Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಚುನಾವಣಾ ಆಯೋಗ ಏನು ಮಾಡುತ್ತಿದೆ?

ಚುನಾವಣಾ ಆಯೋಗ ಏನು ಮಾಡುತ್ತಿದೆ?

ವಾರ್ತಾಭಾರತಿವಾರ್ತಾಭಾರತಿ13 April 2021 12:10 AM IST
share
ಚುನಾವಣಾ ಆಯೋಗ ಏನು ಮಾಡುತ್ತಿದೆ?

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳನ್ನು ಸುಲಲಿತವಾಗಿ, ಕ್ರಮಬದ್ದವಾಗಿ ನಡೆಸಿಕೊಂಡು ಹೋಗಲು ಚುನಾವಣಾ ಆಯೋಗ ಎಂಬ ಸಾಂವಿಧಾನಿಕ, ಸ್ವಾಯತ್ತ ಸಂಸ್ಥೆ ಅಸ್ತಿತ್ವಕ್ಕೆ ಬಂದಿರುತ್ತದೆ. ಭಾರತದ ಚುನಾವಣಾ ಆಯೋಗವು ಇದಕ್ಕೆ ಹೊರತಾಗಿಲ್ಲ. ಆದರೆ ಇತ್ತೀಚಿನ ಐದಾರು ವರ್ಷಗಳಿಂದ ಅದರಲ್ಲೂ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದ ನಂತರ ಚುನಾವಣಾ ಆಯೋಗದ ನಡೆ ಸಂಶಯಾಸ್ಪದ ಮಾತ್ರವಲ್ಲ ಆಕ್ಷೇಪಾರ್ಹವಾಗಿದೆ. ಈಗ ನಡೆಯುತ್ತಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಹಾಗೂ ಕೆಲ ರಾಜ್ಯಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆಗಳಲ್ಲಿ ಹಾಡ ಹಗಲೇ ನಿಯಮಾವಳಿಗಳ ಉಲ್ಲಂಘನೆಯಾಗುತ್ತಿದ್ದರೂ ಆಯೋಗ ಕಂಡೂ ಕಾಣದಂತೆ ತೆಪ್ಪಗಿದೆ. ಇದು ಪ್ರಜಾಪ್ರಭುತ್ವದ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಆತಂಕಕಾರಿ ಸಂಗತಿಯಾಗಿದೆ. ಚುನಾವಣಾ ಆಯೋಗದ ನಡೆ ನಿಷ್ಪಕ್ಷವಾಗಿಲ್ಲ ಎಂಬುದು ಈಗ ಗುಟ್ಟಿನ ವಿಷಯವಾಗಿ ಉಳಿದಿಲ್ಲ.

ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕೆಂದು ಶತಾಯ ಗತಾಯ ಪ್ರಯತ್ನ ನಡೆಸಿರುವ ಅಧಿಕಾರರೂಢ ಬಿಜೆಪಿಯಿಂದಲೇ ಶಿಷ್ಟಾಚಾರದ ಉಲ್ಲಂಘನೆಯಾಗುತ್ತಿದೆ. ಇತ್ತೀಚೆಗೆ ಕೇರಳದ ಚುನಾವಣಾ ಪ್ರಚಾರಕ್ಕೆ ಹೋದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರ ಭಾಷಣದಲ್ಲಿ ‘‘ಸ್ವಾಮಿಯೇ ಶರಣಂ ಅಯ್ಯಪ್ಪ’’ಎಂದು ಹಲವಾರು ಬಾರಿ ಕೂಗಿದರು. ಕಳೆದ ಏಳು ವರ್ಷಗಳಲ್ಲಿ ದೇಶವನ್ನು, ಜನಸಾಮಾನ್ಯರನ್ನು ಬಾಧಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಿಫಲಗೊಂಡಿರುವ ಬಿಜೆಪಿ ಕೇರಳದಲ್ಲಿ ಮಹಿಳೆಯರ ಶಬರಿಮಲೆ ಪ್ರವೇಶದ ವಿಷಯದಲ್ಲಿ ಜನರ ಧಾರ್ಮಿಕ ಭಾವನೆ ಕೆರಳಿಸುವ ಪ್ರಚಾರವನ್ನು ನಡೆಸಿದೆ. ಪಶ್ಚಿಮ ಬಂಗಾಳದಲ್ಲಿ ‘‘ಜೈ ಶ್ರೀ ರಾಮ’’ ಎಂಬ ಘೋಷಣೆ ಬಿಜೆಪಿಯ ಚುನಾವಣಾ ಪ್ರಚಾರದ ಅಸ್ತ್ರವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯ ಮಂತ್ರಿ ಆದಿತ್ಯನಾಥರಿಂದ ಪ್ರಚೋದನಕಾರಿ ಮಾತುಗಳು ಕೇಳಿ ಬರುತ್ತಿವೆ. ಹೀಗೆ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತಿದ್ದರೂ ಚುನಾವಣಾ ಆಯೋಗ ಯಾರಿಗೂ ನೋಟಿಸನ್ನು ನೀಡಿಲ್ಲ. ಕರ್ನಾಟಕವನ್ನೇ ಉದಾಹರಣೆಯಾಗಿ ತೆಗೆದುಕೊಂಡರೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸೋಮವಾರ ಮಸ್ಕಿ ಮತಕ್ಷೇತ್ರದಲ್ಲಿ ‘‘ಲಿಂಗಾಯತ ಧರ್ಮ ನನ್ನನ್ನು ಬಿಜೆಪಿ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಲಿಂಗಾಯತರು ಬಿಜೆಪಿಯ ಋಣದಲ್ಲಿರಬೇಕು’’ ಎಂದು ಹೇಳಿದ್ದಾರೆ.ಚುನಾವಣೆ ಘೋಷಣೆಯಾದ ನಂತರ ಬೆಳಗಾವಿ ಮತ್ತು ಬಸವಕಲ್ಯಾಣದ ಉಪಚುನಾವಣೆಗಳನ್ನು ಗಮನದಲ್ಲಿರಿಸಿಕೊಂಡು ಮರಾಠಾ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಚುನಾವಣಾ ಆಯೋಗಕ್ಕೆ ಇದಾವುದೂ ನೀತಿ ಸಂಹಿತೆಯ ಉಲ್ಲಂಘನೆ ಎಂದು ಅನಿಸಿಲ್ಲ.

