ಹವಾಮಾನ ವೈಪರೀತ್ಯ ಹಿನ್ನೆಲೆ: ಮಂಗಳೂರಿಗೆ ಬರಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಡಿಂಗ್

ಬಜ್ಪೆ : ಮಂಗಳೂರು ನಗರದಲ್ಲಿ ನಿನ್ನೆ ರಾತ್ರಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿದಿದ್ದರಿಂದ ದುಬೈನಿಂದ ಮಂಗಳೂರಿಗೆ ಬರಬೇಕಿದ್ದ ಏರ್ ಇಂಡಿಯಾ ವಿಮಾನವನ್ನು ಕೊಚ್ಚಿಯಲ್ಲಿ ಲ್ಯಾಂಡಿಂಗ್ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುಬೈನಿಂದ 118 ಪ್ರಯಾಣಿಕರನ್ನು ಕರೆತರುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಭಾರೀ ಮಳೆ ಮಧ್ಯೆ ಮಂಗಳೂರು ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಮಾಡುವುದು ಕಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಕೊಚ್ಚಿಯಲ್ಲಿ ತುರ್ತು ಲ್ಯಾಂಡ್ ಮಾಡಲಾಯಿತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Next Story





