Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 5 ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ...

5 ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ತಾಕತ್ತಿದ್ದರೆ ಒಂದು ರಾಜ್ಯದಲ್ಲಿ ಗೆಲ್ಲಲಿ: ನಳಿನ್ ಕಟೀಲು ಸವಾಲು

ವಾರ್ತಾಭಾರತಿವಾರ್ತಾಭಾರತಿ12 April 2021 10:54 PM IST
share
5 ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ತಾಕತ್ತಿದ್ದರೆ ಒಂದು ರಾಜ್ಯದಲ್ಲಿ ಗೆಲ್ಲಲಿ: ನಳಿನ್ ಕಟೀಲು ಸವಾಲು

ಬಾಗಲಕೋಟೆ, ಎ. 12: `ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡ ಮೇಲೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಮುಳುಗುವ ಹಡಗು ಯಾರದ್ದು? ಎಂದು ಸದ್ಯ ಐದು ರಾಜ್ಯಗಳಲ್ಲಿ ಚುನಾವಣೆ ನಡೆದಿದೆ. ಕಾಂಗ್ರೆಸ್‍ಗೆ ತಾಕತ್ತು ಇದ್ದರೆ ಒಂದು ರಾಜ್ಯದಲ್ಲಿ ಗೆಲ್ಲಲಿ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದಿಲ್ಲಿ ಸವಾಲು ಹಾಕಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆಲ್ಲಲಿದೆ. ಕಾಂಗ್ರೆಸ್ ಅಧಿಕಾರವಿದ್ದ ಪಾಂಡಿಚೇರಿಯಲ್ಲೂ ಬಿಜೆಪಿ ಗೆಲುವು ನಿಶ್ಚಿತ. ಇನ್ನು ಕೇರಳ ಹಾಗೂ ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲಿದೆ. ಕರ್ನಾಟಕದ ಉಪ ಚುನಾವಣೆಯಲ್ಲಿ ಮೂರು ಕಡೆ ನಾವೇ ಗೆಲ್ಲುತ್ತೇವೆ. ಕಾಂಗ್ರೆಸ್‍ಗೆ ತಾಕತ್ ಇದ್ದರೆ ಒಂದು ರಾಜ್ಯ ಗೆಲ್ಲಲಿ ಎಂದು ಸವಾಲೆಸೆದರು.

ಸಿದ್ದರಾಮಯ್ಯ ಅವರು ಇಂತ ರಾಜ್ಯದಲ್ಲಿ ನಾವು ಗೆಲ್ಲುತ್ತೇವೆಂದು ಹೇಳಲಿ. ಕಾಂಗ್ರೆಸ್ ಹಡಗು ತೂತಾಗಿದೆ. ನೀರು ಒಳಗೆ ಬರುತ್ತಿದೆ. ಭಯದಲ್ಲಿ ಇವರು ಏನೆಲ್ಲ ಆಡ್ತಾ ಇದ್ದಾರೆ. ಮುಳುಗುವ ಇವರ ಹಡಗು ಎತ್ತಲು ಜನರಿಲ್ಲ. ಸಿದ್ದರಾಮಣ್ಣ ಮುಳುಗುತ್ತಾರೆ ಎಂದು ಡಿಕೆಶಿ ನೋಡ್ತಾ ಇದ್ದಾರೆ. ಡಿಕೆಶಿ ಮುಳುಗ್ತಾರೆ ಎಂದು ಸಿದ್ದರಾಮಯ್ಯ ನೋಡ್ತಿದ್ದಾರೆ. ಇಬ್ಬರು ಕ್ಯಾಪ್ಟನ್‍ಗಳು ಆಚೆ-ಈಚೆ ಮುಖ ಮಾಡಿ ಕುಳಿತಿದ್ದಾರೆ. ಹಡಗು ಎಲ್ಲೆಲ್ಲೋ ಹೋಗ್ತಾ ಇದೆ ಎಂದು ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದರು.