ಚುನಾವಣಾ ಆಯೋಗ ಈಗ ಹೆಸರಿಗೆ ಮಾತ್ರ ಸ್ವಾಯತ್ತ ಸಂಸ್ಥೆಯಾಗಿ ಉಳಿದಿದೆ ಎಂಬ ಸಂದೇಹ ಯಾರಿಗಾದರೂ ಬರುತ್ತದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷ ಆಯೋಗವನ್ನು ನಿಯಂತ್ರಿಸುತ್ತಿದೆ ಎಂಬ ಆರೋಪವನ್ನು ತಳ್ಳಿ ಹಾಕಲು ಸಾಧ್ಯವಾಗುವುದಿಲ್ಲ. ಉದಾಹರಣೆಗೆ ಕೇರಳ ವಿಧಾನಸಭೆಯಿಂದ ರಾಜ್ಯಸಭೆಯ ಮೂರು ಸ್ಥಾನಗಳಿಗಾಗಿ ನಡೆಯಬೇಕಾದ ಚುನಾವಣೆಯ ಸಂಬಂಧದಲ್ಲಿ ಆಯೋಗ ನಡೆದುಕೊಂಡ ರೀತಿಯನ್ನು ಯಾರೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ರಾಜ್ಯಸಭೆ ಚುನಾವಣೆ ದಿನಾಂಕ ಪ್ರಕಟವಾದ ನಂತರ ಕೇಂದ್ರ ಸರಕಾರದಿಂದ ಪತ್ರ ಬಂದಿದೆ ಎಂದು ಚುನಾವಣಾ ಪ್ರಕ್ರಿಯೆಯನ್ನೇ ಆಯೋಗ ಅಮಾನತಿನಲ್ಲಿರಿಸಿತು. ಈ ಪ್ರಕರಣ ಈಗ ಕೇರಳ ಹೈಕೋರ್ಟ್ ಮೆಟ್ಟಿಲನ್ನು ಏರಿದೆ.

