Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. "ನಾನೂ ಸಾರಿಗೆ ಸಂಸ್ಥೆಯ ಚಾಲಕನ ಮಗ":...

"ನಾನೂ ಸಾರಿಗೆ ಸಂಸ್ಥೆಯ ಚಾಲಕನ ಮಗ": ಮುಷ್ಕರ ನಿರತ ಸಾರಿಗೆ ನೌಕರರಿಗೆ ನಟ ಯಶ್ ಬರೆದ ಪತ್ರದಲ್ಲೇನಿದೆ?

ವಾರ್ತಾಭಾರತಿವಾರ್ತಾಭಾರತಿ15 April 2021 2:27 PM IST
share
ನಾನೂ ಸಾರಿಗೆ ಸಂಸ್ಥೆಯ ಚಾಲಕನ ಮಗ: ಮುಷ್ಕರ ನಿರತ ಸಾರಿಗೆ ನೌಕರರಿಗೆ ನಟ ಯಶ್ ಬರೆದ ಪತ್ರದಲ್ಲೇನಿದೆ?

ಬೆಂಗಳೂರು, ಎ.15: ರಾಜ್ಯ ಸಾರಿಗೆ ನೌಕರರ ವೇತನ ತಾರತಮ್ಯ ನಿವಾರಣೆ ಮಾಡುವಂತೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರೊಂದಿಗೆ ಚರ್ಚಿಸಿದ್ದೇನೆ. ಅವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಕನ್ನಡ ಚಲನಚಿತ್ರ ನಟ ಯಶ್ ಹೇಳಿದ್ದಾರೆ.

ಈ ಬಗ್ಗೆ ಗುರುವಾರ ಟ್ವಿಟರ್ ನಲ್ಲಿ ಸುದೀರ್ಘ ಪತ್ರದೊಂದಿಗೆ ಪ್ರತಿಕ್ರಿಯೆ ನೀಡಿರುವ ಯಶ್, ಸದ್ಯ ನಿಮ್ಮ ಯಶ್ ಏನೇ ಆಗಿರಬಹುದು. ಆದರೆ, ಇದಕ್ಕೂ ಮೊದಲು ನಾನು ಸಾರಿಗೆ ಸಂಸ್ಥೆಯ ಪ್ರಾಮಾಣಿಕ ಚಾಲಕನ ಪುತ್ರ ಎಂದು ಹೇಳಿಕೊಂಡಿದ್ದಾರೆ.

ಮನೆಯಲ್ಲಿ ನಾನು ತಡ ಮಾಡಿದರೆ ಪ್ರತಿದಿನ ನನ್ನ ಬಸ್ಸಿನಲ್ಲೇ ಬರುವ ಪ್ರಯಾಣಿಕರಿಗೆ ಟ್ರೈನ್ ತಪ್ಪಿ ಹೋಗುತ್ತೇನೋ, ಕಚೇರಿಗೆ ತಡವಾಗುತ್ತೇನೋ ಅಂತ ನಮ್ಮಪ್ಪ ಎಷ್ಟೋ ದಿನ ಬೆಳಗ್ಗೆ ಮನೆಯಲ್ಲಿ ತಿಂಡಿ ಕೂಡ ತಿನ್ನದೆ ಗಡಿಬಿಡಿಯಲ್ಲಿ ನಡೆಯುತ್ತಿದ್ದ ಆ ದಿನಗಳು ಈಗಲೂ ನೆನಪಾಗುತ್ತದೆ ಎಂದು ಯಶ್ ಕರ್ನಾಟಕ ರಾಜ್ಯ ಸಾರಿಗೆ ನೌಕರರ ಒಕ್ಕೂಟಕ್ಕೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಇದು ನನ್ನ ಅಪ್ಪನ ಕತೆ ಮಾತ್ರವಲ್ಲ. ಕರ್ತವ್ಯ ನಿಷ್ಠೆ ಮೆರೆಯುವ ಸಾವಿರಾರು ಸಾರಿಗೆ ನೌಕರರ ದಿನಚರಿ ಹೀಗೆ ಇರುತ್ತದೆ. ಸಾರಿಗೆ ಸಂಸ್ಥೆ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಹಾಗೂ ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿವೆ. ಆದರೆ, ನಮ್ಮ ಸಾರಿಗೆ ಸಂಸ್ಥೆ ನೌಕರರ ಸಂಬಳದ ತಾರತಮ್ಯವಿರಬಹುದು, ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು, ಓವರ್ ಡ್ಯೂಟಿಗಳಿಗಾಗಿ ನಡೆಯುವ ಜಟಾಪಟಿಗಳಿರಬಹುದು ಎಲ್ಲವನ್ನೂ ನಾನು ಹತ್ತಿರದಿಂದ ಬಲ್ಲವನು ಎಂದಿದ್ದಾರೆ.

ಸಮಾಧಾನ ವಿಷಯ ಅಂದರೆ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆ ಬಗ್ಗೆ ಇದ್ದ ಅರಿವು ಮತ್ತು ಕಳಕಳಿ, ಜತೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಮುಖ್ಯ ಬೇಡಿಕೆಯಾದ ವೇತನ ತಾರತಮ್ಯವನ್ನು ತಪ್ಪದೇ ಈಡೇರಿಸುವ ಭರವಸೆಯನ್ನು ನನಗೆ ಕೊಟ್ಟಿದ್ದು ಮತ್ತಷ್ಟು ಖುಷಿಕೊಟ್ಟಿದೆ ಎಂದಿದ್ದಾರೆ.

ಮುಕ್ತ ಮನಸ್ಸುಗಳ ಬಿಚ್ಚು ಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ. ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ. ಪ್ರೀತಿಯ ಸಾರಿಗೆ ನೌಕರರ ಕುಟುಂಬಕ್ಕೆ ನಿಮ್ಮ ಯಶ್‍ನ ನಮಸ್ಕಾರಗಳು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮೊದಲು ಸಾರಿಗೆ ನೌಕರರ ಕೂಟದ ಮುಖಂಡರು ಯಶ್ ಅವರಿಗೆ ಪತ್ರ ಬರೆದು, ನಿಮ್ಮ ತಂದೆ ಸಾರಿಗೆ ನೌಕರರಾಗಿದ್ದರು. ನಿಮಗೆ ಅವರ ಕಷ್ಟದ ಅರಿವಿದೆ. ಮುಷ್ಕರಕ್ಕೆ ನಿಮ್ಮ ಬೆಂಬಲ ನೀಡಿ ಎಂದು ಮನವಿ ಮಾಡಿದ್ದರು.

ಸಮಸ್ಯೆ ಮನವರಿಕೆಗೆ ಯತ್ನ

ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್‍ಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮವರ್ಗದ ಜನರ ಅಳಲು ಈ ಎರಡೂ ನನ್ನನ್ನು ಬಹುವಾಗಿ ಕಾಡುತ್ತಿವೆ. ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ, ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದೇನೆ.

-ಯಶ್, ಕನ್ನಡ ಚಲನಚಿತ್ರ ನಟ

ಯಶ್ ಅವರ ಪತ್ರ ....

share
ವಾರ್ತಾಭಾರತಿ
ವಾರ್ತಾಭಾರತಿ
Next Story
X