ನೊಟೀಸ್ ನೀಡಲಾಗಿದೆ: ಶಾಸಕ ಯತ್ನಾಳ್ ವಿರುದ್ಧದ ಈಗಾಗಲೇ ಪಕ್ಷದ ಶಿಸ್ತು ಸಮಿತಿ ನೋಟಿಸ್ ನೀಡಿದೆ. ಮಿತಿ ಮೀರಿದರೆ ಏನಾಗಬೇಕೋ ಅದನ್ನ ಪಾರ್ಟಿ ಮಾಡುತ್ತದೆ. ಲವ್ ಲೆಟರ್ ಯಾವುದು? ನೋಟಿಸ್ ಯಾವುದು ಎನ್ನುವ ಜ್ಞಾನ ಇಲ್ಲದವರಿಗೆ ಏನು ಮಾತಾಡ್ತಿರಾ? ನನ್ನನ್ನು ಪಕ್ಷದಿಂದ ಹೊರ ಹಾಕೋಕೆ ಆಗಲ್ಲ ಎಂಬ ಯತ್ನಾಳ ಹೇಳಿಕೆಗೆ 'ಇದೆಲ್ಲ ರಾಷ್ಟ್ರೀಯಾಧ್ಯಕ್ಷರ ವಿವೇಚನೆಗೆ ಬಿಟ್ಟಿದ್ದು' ಎಂದು ಕಟೀಲ್ ಸ್ಪಷ್ಟಪಡಿಸಿದರು.

ಪಕ್ಷದಿಂದ ಉಚ್ಚಾಟನೆ, ಶಿಸ್ತು ಕ್ರಮ ತೆಗೆದುಕೋಳ್ಳಬೇಕಾದರೆ ನಮ್ಮಲ್ಲಿ ಅದಕ್ಕೊಂದು ಶಿಸ್ತು ಸಮಿತಿ ಇದೆ. ಇದೆಲ್ಲವನ್ನೂ ಆ ಸಮಿತಿ ಅವಲೋಕನ ಮಾಡುತ್ತದೆ. ಈ ಬಗ್ಗೆ ಅವಲೋಕನ ನಡೆಯುತ್ತಿದೆ. ಈಗ ನೋಟಿಸ್ ನೀಡಲಾಗಿದೆ ಅದಕ್ಕೆ ಅವರು ಉತ್ತರ ಕೊಟ್ಟಿಲ್ಲ. ಇನ್ನೊಂದು ನೋಟಿಸ್ ಹೋಗುತ್ತೆ ಇದೆಲ್ಲವೂ ಒಂದು ಪ್ರಕ್ರಿಯೆ. ಏಕಾಏಕಿ ಏನೂ ಮಾಡುವ ಹಾಗಿಲ್ಲ. ಆ ಪ್ರಕ್ರಿಯೆ ಒಳಗಡೆ ಇನ್ನೊಮ್ಮೆ ಹದ್ದು ಮೀರಿದರೆ, ಅವರೇ ನಾನು ಹೊರಗೆ ಹೋಗಬೇಕು ಎಂದು ತಿಳಿದುಕೊಂಡಿದ್ದರೆ ಅದು ಅವರ ತಪ್ಪು ಎಂದು ಎಚ್ಚರಿಸಿದರು.

ರಾಜ್ಯದಲ್ಲಿ 2 ವಿಧಾನಸಭೆ, 1 ಲೋಕಸಭೆಗೆ ಉಪ ಚುನಾವಣೆ ನಡೆಯುತ್ತಿವೆ. ಈಗಾಗಲೇ ನಾನು ಎರಡ್ಮೂರು ಹಂತದಲ್ಲಿ ಪ್ರಚಾರಕ್ಕೆ ಹೋಗಿದ್ದೇನೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಸಿಗಲಿದೆ. ಮತದಾರರ ಒಲವು ಬಿಜೆಪಿ ಪಕ್ಷದ ಕಡೆಗಿದೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X