ಜಗತ್ತಿನಲ್ಲಿ ಈಗ ಇದ್ದುದರಲ್ಲಿ ಅತ್ಯುತ್ತಮವಾದ ಆಡಳಿತ ವ್ಯವಸ್ಥೆಯೆಂದರೆ ಪ್ರಜಾಪ್ರಭುತ್ವ ಎಂದು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಪ್ರಜಾಪ್ರಭುತ್ವದ ಬಗೆಗಿನ ಈ ವಿಶ್ವಾಸಾರ್ಹತೆ ಉಳಿಯಬೇಕಾದರೆ ಚುನಾವಣೆಗಳು ಪಾರದರ್ಶಕವಾಗಿ ನಡೆಯಬೇಕು.ಚುನಾವಣಾ ಆಯೋಗ ಸರಕಾರದ ಹಿಡಿತದಲ್ಲಿ ಇರಬಾರದೆಂದೇ ಅದಕ್ಕೆ ಪ್ರತ್ಯೇಕವಾದ ಸಾಂವಿಧಾನಿಕ, ಸ್ವಾಯತ್ತ ಸ್ಥಾನವನ್ನು ನೀಡಲಾಗಿದೆ. ಈ ಸಂವಿಧಾನಿಕ ಸಂಸ್ಥೆಗೆ ಇರುವ ಅಧಿಕಾರವೇನು ಮತ್ತು ಅದನ್ನು ಉಪಯೋಗಿಸಿಕೊಂಡು ಚುನಾವಣೆಗಳನ್ನು ಹೇಗೆ ನಿಷ್ಪಕ್ಷವಾಗಿ, ನ್ಯಾಯಸಮ್ಮತವಾಗಿ ನಡೆಸಬೇಕೆಂಬುದನ್ನು ಈ ಹಿಂದೆ ಇದ್ದ ಟಿ. ಎನ್. ಶೇಷನ್ ಅವರಂತಹ ಮುಖ್ಯ ಚುನಾವಣಾ ಆಯುಕ್ತರು ತೋರಿಸಿಕೊಟ್ಟಿದ್ದಾರೆ.ಈಗಿನ ಚುನಾವಣಾ ಆಯೋಗಕ್ಕೆ ಅದು ಮಾದರಿಯಾಗಬೇಕು. ಚುನಾವಣೆಗಳು ನಿಷ್ಪಕ್ಷವಾಗಿ ನಡೆಯುತ್ತಿವೆ ಎಂಬ ನಂಬಿಕೆ ಜನರಲ್ಲಿ ಮೂಡಬೇಕು. ಆದರೆ ಈಗಿನ ಚುನಾವಣಾ ಆಯೋಗ ಆ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿಲ್ಲ ಎಂಬುದು ಆತಂಕದ ಸಂಗತಿಯಾಗಿದೆ.

ದೇವರು, ಧರ್ಮದ ಹೆಸರಿನಲ್ಲಿ ಮತ ಯಾಚನೆ ಮಾಡುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ. ಆದರೆ ವಿಷಾದದ ಸಂಗತಿಯೆಂದರೆ ಸಂವಿಧಾನದ ಆಶಯಗಳನ್ನು ಗೌರವಿಸುವುದಾಗಿ ಪ್ರಮಾಣ ವಚನವನ್ನು ಸ್ವೀಕರಿಸಿ ಅಧಿಕಾರಕ್ಕೆ ಬಂದವರೇ ಸೋಲಿನ ಭೀತಿಯಿಂದ ದೇವರನ್ನು, ಧಾರ್ಮಿಕ ವಿಷಯಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಚುನಾವಣಾ ಆಯೋಗ ಮಾತ್ರ ಈ ದುರ್ಬಳಕೆಯನ್ನು ಕಂಡೂ ಕಾಣದಂತೆ ಮೌನ ವಹಿಸಿವೆ ಎಂಬುವುದು ಕಳವಳಕಾರಿ ಸಂಗತಿಯಾಗಿದೆ

ಭಾರತದ ಪ್ರಜಾಪ್ರಭುತ್ವ ಈಗ ಬಿಕ್ಕಟ್ಟಿನ ಸುಳಿಗೆ ಸಿಲುಕಿದೆ. ಜಾತ್ಯತೀತ ಶಕ್ತಿಗಳು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಕಾಪಾಡಲು ಅತ್ಯಂತ ಎಚ್ಚರದಿಂದ ಧ್ವನಿಯೆತ್ತಬೇಕಾಗಿದೆ. ಸಂವಿಧಾನ ಉಳಿದರೆ ಪ್ರಜಾಪ್ರಭುತ್ವ ಉಳಿಯುತ್ತದೆ. ಪ್ರಜಾಪ್ರಭುತ್ವ ಉಳಿದರೆ ದೇಶ ಸುರಕ್ಷಿತವಾಗಿ ಉಳಿಯುತ್ತದೆ ಎಂಬುದನ್ನು ಮರೆಯಬಾರದು. ಚುನಾವಣಾ ಆಯೋಗದ ಇತ್ತೀಚಿನ ನಡೆಯ ಬಗ್ಗೆ ವ್ಯಾಪಕ ಚರ್ಚೆ ನಡೆದು ಅದನ್ನು ಮತ್ತೆ ಹಳಿಗೆ ತರಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X