ಪ್ರಶಾಂತ್ ಪೈಗೆ ಪಿಎಚ್‌ಡಿ ಪದವಿ

ಮಂಗಳೂರು, ಎ.12: ಪಿ.ಎ. ತಾಂತ್ರಿಕ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಪ್ರಶಾಂತ್ ಪೈ ಎಂ. ಮಂಡಿಸಿದ ‘ಸ್ಟಡಿ, ಡಿಸೈನ್ ಆ್ಯಂಡ್ ಇಂಪ್ಲಿಮೆಂಟೇಶನ್ ಆಫ್ ಟೋಟಲ್ ಪ್ರೊಡಕ್ಟಿವ್ ಮೆಂಟೆನೆನ್ಸ್ ಸಿಸ್ಟಮ್ ಇನ್ ಎ ಸೆಲೆಕ್ಟೆಡ್ ಮ್ಯಾನುಫ್ಯಾಕ್ಚರಿಂಗ್ ಇಂಡಸ್ಟ್ರಿ’ ಎಂಬ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ಪಿಎಚ್‌ಡಿ ಪವಿ ನೀಡಿದೆ.
ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ರಾಮಚಂದ್ರ ಸಿ.ಜಿ ಹಾಗೂ ಮೈಸೂರಿನ ಶ್ರೀ ಜಯ ಚಾಮರಾಜೇಂದ್ರ ತಾಂತ್ರಿಕ ಮಹಾದ್ಯಾನಿಲಯದ ಕೈಗಾರಿಕೆ ಹಾಗೂ ಉತ್ಪಾದನಾ ವಿಭಾಗದ ಪ್ರಾಧ್ಯಾಪಕ ಡಾ. ಶ್ರೀನಿವಾಸ ಟಿ.ಆರ್. ಅವರ ಮಾರ್ಗದರ್ಶನದಲ್ಲಿ ಈ ಪ್ರಬಂಧವನ್ನು ಮಂಡಿಸಿದ್ದರು.
Next Story





