗುಂದದೆ ಶಾಂತಿಯುತ ಹೋರಾಟ ಮಾಡೋಣ ಎಂದು ಪ್ರತಿಭಟನಾಕಾರರು ಹೇಳಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಾರಿಗೆ ನೌಕರರ ಕೂಟದ ಜಂಟಿ ಕಾರ್ಯದರ್ಶಿ ಆನಂದ್, ರಾಜ್ಯ ಸರಕಾರ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ. ಕೋವಿಡ್ ಕಾರಣಕ್ಕೆ ಶಾಂತಿಯುತವಾಗಿ, ಮಾರ್ಗಸೂಚಿ ಪಾಲಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮುಷ್ಕರ ನಡೆಸಲು ಹೋದರೆ, ಅಲ್ಲಿ ನಮ್ಮ ಕುಟುಂಬ ಸದಸ್ಯರನ್ನು ವಶಕ್ಕೆ ಪಡೆದುಕೊಂಡಿರುವುದು ಸರಿಯಲ್ಲ ಎಂದು ಅವರು ತಿಳಿಸಿದರು.

7ನೆ ದಿನಕ್ಕೆ ಕಾಲಿಡಲಿರುವ ಮುಷ್ಕರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಸಾರಿಗೆ ನೌಕರರ ಮುಷ್ಕರ ಮಂಗಳವಾರಕ್ಕೆ ಏಳನೆ ದಿನಕ್ಕೆ ಕಾಲಿಡಲಿದ್ದು, ಯುಗಾದಿ ಹಬ್ಬದ ದಿನವೂ ನೌಕರರು ಮನೆಯಲ್ಲಿಯೇ ಉಳಿದುಕೊಂಡು ಹೋರಾಟಕ್ಕೆ ಬೆಂಬಲ ಮುಂದುವರಿಸಲಿದ್ದಾರೆ.

ಕೋವಿಡ್ ಕಾರಣದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದೇವೆ. ಆದರೆ, ಸರಕಾರ ನಮ್ಮ ಸಂಕಷ್ಟವನ್ನೇ ಆಲಿಸುತ್ತಿಲ್ಲ. ನೌಕರರಿಗೆ ಮಾರ್ಚ್ ತಿಂಗಳ ವೇತನವನ್ನು ಪಾವತಿಸದೆ ಇರುವುದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಯುಗಾದಿ ಹಬ್ಬದ ಸಂಭ್ರಮವೂ ಇಲ್ಲದಂತೆ ಆಗಿದೆ ಎಂದು ನೌಕರರು ಅಳಲು ತೋಡಿಕೊಂಡರು.

ಸಂಖ್ಯೆ ಹೆಚ್ಚಳ: ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಸೋಮವಾರ 6ನೇ ದಿನ ಪೂರ್ತಿಗೊಳಿಸಿದೆ. ಮತ್ತೊಂದೆಡೆ ಕೆಲಸಕ್ಕೆ ಹಾಜರಾಗುವವರ ಸಂಖ್ಯೆ ಕೊಂಚ ಏರಿಕೆಯಾಗಿದ್ದು, ಸೋಮವಾರ ರಾಜ್ಯದ ಬಹುತೇಕ ಘಟಕಗಳಲ್ಲಿ ಕನಿಷ್ಠ ಬಸ್‍ಗಳ ಸಂಖ್ಯೆ ಚಾಲನೆ ಮಾಡಲಾಗಿದೆ. ಆದರೆ, ಬಹುತೇಕ ನೌಕರರು ಕರ್ತವ್ಯದಿಂದ ದೂರ ಉಳಿದಿರುವುದರಿಂದ ಬಸ್‍ಗಳ ಕಾರ್ಯಾಚರಣೆ ವ್ಯವಸ್ಥೆ ಹಳಿಗೆ ಬಂದಿಲ್ಲ. ಇದರಿಂದಾಗಿ ಪ್ರಯಾಣಿಕರ ಪರದಾಟವೂ ಮುಂದುವರಿದಿದೆ.

ಮುಷ್ಕರದಲ್ಲಿ ಪಾಲ್ಗೊಂಡ ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆಹಿಡಿದಿರುವ ನಿಗಮಗಳು, ಕರ್ತವ್ಯಕ್ಕೆ ಹಾಜರಾದ ನೌಕರರಿಗೆ ಸಂಬಳ ಪಾವತಿಸಿವೆ. ನಾಲ್ಕು ನಿಗಮಗಳ ಚಾಲಕ, ನಿರ್ವಾಹಕರಿಗೆ ಸೋಮವಾರ ವೇತನ ಪಾವತಿಸಲಾಗಿದೆ ಎಂದು ವರದಿಯಾಗಿದೆ.

ಸಮವಸ್ತ್ರವಿಲ್ಲದೆ, ಮದ್ಯ ಸೇವಿಸಿ ಬಸ್ ಚಾಲನೆ: ಥಳಿತ

ಸಮವಸ್ತ್ರವಿಲ್ಲದೆ, ಮದ್ಯ ಸೇವಿಸಿ ಬಿಎಂಟಿಸಿ ಬಸ್ ಚಾಲನೆ ಮಾಡಿದ ಆರೋಪದಡಿ ಚಾಲಕನೋರ್ವನನ್ನು ಹಿಡಿದು ಮಹಿಳೆಯರು ಥಳಿಸಿದ ಘಟನೆ ಸೋಮವಾರ ವರದಿಯಾಗಿದೆ.

ಇಲ್ಲಿನ ಅರಿಶಿನಕುಂಟೆ ಬಳಿ ಸಾರಿಗೆ ನೌಕರರನ್ನು ಬೆಂಬಲಿಸಿ ಧರಣಿ ನಡೆಸಿ, ತಾಲೂಕು ಕಚೇರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮವಸ್ತ್ರವಿಲ್ಲದೆ ಚಾಲಕನೋರ್ವನನ್ನು ಕಂಡ ಧರಣಿ ನಿರತ ಮಹಿಳೆಯರು ಆತನನ್ನು ಹಿಡಿದು ಹಲ್ಲೆ ನಡೆಸಿದ್ದಾರೆ. ಬಳಿಕ ಆತ ಮದ್ಯ ಸೇವನೆ ಮಾಡಿದ್ದ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ ಹಲ್ಲೆ ಆರೋಪದಡಿ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X