ಆರೋಗ್ಯ ಕೇಂದ್ರಗಳ ಮೇಲ್ದರ್ಜೆ ಕರ್ನಾಟಕ ಪ್ರಥಮ: ಸಚಿವ ಸುಧಾಕರ್

ಬೆಂಗಳೂರು, ಎ.14: ಆರೋಗ್ಯ ಸೇವೆಗಳನ್ನು ಸಮುದಾಯದ ಬಾಗಿಲಿಗೆ ಕೊಂಡೊಯ್ಯಲು ಪ್ರಾಥಮಿಕ ಹಾಗೂ ಉಪಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸುವ ಕಾರ್ಯಕ್ರಮದ ಅನುಷ್ಠಾನದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನ ಪಡೆದಿದೆ. ಈ ಸಾಧನೆಗೆ ಕಾರಣರಾದ ಎಲ್ಲ ಸಿಬ್ಬಂದಿಗಳಿಗೆ ಅಭಿನಂದನೆಗಳು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
Next Story





